ಜನಸ್ತೋಮದ ನಡುವೆ ಕೆಲವರು ಅಸ್ವಸ್ಥ: ಕ್ಷಮೆ ಕೇಳಿದ ಶಾಸಕ ಅಶೋಕ್ ರೈ

Date:

ಅ.20 ರ ಸೋಮವಾರದಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ‌ಕೆಲವು ಮಂದಿ ಅಸ್ವಸ್ಥಗೊಂಡಿದ್ದು ಈ ಘಟನೆಗೆ ನಾನು ಸಾರ್ವಜನಿಕರಲ್ಲಿ ಕ್ಷಮೆ ಯಾಚಿಸುವುದಾಗಿ ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

- Advertisement -

ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ‌ಜನ ಸೇರಿದ ಕಾರಣ ಮತ್ತು ಮಧ್ಯಾಹ್ನದ ವೇಳೆ ಗಾಳಿ ಮಳೆ ಬಂದ ಕಾರಣ ಜನರ ನಡುವೆ ಸಿಲುಕಿ ಏಳೆಂಟು‌ಮಂದಿ ಅಸ್ವಸ್ಥರಾಗಿದ್ದರು. ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಸಾಕಷ್ಟು ಪ್ರಮಾಣದಲ್ಲಿ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಿದ್ದರೂ ಜನಸಂದಣಿ ಹೆಚ್ಚಾದ ಕಾರಣ ಸ್ವಲ್ಪ ವೆತ್ಯಾಸ ಉಂಟಾಗಿದೆ. ಈ ವೇಳೆ ಕೆಲವರ ಮನಸ್ಸಿಗೆ ನೋವಾಗಿದೆ, ಬೇಸರವಾಗಿದೆ ಇದಕ್ಕೆ ನಾನು ಕ್ಷಮೆ ಯಾಚಿಸುತ್ತೇನೆ. ಕಾರ್ಯಕ್ರಮಕ್ಕೆ ಬಂದವರಲ್ಲಿ ಯಾರ ಮನಸ್ಸಿಗೂ ನೋವಾಗಿದ್ದಲ್ಲಿ ಕ್ಷ‌ಮೆ ಕೇಳುತ್ತೇನೆ.‌ ಸಂಜೆ ಬಳಿಕ ರಾತ್ರಿ 9.30 ರವರೆಗೂ ಉಡುಗೋರೆ ವಿತರಣೆ ನಡೆದಿದೆ. ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಆಗಿರುವ ಘಟನೆಗೆ ವಿಷಾದವನ್ನು ವ್ಯಕ್ತಪಡಿಸಿವೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ದಿನ ಸಂಪಾದಕೀಯ | ಸಂಘಪರಿವಾರದ ಹುನ್ನಾರಗಳನ್ನು ಅರಿತ ದಲಿತರು

ಪುತ್ತೂರಿನದ ಕೊಂಬೆಟ್ಟು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ‌ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ...