ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

Date:

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಮುಲ್ಕಿ ಮೂಲದ ಮನೀಶ್ ಕರ್ಕಡ (23) ಅವರ ಕುಟುಂಬಕ್ಕೆ ಒಟ್ಟು ₹1.20 ಕೋಟಿ ಪರಿಹಾರ ನೀಡುವುದಾಗಿ ಎಂಆರ್‌ಪಿಎಲ್ ಪ್ರಕಟಿಸಿದೆ.

- Advertisement -

ಮನೀಶ್ ಕರ್ಕಡ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಎಂಆರ್‌ಪಿಎಲ್ ಆಡಳಿತ ಮಂಡಳಿ, ಕುಟುಂಬದ ಕಷ್ಟದ ಸಂದರ್ಭದಲ್ಲಿ ಅವರೊಂದಿಗೆ ಇರುವುದಾಗಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಮೃತರ ಕುಟುಂಬಕ್ಕೆ ಎಂಆರ್‌ಪಿಎಲ್‌ನಿಂದ ₹90 ಲಕ್ಷ ಆರ್ಥಿಕ ನೆರವು, ಗ್ರೂಪ್ ಟರ್ಮ್ ಲೈಫ್ ಇನ್ಶೂರೆನ್ಸ್ ಅಡಿಯಲ್ಲಿ ₹10 ಲಕ್ಷ ಹಾಗೂ ವರ್ಕ್‌ಮೆನ್ ಕಾಂಪೆನ್ಸೇಷನ್ ಪಾಲಿಸಿ ಅಡಿಯಲ್ಲಿ ಸುಮಾರು ₹20 ಲಕ್ಷ ಸೇರಿದಂತೆ ಒಟ್ಟು ಸುಮಾರು ₹1.20 ಕೋಟಿ ಪರಿಹಾರ ಒದಗಿಸಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಇದೇ ವೇಳೆ, ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಮೆಡಿಕ್ಲೇಮ್ ವಿಮೆ ಒದಗಿಸುವ ಕುರಿತು ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಸಂಸದರು ಹಾಗೂ ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿದ ಬಳಿಕ ಈ ವ್ಯವಸ್ಥೆಯನ್ನು ಅಂತಿಮಗೊಳಿಸಲಾಗುವುದು. ಪ್ರಸ್ತಾವಿತ ಮೆಡಿಕ್ಲೇಮ್ ವ್ಯವಸ್ಥೆಯ ಪ್ರಕ್ರಿಯೆಯನ್ನು ಸುಮಾರು ನಾಲ್ಕು ವಾರಗಳಲ್ಲಿ ಪೂರ್ಣಗೊಳಿಸುವ ನಿರೀಕ್ಷೆಯಿದೆ ಎಂದು ಎಂಆರ್‌ಪಿಎಲ್ ತಿಳಿಸಿದೆ.

ಅಮೂಲ್ಯ ಜೀವದ ನಷ್ಟವನ್ನು ಯಾವುದೇ ಆರ್ಥಿಕ ನೆರವಿನಿಂದ ಭರಿಸಲು ಸಾಧ್ಯವಿಲ್ಲವಾದರೂ, ಬಾಧಿತ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ನೆರವನ್ನು ಮುಂದುವರಿಸುವುದಾಗಿ ಎಂಆರ್‌ಪಿಎಲ್ ಭರವಸೆ ನೀಡಿದೆ. ಸಂಸ್ಥೆಯ ಎಲ್ಲ ಸಿಬ್ಬಂದಿಯ ಸುರಕ್ಷತೆ, ಆರೋಗ್ಯ ಮತ್ತು ಕಲ್ಯಾಣಕ್ಕೆ ಬದ್ಧವಾಗಿರುವುದಾಗಿಯೂ ಪ್ರಕಟನೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...

ಶಿರಸಿ | ನಾಳೆ ‘ಮನಸಿರಿ’ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ

ಶಿರಸಿ: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಈ ಬಗ್ಗೆ...