ಮಂಗಳೂರು | ಲೈಂಗಿಕ ಕಿರುಕುಳ ಆರೋಪ: ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ತನಿಖೆಗೆ ಆದೇಶ

Date:

ಮೂಡುಬಿದಿರೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತ ಆರೋಪಿಯ ಪತ್ನಿಯು ಠಾಣೆಯ ಇನ್ ಸ್ಪೆಕ್ಟರ್ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಉತ್ತರ ಉಪವಿಭಾಗ (ಪಣಂಬೂರು)ದ ಎಸಿಪಿಗೆ ಸೂಚಿಸಿದ್ದಾರೆ.

- Advertisement -

ಹಣ ಲಪಟಾಯಿಸಿರುವ ಕುರಿತು ವ್ಯಕ್ತಿಯೊಬ್ಬನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ನಿನ್ನ ಪತಿಯನ್ನು ಬಿಡುಗಡೆಗೊಳಿಸುತ್ತೇನೆ ಹಾಗೂ 25 ಲಕ್ಷ ರೂ. ನೀಡದಿದ್ದರೆ ಪತಿಯ ವಿರುದ್ಧ ರೌಡಿಶೀಟ್ ತೆರೆಯುವುದಾಗಿ ಮೂಡುಬಿದಿರೆ ಠಾಣೆಯ ಇನ್ ಸ್ಪೆಕ್ಟರ್ ಸಂದೇಶ್ ಬಿ.ಜಿ. ಬೆದರಿಕೆ ಒಡ್ಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿರುವ ಬಗ್ಗೆ ಕೆಲವು ಟಿವಿ ಮಾಧ್ಯಮಗಳಲ್ಲಿ ಸೋಮವಾರ ಸುದ್ದಿ ಪ್ರಸಾರವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಗಮನಿಸಿದ ರಾಜ್ಯ ಮಹಿಳಾ ಆಯೋಗವು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಯಾವುದೇ ಮಹಿಳೆ ತನಗೆ ದೂರು ನೀಡಿಲ್ಲ. ಯಾರೊಬ್ಬ ಸಂತ್ರಸ್ತ ದೂರು ನೀಡಿದರೂ ಆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ನಿರೀಕ್ಷಕರ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಪಣಂಬೂರು ಎಸಿಪಿ ಶ್ರೀಕಾಂತ್ ಅವರಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮೂಡುಬಿದಿರೆ ಪೊಲೀಸ್ ನಿರೀಕ್ಷಕರ ವಿರುದ್ಧ ಆರೋಪ ಮಾಡಿರುವ ಮಹಿಳೆ ಹಾಗೂ ಆಕೆಯ ಸಹೋದರಿ ನಡುವೆ ಮನಸ್ತಾಪವಿದೆ. ಈ ಪ್ರಕರಣದಲ್ಲಿ ಪೊಲೀಸ್ ನಿರೀಕ್ಷಕರು ಪಕ್ಷಪಾತ ಎಸಗಿ ಆಕೆಯ ಸಹೋದರಿ ಪರ ನಿಂತಿದ್ದರು ಎಂದು ದೂರುದಾರ ಮಹಿಳೆ ಆರೋಪಿಸಿದ್ದರು. ಇದರ ವಿಚಾರಣೆ ನ್ಯಾಯಾಲಯದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ನಿರೀಕ್ಷಕರು ಕಾನೂನು ಬದ್ಧವಾಗಿ ಕೆಲಸ ಮಾಡಿದ್ದರು. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಂಡಿರುವುದಿಲ್ಲ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ತನ್ನನ್ನು ಭೇಟಿಯಾದ ಮಹಿಳೆಯು ಪೊಲೀಸ್ ನಿರೀಕ್ಷಕರು ತಡೆಗೋಡೆ ಹಾರಿರುವ ವೀಡಿಯೊ ಒಂದನ್ನು ತೋರಿಸಿದ್ದರು. ಆದರೆ, ಆ ಮನೆಯ ಮಾಲಕರು ದೂರು ನೀಡದ ಹೊರತು ಈ ಬಗ್ಗೆ ಕ್ರಮ ವಹಿಸಲು ಸಾಧ್ಯವಿಲ್ಲ. ಮಹಿಳೆ ಯಾವುದೇ ಆಡಿಯೊ ದಾಖಲೆಗಳನ್ನು ನೀಡಿಲ್ಲ ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...