ಮಂಗಳೂರು | SIR ಕರ್ತವ್ಯ ನಿರತ BLO ಗೆ ಹೃದಯಾಘಾತ ಆಸ್ಪತ್ರೆಗೆ ದಾಖಲಾಗಿದ್ದರೂ ಮತದಾರರಿಗೆ ಸೂಚನೆ ನೀಡುತ್ತಿದ್ದ ಅಧ್ಯಾಪಕ

Date:

ರಾಜ್ಯದಲ್ಲಿ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (SIR) ಈ ತಿಂಗಳು ಆರಂಭವಾದರೂ ಅದರ ಪೂರ್ವ ಕೆಲಸಗಳು ಆರಂಭವಾಗಿ ಹಲವು ತಿಂಗಳುಗಳು ಕಳೆದಿದ್ದು, ರಾಜ್ಯದಾದ್ಯಂತ BLOಗಳು ಇದರ ಹಿಂದೆ ತಮ್ಮ ನಿತ್ಯದ ಕರ್ತವ್ಯಗಳ ಜೊತೆಗೆ ಹೆಚ್ಚುವರಿ ಹೊಣೆಗಾರಿಕೆಯನ್ನು ನಿರ್ವಹಿಸುತ್ತಿದ್ದಾರೆ. ಶಾಲಾ ಶಿಕ್ಷಕರು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ದಿನನಿತ್ಯದ ಕೆಲಸದ ಒತ್ತಡದ ನಡುವೆಯೂ SIR ಸಂಬಂಧಿತ ಅರ್ಜಿಗಳ ಪರಿಶೀಲನೆ, ಅಪ್‌ಲೋಡ್ ಹಾಗೂ ಮತದಾರರಿಗೆ ಮಾಹಿತಿ ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

- Advertisement -

ಬಂಟ್ವಾಳ ಪುರಸಭೆ ವ್ಯಾಪ್ತಿಯ ಪಾಣೆಮಂಗಳೂರು 23ನೇ ವಾರ್ಡ್‌ನ BLO ಆಗಿರುವ ನೂರುದ್ದೀನ್ ಜಿ.ಎಂ., ದಾರುಲ್ ಇಸ್ಲಾಂ ಅನುದಾನಿತ ಶಾಲೆಯ ಶಿಕ್ಷಕರಾಗಿದ್ದು, ಶಾಲಾ ಕರ್ತವ್ಯ ಮುಗಿದ ಬಳಿಕ ಪ್ರತಿದಿನ ರಾತ್ರಿ ತಡರಾತ್ರಿವರೆಗೆ ಮನೆಯಲ್ಲಿ ಕುಳಿತು SIR ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ನಿರಂತರ ದೈಹಿಕ ಹಾಗೂ ಮಾನಸಿಕ ಒತ್ತಡದ ನಡುವೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಅವರ ಹೃದಯದ ರಕ್ತನಾಳಗಳಲ್ಲಿ ಮೂರು ಬ್ಲಾಕ್‌ಗಳು ಇರುವುದಾಗಿ ತಿಳಿದುಬಂದಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

ಆಸ್ಪತ್ರೆಯ ಹಾಸಿಗೆಯಲ್ಲಿದ್ದರೂ ತಮ್ಮ ವ್ಯಾಪ್ತಿಯ ಮತದಾರರಿಗೆ SIR ಸಂಬಂಧಿತ ಮಾಹಿತಿಯನ್ನು ನೀಡಿ, ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ದೂರವಾಣಿ ಮೂಲಕ ಸೂಚನೆ ನೀಡುತ್ತಿರುವುದು ಅವರ ಕರ್ತವ್ಯನಿಷ್ಠೆಗೆ ಸಾಕ್ಷಿಯಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

SIR ಪ್ರಕ್ರಿಯೆಯಲ್ಲಿ ತೊಡಗಿರುವ BLOಗಳು ಎದುರಿಸುತ್ತಿರುವ ಕೆಲಸದ ಒತ್ತಡವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹೆಚ್ಚುವರಿ ಸಿಬ್ಬಂದಿ ನಿಯೋಜನೆ, ಅಗತ್ಯ ವಿಶ್ರಾಂತಿ, ವೈದ್ಯಕೀಯ ನೆರವು ಹಾಗೂ ಸೂಕ್ತ ಭದ್ರತಾ ಕ್ರಮಗಳನ್ನು ಒದಗಿಸುವ ಮೂಲಕ BLOಗಳ ಆರೋಗ್ಯ ಮತ್ತು ಕಲ್ಯಾಣವನ್ನು ಕಾಪಾಡುವ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ನೂರುದ್ದೀನ್ GM ಅವರು ಹಲವು ದಿನಗಳಿಂದ SIR ಕೆಲಸದಲ್ಲಿ ನಿರತರಾಗಿದ್ದು ಎಲ್ಲಾ ಮನೆಗೆಳಿಗೆ ಭೇಟಿ ನೀಡಿ ತನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ, ಇದೀಗ ಅವರ ಅನಾರೋಗ್ಯ ಪೀಡಿತರಾಗಿದ್ದು ನಮ್ಮ ವಾರ್ಡಿನ SIR ಕೆಲಸಕ್ಕೆ ಅಡಚಣೆ ಯಾವುದೇ ತೊಂದರೆ ಆಗದಂತೆ ಸರಕಾರ ಕ್ರಮ ಕೈಗೊಳ್ಳಬೇಕು, ಮತ್ತು ನಮ್ಮ BLO ಅವರ ವೈದ್ಯಕೀಯ ವೆಚ್ಚವನ್ನು ಸರಕರವೇ ಭರಿಸಿ ಅವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯ ಪುರಸಭಾ ಸದಸ್ಯ ಇದ್ರಿಸ್ ಪಿಜೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...