ಮಂಗಳೂರು | SIR ರದ್ದತಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮನವಿ

Date:

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಜನವರಿ 2025ರ ಮತದಾರರ ಪಟ್ಟಿಗಳನ್ನು ಮರುಸ್ಥಾಪಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಜಾಪ್ರಭುತ್ವ ಉಳಿಸಿ ಆಂದೋಲನ–ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

- Advertisement -

SIR ಪ್ರಕ್ರಿಯೆಯಿಂದ ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಅಳಿಸಲ್ಪಡುವ ಆತಂಕವಿದ್ದು, ಈ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಕಾನೂನುಬದ್ಧತೆಯ ಕುರಿತು ಗಂಭೀರ ಪ್ರಶ್ನೆಗಳು ಎದುರಾಗಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನಕ್ಕೆ 77 ವರ್ಷ | ಸಂವಿಧಾನ ಸೋತಿದೆಯೇ?, ಅನುಷ್ಠಾನದಲ್ಲಿ...

26 ನವೆಂಬರ್ 1949. ಭಾರತದ ಇತಿಹಾಸದಲ್ಲಿ ಇದೊಂದು ಮಹತ್ವದ ಐತಿಹಾಸಿಕ ದಿನ. ಶತಮಾನಗಳ ಸಾಮಾಜಿಕ ಅಸಮಾನತೆ, ಶೋಷಣೆ, ದಮನ ಮತ್ತು ಅನ್ಯಾಯದ ವಿರುದ್ಧ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಆಧಾರದಲ್ಲಿ ಹೊಸ...

ಪಂಜಾಬ್ ಚುನಾವಣೆ  | ‘ಎಎಪಿ’ಗೆ ಅಳಿವು-ಉಳಿವಿನ ಕದನ; ಹಳೆಯ...

ಮುಂದಿನ ವರ್ಷದ ಆರಂಭದಲ್ಲಿ, ಅಂದರೆ 2027ರ ಫೆಬ್ರವರಿಯಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ ) ಪಾಲಿಗೆ ಅಕ್ಷರಶಃ 'ಸಾವು-ಬದುಕಿನ' ಪ್ರಶ್ನೆಯಾಗಿ ಪರಿಣಮಿಸಿದೆ. ರಾಷ್ಟ್ರ ರಾಜಕಾರಣದಲ್ಲಿ ತನ್ನ...

‘ಬಿಸ್ಲೆರಿ’ ವಿರುದ್ಧದ ಕ್ರಮಕ್ಕೂ ನೀರು ಮಾರುಕಟ್ಟಗೆ ‘ಅಂಬಾನಿ’ ಪ್ರವೇಶಕ್ಕೂ...

ಭಾರತದ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾರುಕಟ್ಟೆಯಲ್ಲಿ ಸುಮಾರು 35ರಿಂದ 36%ರಷ್ಟು ಮಾರುಕಟ್ಟೆ ಪಾಲನ್ನು ಬಿಸ್ಲೆರಿ ಹೊಂದಿದೆ. ಬಿಸ್ಲೆರಿ ನೀರಿನ ಸಂಸ್ಥೆ ‘ಬಿಸ್ಲೆರಿ ಇಂಟರ್‌ನ್ಯಾಷನಲ್ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು...

ಕರ್ನಾಟಕದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಜನವರಿ 2025ರಲ್ಲಿ ಇದ್ದ ಮತದಾರರ ಪಟ್ಟಿಗಳನ್ನು ಮರುಸ್ಥಾಪಿಸಿ, ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಫಾರಂ 7ರ ದುರುಪಯೋಗದ ಆರೋಪ

ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಹೆಸರುಗಳನ್ನು ಅಳಿಸಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದ್ದು, ಬೀದಿ ಬದಿ ವ್ಯಾಪಾರಿಗಳು, ವಲಸೆ ಕಾರ್ಮಿಕರು, ಒಂಟಿ ಮಹಿಳೆಯರು, LGBTQIA ಸಮುದಾಯದವರು, ದಲಿತರು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರು ಸೇರಿದಂತೆ ದುರ್ಬಲ ವರ್ಗಗಳ ಮತದಾನದ ಹಕ್ಕಿಗೆ ಧಕ್ಕೆಯಾಗುವ ಆತಂಕ ವ್ಯಕ್ತಪಡಿಸಲಾಗಿದೆ. ಅಳಿಸಲಾದ ಹೆಸರುಗಳನ್ನು ಫಾರಂ 6ರ ಮೂಲಕ ಮರುಸೇರ್ಪಡೆಗೊಳಿಸುವ ಪ್ರಕ್ರಿಯೆಯೂ ಸಮರ್ಪಕವಾಗಿಲ್ಲ ಎಂದು ದೂರಲಾಗಿದೆ.

ಅರ್ಹ ಮತದಾರರ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಫಾರಂ 7 ಅನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಇದರಿಂದ ಮುಸ್ಲಿಮರು ಮತ್ತು ದಲಿತರನ್ನು ಗುರಿಯಾಗಿಸಿಕೊಂಡು ರಾಜಕೀಯ ಪ್ರೇರಿತವಾಗಿ ಹೆಸರುಗಳನ್ನು ಅಳಿಸುವ ಸಾಧ್ಯತೆಗಳಿವೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಫಾರಂ 6ರಲ್ಲಿ ಕಾನೂನುಬಾಹಿರ ಬದಲಾವಣೆಗಳನ್ನು ಮಾಡಲಾಗಿದೆ ಎಂಬ ಆರೋಪವನ್ನೂ ಉಲ್ಲೇಖಿಸಿರುವ ಸಂಘಟನೆಗಳು, ಚುನಾವಣಾ ಆಯೋಗದ ಸ್ವಾಯತ್ತತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಕುರಿತು ಪ್ರಶ್ನೆಗಳನ್ನು ಎತ್ತಿವೆ. ದಾಖಲೆಗಳ ಕೊರತೆ, ವಲಸೆ ಹಾಗೂ ಹೆಸರುಗಳಲ್ಲಿನ ವ್ಯತ್ಯಾಸಗಳಿಂದ ಅಂಚಿನಲ್ಲಿರುವ ಸಮುದಾಯಗಳು ಮತದಾರರ ಪಟ್ಟಿಯಿಂದ ಹೊರಗುಳಿಯುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿವೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು. ಭವಿಷ್ಯದಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆಯನ್ನು ಪಾರದರ್ಶಕ, ಕಾನೂನುಬದ್ಧ ಮತ್ತು ಸಾರ್ವಜನಿಕ ಹೊಣೆಗಾರಿಕೆಗೆ ಒಳಪಡುವ ರೀತಿಯಲ್ಲಿ ನಡೆಸಬೇಕು. ಹೆಸರುಗಳ ಅಳಿಸುವಿಕೆ ಮತ್ತು ಆಕ್ಷೇಪಣೆ ಸಲ್ಲಿಕೆ ಪ್ರಕ್ರಿಯೆಯ ದುರುಪಯೋಗ ತಡೆಯಲು ಸೂಕ್ತ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಈ ಕ್ರಮಗಳನ್ನು ಕೈಗೊಳ್ಳಲು ವಿಫಲರಾದರೆ ಅವರು ಕೂಡ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ಉಳಿಸಿ ಆಂದೋಲನದ ಜಿಲ್ಲಾಧ್ಯಕ್ಷ ಫಾ. ವಿನಯ್ ಮಸ್ಕರೇನಸ್, ಸಿಪಿಐ(ಎಂಎಲ್) ಮುಖಂಡ ರಾಮಣ್ಣ ವಿಟ್ಲ, ವೆಲ್ಫೇರ್ ಪಾರ್ಟಿ ಜಿಲ್ಲಾ ಮುಖಂಡರಾದ ಮುನೀರ್ ಪದ್ರೆಂಗಿ ಮತ್ತು ಮುಹಮ್ಮದ್ ಸೈಫ್, ಎಡಿಪಿಐ ಜಿಲ್ಲಾ ಮುಖಂಡ ಅನ್ವರ್ ಸಾದತ್, ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ನೀತು ಡಿಸೋಜ, ಜಮಾಅತೆ ಇಸ್ಲಾಮೀ ಹಿಂದ್ ಮುಖಂಡ ಅಮೀನ್ ಅಹ್ಸನ್, ವೈಆರ್‌ಎ ಜಿಲ್ಲಾ ನಾಯಕ ನ್ಯಾಯವಾದಿ ಲುಕ್ಮಾನ್ ನೆಲ್ಯಾಡಿ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಹಾಲುಣಿಸುವ ತಾಯಂದಿರಿಗೆ ಉಚಿತ ಪೌಷ್ಟಿಕಾಂಶ ವಿತರಣೆ ಯೋಜನೆಗೆ ಸಚಿವ ಯು.ಟಿ. ಖಾದರ್ ಚಾಲನೆ

ತಾಯಿ ಮತ್ತು ಮಗುವಿನ ಆರೋಗ್ಯವನ್ನು ಬಲಪಡಿಸುವ ಉದ್ದೇಶದಿಂದ ಶ್ರೀ ಸತ್ಯಸಾಯಿ ಅನ್ನಪೂರ್ಣ...

ಕೋಲಾರ | ಬೇಡಿಕೆ ಈಡೇರಿಸುವವರೆಗೆ ಕಂಪನಿಗಳಿಗೆ ಕೋಳಿ ಪೂರೈಕೆ ಸ್ಥಗಿತ: ಸಾಕಾಣಿಕೆದಾರರ ನಿರ್ಧಾರ

ಕೋಳಿ ಸಾಕಾಣಿಕೆ ವೆಚ್ಚಕ್ಕೆ ಸರ್ಕಾರ ಪರಿಷ್ಕರಿಸಿರುವ ದರವನ್ನು ಖಾಸಗಿ ಕಂಪನಿಗಳು ಜಾರಿಗೊಳಿಸುವವರೆಗೆ...

ಚಿಂತಾಮಣಿ | ಮುರುಗಮಲ್ಲ ದರ್ಗಾ ನಮ್ಮ ಜಿಲ್ಲೆಯ ಸೌಹಾರ್ದತೆಗೆ ಸಾಕ್ಷಿ : ಜಿ.ಪಂ.ಸಿಇಒ ಡಾ.ವೈ.ನವೀನ್ ಭಟ್

ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂಕೇತವಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪವಿತ್ರ ಯಾತ್ರಾ ಸ್ಥಳ...