ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

Date:

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಸಂರಕ್ಷಣೆಗೆ ಆಗ್ರಹಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಬುಧವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾಮಾಜಿಕ ಹೋರಾಟಗಾರರು ಭಾಗವಹಿಸಿ ಚುನಾವಣಾ ಆಯೋಗದ ಕಾರ್ಯವೈಖರಿ, ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ಕುರಿತು ಆಕ್ಷೇಪ ವ್ಯಕ್ತಪಡಿಸಿದರು. ಚುನಾವಣಾ ವ್ಯವಸ್ಥೆ ಯಾವುದೇ ರಾಜಕೀಯ ಪಕ್ಷದ ಪರವಾಗಿ ಕಾರ್ಯನಿರ್ವಹಿಸದೆ ಸಂವಿಧಾನಬದ್ಧವಾಗಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...
WhatsApp Image 2026 10 07 at 11.57.48 PM 3

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಶಿವಸುಂದರ್, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿದರು. ಚುನಾವಣಾ ಆಯೋಗವು ಒಂದು ರಾಜಕೀಯ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಇದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.

ಭಾರತದ ಸಂವಿಧಾನದ 324ರಿಂದ 327ನೇ ವಿಧಿಗಳು ಸ್ವತಂತ್ರ ಮತ್ತು ಸ್ವಾಯತ್ತ ಚುನಾವಣಾ ವ್ಯವಸ್ಥೆಗೆ ಮಹತ್ವ ನೀಡಿವೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳು ನಿಷ್ಪಕ್ಷಪಾತವಾಗಿ ನಡೆಯುವುದು ಅತ್ಯಂತ ಅಗತ್ಯ. ಚುನಾವಣಾ ಆಯೋಗವೇ ಒಂದು ಪಕ್ಷದ ಪರವಾಗಿ ನಿಂತರೆ, ಚುನಾವಣೆಯಿಂದ ಆಯ್ಕೆಯಾಗುವವರು ನಿಜವಾದ ಜನಪ್ರತಿನಿಧಿಗಳಾಗಲು ಸಾಧ್ಯವಿಲ್ಲ ಎಂದು ಶಿವಸುಂದರ್ ಅಭಿಪ್ರಾಯಪಟ್ಟರು.

WhatsApp Image 2026 10 07 at 11.57.48 PM 6

ಎಸ್‌ಐಆರ್ ಪ್ರಕ್ರಿಯೆಯ ಉದ್ದೇಶದ ಬಗ್ಗೆಯೂ ಪ್ರಶ್ನೆ ಎತ್ತಿದ ಅವರು, ವಿದೇಶಿ ಮತದಾರರನ್ನು ಪತ್ತೆಹಚ್ಚುವುದೇ ಇದರ ಉದ್ದೇಶವೇ ಅಥವಾ ದೇಶದ ನಾಗರಿಕರಿಗೇ ತೊಂದರೆ ಉಂಟುಮಾಡುವುದೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ವಿಶೇಷವಾಗಿ ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಹಾಗೂ ಸ್ಥಳಾಂತರಗೊಳ್ಳುವ ಜನರು ಮತದಾರರ ಪಟ್ಟಿಗೆ ಸಂಬಂಧಿಸಿದ ಪ್ರಕ್ರಿಯೆಗಳಲ್ಲಿ ಎದುರಿಸಬಹುದಾದ ಸಮಸ್ಯೆಗಳ ಬಗ್ಗೆ ಅವರು ಗಮನ ಸೆಳೆದರು.

WhatsApp Image 2026 10 07 at 11.57.48 PM 2

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹಿರ್ ಹುಸೇನ್ ಮಾತನಾಡಿ, ಕಳೆದ ಹಲವು ತಿಂಗಳುಗಳಿಂದ ಎಸ್‌ಐಆರ್ ಪ್ರಕ್ರಿಯೆ ಕುರಿತು ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಈ ಪ್ರಕ್ರಿಯೆಯಿಂದ ಸಾಮಾನ್ಯ ಮತದಾರರು, ಕೂಲಿ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.

WhatsApp Image 2026 10 07 at 11.57.48 PM 5

ಮತದಾರರ ಹಕ್ಕುಗಳು ಹಾಗೂ ಸಂವಿಧಾನದ ಆಶಯಗಳನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಉದ್ದೇಶದಿಂದ ಜನರು ಇದೀಗ ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಸಂವಿಧಾನಬದ್ಧ ಸಂಸ್ಥೆಗಳ ಸ್ವಾಯತ್ತತೆಯನ್ನು ಕಾಪಾಡಲು ನಾವು ಹೋರಾಟ ಮಾಡಬೇಕುದು ಅನಿವಾರ್ಯ ಎಂದು ಹೇಳಿದರು.

WhatsApp Image 2026 10 07 at 11.57.48 PM 1

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಪದ್ರೆಂಗಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಅಧ್ಯಕ್ಷ ಎಂ. ದಿವಾಕರ ರಾವ್, ಸಾಮಾಜಿಕ ಕಾರ್ಯಕರ್ತ ಮುನ್ನಾ ಕಮ್ಮರಡಿ ಮತ್ತಿತರರು ಉಪಸ್ಥಿತರಿದ್ದು ಮಾತನಾಡಿದರು. ಆಸಿಫ್ ಇಕ್ಬಾಲ್ ಕಾರ್ಯಕ್ರಮ ನಿರೂಪಿಸಿದರು.

WhatsApp Image 2026 10 07 at 11.57.48 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...

ಕೋಲಾರ | ಶಾಲೆಯ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟ ಅಗತ್ಯ: ಲಕ್ಷ್ಮಣಗೌಡ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ,...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...