ಮಂಗಳೂರು : ಕರ್ನಾಟಕ ಸರ್ಕಾರದ ಸರ್ಕಾರಿ ಶಾಲೆಗಳ ಖಾಸಗೀಕರಣದ ನಡೆ ಹಾಗೂ ಶಿಕ್ಷಣ ಹಕ್ಕು ಕಾಯ್ದೆಯ (RTE) ಕಾಲಮಿತಿ ಅನುಷ್ಠಾನವನ್ನು ಆಗ್ರಹಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (SIO), ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಸಭೆಯನ್ನುದ್ದೇಶಿಸಿ ವಕೀಲರಾದ ನಿಹಾಲ್ ಮೊಹಮ್ಮದ್ ಮಾತನಾಡುತ್ತಾ, ಸರ್ಕಾರಿ ಶಾಲೆಗಳ ನಿರ್ವಹಣೆಯಲ್ಲಿ ಖಾಸಗಿ ಸಂಸ್ಥೆಗಳನ್ನು ತೊಡಗಿಸಿಕೊಳ್ಳುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ಟೀಕಿಸಿದರು. ಆರ್‌ಟಿಇ ನಿಬಂಧನೆಗಳ ಅನುಷ್ಠಾನವನ್ನು ಪ್ರಶ್ನಿಸಿದ ಅವರು, “ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಮೂಲಭೂತ ಜವಾಬ್ದಾರಿಯಾಗಿದೆ” ಎಂದು ಒತ್ತಿ ಹೇಳಿದರು.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಪದ್ರೆಂಗಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಸಂಸ್ಥೆಗಳ ಹಸ್ತಕ್ಷೇಪ ಹಾಗೂ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಹಂಚಿಕೆ ಮತ್ತು ಬಳಕೆಯ ಕುರಿತು ಕಳವಳ ವ್ಯಕ್ತಪಡಿಸಿದ ಅವರು ಸಾರ್ವಜನಿಕ ಶಿಕ್ಷಣವನ್ನು ಸಶಕ್ತಗೊಳಿಸಲು ಈ ನಿಧಿಗಳ ಪಾರದರ್ಶಕ, ಹೊಣೆಗಾರಿಕೆ ಯುಕ್ತ ಮತ್ತು ಪರಿಣಾಮಕಾರಿ ಬಳಕೆ ಅತ್ಯಗತ್ಯ ಎಂದು ಅವರು ಹೇಳಿದರು.
ಎಸ್ ಐ ಓ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸಾರ್ವಜನಿಕ ಶಿಕ್ಷಣ ಮುಹಮ್ಮದ್ ಮುಸ್ತಫಾ ಅಧ್ಯಕ್ಷತೆ ವಹಿಸಿದರು. ಹಲವಾರು ವಿಧ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.





