ಮಂಗಳೂರು | ಭಾರೀ ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿತ; ಮೂವರು ಸಾವು

Date:

ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಯಿಂದ ಸಂಭವಿಸಿದ ಭೀಕರ ದುರಂತದಲ್ಲಿ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ. ಭಾರೀ ಮಳೆಯಿಂದ ತಡೆಗೋಡೆ ಕುಸಿದು ಅದರ ಅವಶೇಷಗಳು ಮನೆಯ ಮೇಲ್ಛಾವಣಿಗೆ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ.

- Advertisement -
1011522216

ಘಟನೆ ನಡೆದ ವೇಳೆ ಮನೆಯಲ್ಲಿ ಒಟ್ಟು ಆರು ಮಂದಿ ಇದ್ದರು. ಅವರಲ್ಲಿ ಮೂವರು ಮೃತಪಟ್ಟಿದ್ದು, ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಎನ್‌ಡಿಆರ್‌ಎಫ್, ಅಗ್ನಿಶಾಮಕ ಹಾಗೂ ತುರ್ತು ಸೇವಾ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮೇಲಕ್ಕೆತ್ತುವ ಕಾರ್ಯವೂ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...
1011522136

ಜಿಲ್ಲಾಧಿಕಾರಿ ದರ್ಶನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಈ ದುರಂತದ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯ ವಿವಿಧ ಸಭೆಗಳಲ್ಲಿ ಭಾಗವಹಿಸಲು ದೆಹಲಿಯಲ್ಲಿರುವ ಅವರು, ದುರ್ಘಟನೆಯ ಮಾಹಿತಿ ತಿಳಿದ ತಕ್ಷಣ ಮಂಗಳೂರಿಗೆ ಮರಳಲು ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಸಚಿವ ಖಾದರ್, ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಹಾಗೂ ಮೃತರ ಕುಟುಂಬಗಳಿಗೆ ಪರಿಹಾರ ಮೊತ್ತವನ್ನು ತಕ್ಷಣವೇ ವಿತರಿಸುವಂತೆ ಸೂಚನೆ ನೀಡಿದ್ದಾರೆ. ಈ ದುರಂತದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಪರಿಸ್ಥಿತಿಯನ್ನು ಜಿಲ್ಲಾಡಳಿತ ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...