ಮಂಗಳೂರ ಸಮಾಚಾರದ ಕೊಡುಗೆ ಚಾರಿತ್ರಿಕ : ಎಂ.ಎ‌.ಗಫೂರ್

Date:

ಕನ್ನಡ ಮಾಧ್ಯಮ ಕ್ಷೇತ್ರಕ್ಕೆ ಬುನಾದಿ ಹಾಕಿದ ಕನ್ನಡದ ಮೊದಲ ಪತ್ರಿಕೆ ‘ಮಂಗಳೂರ ಸಮಾಚಾರ’ ಪತ್ರಿಕೆ ಹಾಗೂ ಆ ಪತ್ರಿಕೆಯ ಸಂಪಾದಕರಾದ ಹರ್ಮನ್ ಮೊಗ್ಲಿಂಗ್ ಅವರ ಕೊಡುಗೆ ಚಾರಿತ್ರಿಕ ವಾದದ್ದು ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಅವರು ಹೇಳಿದರು.

- Advertisement -

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಆವರಣದಲ್ಲಿ ಪತ್ರಿಕಾ ದಿನಾಚರಣೆ ಪ್ರಯುಕ್ತ ‘ಮಂಗಳೂರ ಸಮಾಚಾರ’ ಪತ್ರಿಕೆಯ ಸಂಪಾದಕ ಡಾ.‌ಹರ್ಮನ್ ಮೋಗ್ಲಿಂಗ್ ರವರ ಪ್ರತಿಮೆಗೆ ಹಾರಾರ್ಪಣೆ ಮಾಡಿ ಅವರು ಮಾತನಾಡಿದರು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಮೋಗ್ಲಿಂಗ್ ಅವರು ಜೈಮಿನಿ ಭಾರತ, ಬಸವ ಪುರಾಣ, ದಾಸ ಸಾಹಿತ್ಯವನ್ನು ಸಂಪಾದಿಸಿ ಪ್ರಕಟಿಸುವ ಮೂಲಕ ಮಾಧ್ಯಮ ಕ್ಷೇತ್ರದ ಜೊತೆಗೆ ಕನ್ನಡ ಸಾಹಿತ್ಯ ಲೋಕಕ್ಕೆ ಅಪೂರ್ವ ಕೊಡುಗೆಗಳನ್ನು ನೀಡಿದವರು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜ್ ಪ್ರಾಂಶುಪಾಲರಾದ ಡಾ.ಎಚ್.ಎಂ.ವಾಟ್ಸನ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ರೈ ಪಿ.ಬಿ., ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಮಾತನಾಡಿದರು.

ಮಂಗಳೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿಪ್ರಕಾಶ್ ಪುಣಚ, ಕೋಶಾಧಿಕಾರಿ ಕೆನ್ಯೂಟ್ ಪಿಂಟೋ, ಮಂಗಳೂರು ಪ್ರೆಸ್ ಕ್ಲಬ್ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪತ್ರಕರ್ತರಾದ ಡೊನಾಲ್ಡ್‌ ಪಿರೇರಾ, ಎಡ್ವರ್ಡ್ ಲೋಬೋ, ಶಾರುಖ್, ಹಮೀದ್ ವಿಟ್ಲ ಸೇರಿದಂತೆ ಥಿಯೋಲೋಜಿಕಲ್ ಸಂಸ್ಥೆಯ ಸಂಶೋಧನಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾಧ್ಯಕ್ಷ‌ ಈಶ್ವರ ವಾರಣಾಶಿ ಸ್ವಾಗತಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...