ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

Date:

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ ಹಳೆಯಂಗಡಿ ನಿವಾಸಿ ಯುವಕ ಮನೀಶ್ ಕರ್ಕಡ ಅವರ ಮನೆಗೆ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

- Advertisement -

ಬಳಿಕ ಸ್ಫೋಟದಿಂದ ಹಾನಿಗೊಳಗಾದ ಕಳವಾರು ಸಂತ ಜೋಸೇಫರ ಚರ್ಚ್‌ಗೆ ಭೇಟಿ ನೀಡಿದ ಅವರು, ಚರ್ಚಿನ ಧರ್ಮಗುರು ವಂ. ಮೈಕಲ್ ಅವರೊಂದಿಗೆ ಮಾತನಾಡಿ ಘಟನೆಯಿಂದ ಚರ್ಚ್‌ಗೆ ಉಂಟಾಗಿರುವ ಹಾನಿ ಹಾಗೂ ನಷ್ಟದ ಕುರಿತು ಮಾಹಿತಿ ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸಂದರ್ಭದಲ್ಲಿ ಮಾತನಾಡಿದ ಪ್ರಶಾಂತ್ ಜತ್ತನ್ನ, ಎಂಆರ್‌ಪಿಎಲ್‌ನ ಮೂರನೇ ಘಟಕದಲ್ಲಿ ಕಳೆದ ಬುಧವಾರ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮನೀಶ್ ಕರ್ಕಡ ಮೃತಪಟ್ಟಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಕುಟುಂಬದ ನೋವಿನಲ್ಲಿ ತಾವು ಭಾಗಿಯಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

WhatsApp Image 2026 10 03 at 10.06.46 PM

ಘಟನೆಗೆ ಸಂಬಂಧಿಸಿದಂತೆ ಸುರತ್ಕಲ್ ಶಾಸಕ ಡಾ. ಭರತ್ ಶೆಟ್ಟಿ ನೀಡಿರುವ ಹೇಳಿಕೆಯಿಂದ ಮನೀಶ್ ಕುಟುಂಬಸ್ಥರು ಹಾಗೂ ಸಮುದಾಯದವರಿಗೆ ನೋವುಂಟಾಗಿದೆ ಎಂದು ಅವರು ಆರೋಪಿಸಿದರು. ಘಟನೆ ನಡೆದ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಭರತ್ ಶೆಟ್ಟಿ, ಸೂಕ್ತ ಮಾಹಿತಿ ಪಡೆಯದೆ ಯಾರಿಗೂ ಪ್ರಾಣಹಾನಿಯಾಗಿಲ್ಲ, ಯಾರೂ ಗಾಬರಿಯಾಗಬೇಕಿಲ್ಲ ಎಂಬ ರೀತಿಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ಸರಿಯಲ್ಲ. ಘಟನೆಯ ಸಂಪೂರ್ಣ ವಿವರ ತಿಳಿದುಕೊಳ್ಳದೆ ನೀಡಿದ ಇಂತಹ ಹೇಳಿಕೆ ಮೃತ ಯುವಕನ ಕುಟುಂಬಸ್ಥರು ಹಾಗೂ ಅವರ ಅಭಿಮಾನಿಗಳಿಗೆ ನೋವುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಶಾಸಕರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಸ್ಫೋಟದ ಪರಿಣಾಮ ಕಳವಾರು ಸಂತ ಜೋಸೇಫರ ಚರ್ಚ್ ಸೇರಿದಂತೆ ಮೂರು ಗ್ರಾಮಗಳ 54 ಮನೆಗಳು ಹಾಗೂ 8 ಪ್ರಾರ್ಥನಾ ಕೇಂದ್ರಗಳಿಗೆ ಹಾನಿಯಾಗಿರುವುದಾಗಿ ಪ್ರಶಾಂತ್ ಜತ್ತನ್ನ ತಿಳಿಸಿದರು. ಚರ್ಚಿನ ಹಂಚು, ಕಿಟಕಿ ಗಾಜು ಸೇರಿದಂತೆ ಹಲವು ಭಾಗಗಳು ಹಾನಿಗೊಳಗಾಗಿದ್ದು, ಯಾವುದೇ ಆದಾಯದ ಮೂಲವಿಲ್ಲದ ಚರ್ಚ್‌ಗೆ ದುರಸ್ತಿ ಕಾರ್ಯಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಘಟನೆ ನಡೆದ ಬಳಿಕ ಎಂಆರ್‌ಪಿಎಲ್ ಆಡಳಿತ, ಸ್ಥಳೀಯ ಶಾಸಕರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಷ್ಟದ ಅಂದಾಜು ನಡೆಸದಿರುವುದು ಖಂಡನೀಯ ಎಂದು ಅವರು ಹೇಳಿದರು. ಕೈಗಾರಿಕಾ ಅಭಿವೃದ್ಧಿಯ ದೃಷ್ಟಿಯಿಂದ ಬೃಹತ್ ಕೈಗಾರಿಕೆಗಳಿಗೆ ಅವಕಾಶ ನೀಡಲಾಗಿದ್ದು, ಅವುಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಕಂಪೆನಿ ಆಡಳಿತದ ಜವಾಬ್ದಾರಿಯಾಗಿದೆ. ಭಾರೀ ಸ್ಫೋಟದಿಂದಾಗಿ ಸುತ್ತಮುತ್ತಲಿನ ಪ್ರದೇಶಗಳಿಗೆ ಉಂಟಾಗಿರುವ ಹಾನಿಯ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಕಳವಾರು ಚರ್ಚ್ ಸೇರಿದಂತೆ ಮೂರು ಗ್ರಾಮಗಳ 54 ಮನೆಗಳು ಹಾಗೂ 8 ಪ್ರಾರ್ಥನಾ ಕೇಂದ್ರಗಳಿಗೆ ಉಂಟಾಗಿರುವ ಹಾನಿಯನ್ನು ಸಮಗ್ರವಾಗಿ ಪರಿಶೀಲಿಸಿ, ಎಂಆರ್‌ಪಿಎಲ್ ಸಂಸ್ಥೆಯಿಂದಲೇ ಸೂಕ್ತ ನಷ್ಟ ಪರಿಹಾರ ಕೊಡಿಸಬೇಕು. ಮೃತ ಮನೀಶ್ ಕರ್ಕಡ ಅವರ ಕುಟುಂಬಕ್ಕೂ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರಶಾಂತ್ ಜತ್ತನ್ನ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಸಿಎಸ್‌ಐ ಅಮನ್ ಮೆಮೋರಿಯಲ್ ಚರ್ಚಿನ ಸಭಾಪಾಲಕರಾದ ವಂ. ಅಮೃತ್ ರಾಜ್ ಕೊಡೆ, ಸಿಎಸ್‌ಐ ಸದರ್ನ್ ಡಯಾಸಿಸ್ ಕಾರ್ಯಕಾರಿ ಸಮಿತಿ ಸದಸ್ಯ ರಾಹುಲ್ ಕರ್ಕಡ, ಯೂತ್ ಫೆಲೋಶಿಪ್ ಕಾರ್ಯದರ್ಶಿ ಸುವೀನ್ ಪಾಲನ್, ಭಾರತೀಯ ಕ್ರೈಸ್ತ ಒಕ್ಕೂಟದ ಗ್ಲಾಡ್ಸನ್ ಕರ್ಕಡ, ಪೀಟರ್ ದಾಂತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ಸುಳ್ಯ | ಎಡಮಂಗಲದಲ್ಲಿ ʼಪ್ರಜಾಧ್ವನಿ ಕರ್ನಾಟಕʼ ಸಹಯೋಗದಲ್ಲಿ ಗಾಂಧಿ ಜಯಂತಿ

ಪ್ರಜಾಧ್ವನಿ ಕರ್ನಾಟಕ ಮತ್ತು ಸರಕಾರಿ ಪ್ರೌಢಶಾಲೆ ಎಡಮಂಗಲ ಇವುಗಳ ಸಹಯೋಗದಲ್ಲಿ ಭಾರತದ...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...