ಧರ್ಮಸ್ಥಳ | ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಏಳು ಅಸ್ಥಿಪಂಜರಗಳಲ್ಲಿ ಮತ್ತೊಂದರ ಗುರುತು ಪತ್ತೆ ಹಚ್ಚಿದ ಎಸ್‌ಐಟಿ

Date:

ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ‌.17 ಮತ್ತು 18 ರಂದು ಎಸ್.ಐ.ಟಿ ನಡೆಸಿದ ಕಾರ್ಯಾಚರಣೆ ವೇಳೆ ಪತ್ತೆಯಾದ ಏಳು ಅಸ್ಥಿಪಂಜರಗಳಲ್ಲಿ ಒಂದು ಅಸ್ಥಿಪಂಜರದ ಗುರುತನ್ನು 2ನೇ ದಿನದಲ್ಲಿ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಪತ್ತೆ ಹಚ್ಚಲಾಗಿತ್ತು. ಇದೀಗ ಮತ್ತೊಬ್ಬನ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಎಸ್.ಐ.ಟಿ ಪತ್ತೆ ಹಚ್ಚಿ ಕಚೇರಿಗೆ ಕರೆದು ಮಾಹಿತಿ ಕಲೆ ಹಾಕಿದೆ.

- Advertisement -

2-10-2013 ರಂದು ಬೆಂಗಳೂರಿನ ಬಾರಿನಲ್ಲಿ ಕೆಲಸಕ್ಕೆ ಮಾಡುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಬೋಜಪ್ಪ ಮತ್ತು ಚೆನ್ನಮ್ಮ ಎಂಬವರ ಪುತ್ರ ಆದಿಶೇಷ ನಾರಾಯಣ(27) ಎಂಬಾತ ಮನೆಬಿಟ್ಟು ನಾಪತ್ತೆಯಾಗಿದ್ದು, ಅಸ್ಥಿಪಂಜರದ ಸಮೀಪ ಎಸ್.ಐ.ಟಿ ತಂಡಕ್ಕೆ ಡ್ರೈವಿಂಗ್ ಲೈಸೆನ್ಸ್ ಕಾರ್ಡ್ ಸಿಕ್ಕಿದ್ದು ಅದರ ಆಧಾರದ ಮೇಲೆ ಆದಿಶೇಷನ ಅಕ್ಕಂದಿರಾದ ಲಕ್ಷ್ಮಿ, ಪದ್ಮ ಹಾಗೂ ಕುಟಂಬದ ಸದಸ್ಯರನ್ನು ಸೆ.25 ರಂದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕರೆಸಿದ್ದು ಕಚೇರಿಗೆ ಬಂದ ಇವರು ಡ್ರೈವಿಂಗ್ ಲೈಸೆನ್ಸ್ ತಮ್ಮನದ್ದು ಎಂದು ಗುರುತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನಾಪತ್ತೆ ಬಗ್ಗೆ ಮಾಹಿತಿ‌ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಎನ್.ಎ ಮಾಡಿಸುವುದಾಗಿಯೂ ಎಸ್.ಐ.ಟಿ ಅಧಿಕಾರಿಗಳು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಆದಿಶೇಷ ನಾರಾಯಣ ಪದೇ ಪದೇ ಮನೆ ಬಿಟ್ಟು ಹೋಗಿ ವಾಪಸ್ ಬರುತ್ತಿದ್ದ ಕಾರಣದಿಂದ ನಾಪತ್ತೆಯಾಗಿರುವ ಬಗ್ಗೆ ಕುಟುಂಬ ಸದಸ್ಯರು ಯಾರು ಕೂಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿಲ್ಲ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿರೋಧದ ನಡುವೆಯೂ ಕಾವೇರಿಗೆ ಕಾಂಗ್ರೆಸ್ಸಿಗರ ಮೊಂಡಾರತಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ...