ರಾಜ್ಯ ಟ್ವೆಕಾಂಡೋ ಚಾಂಪಿಯನ್‌ಶಿಪ್‌-2026: ದಕ್ಷಿಣ ಕನ್ನಡಕ್ಕೆ 2 ಚಿನ್ನ, 2 ಬೆಳ್ಳಿ

Date:

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಟ್ವೆಕಾಂಡೋ ಚಾಂಪಿಯನ್‌ಶಿಪ್–2026 (8ನೇ ಕೆಟಿಎ ಕಪ್)ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಟ್ವೆಕಾಂಡೋ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮೆರೆದಿದ್ದು, 2 ಚಿನ್ನ ಹಾಗೂ 2 ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

- Advertisement -

12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ರಫಾನ್ ರಹಮತುಲ್ಲಾ ಅಹ್ಮದ್ (ಸುರತ್ಕಲ್) ಹಾಗೂ 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ವಿಷ್ಣು ಇಡ್ಯಾ (ಸುರತ್ಕಲ್) ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ರಫಾನ್ ರಹಮತುಲ್ಲಾ ಅಹ್ಮದ್ ಅವರು ರಹಮತುಲ್ಲಾ ಅಹ್ಮದ್-ಫಾತಿಮಾ ಫರ್ಝಾನಾ ದಂಪತಿಯ ಪುತ್ರರಾಗಿದ್ದು, ವಿಷ್ಣು ಅವರು ರವಿ–ಜ್ಯೋತಿ ದಂಪತಿಯ ಪುತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

15 ವರ್ಷ ಮೇಲ್ಪಟ್ಟ ಬಾಲಕರ ವಿಭಾಗದಲ್ಲಿ ಆಯಾನ್ ಅಹ್ಮದ್ (ಮಂಗಳೂರು) ಹಾಗೂ 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಅವಂತಿಕಾ ಎಸ್ (ಕುಳಾಯಿ–ಸುರತ್ಕಲ್) ಅವರು ಬೆಳ್ಳಿ ಪದಕ ಪಡೆದು ಜಿಲ್ಲೆಗೆ ಮತ್ತಷ್ಟು ಗೌರವ ತಂದಿದ್ದಾರೆ. ಆಯಾನ್ ಅಹ್ಮದ್ ಅವರು ನಜೀಮ್ ಅಹ್ಮದ್–ಸುನೇನಾ ನಜೀಮ್ ಅವರ ಪುತ್ರರಾಗಿದ್ದು, ಅವಂತಿಕಾ ಅವರು ವಿನೋದ್ ಎಸ್–ಸುಮಾ ಕೆ ದಂಪತಿಯ ಪುತ್ರಿಯಾಗಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ | ಸರ್ಕಾರ ಅಧಿಕೃತ ಕಸಾಯಿಖಾನೆಗೆ ಅನುಮತಿ ನೀಡಲು ಮುಸ್ಲಿಂ ಮುಖಂಡರ ಒತ್ತಾಯ

ಪ್ರತಿಷ್ಠಿತ ಈ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿಭಾವಂತ ಯುವ ಕ್ರೀಡಾಪಟುಗಳು ಭಾಗವಹಿಸಿ, ವಿವಿಧ ಜಿ4 ವಿಭಾಗಗಳಲ್ಲಿ ಪೈಪೋಟಿ ನಡೆಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟು ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಟ್ವೆಕಾಂಡೋ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ತರಬೇತುದಾರ ಇಶಾಕ್ ಇಸ್ಮಾಯಿಲ್ ನಂದಾವರ ತರಬೇತಿ ನೀಡಿದ್ದು, ಅವರ ಪತ್ನಿ ದಕ್ಷಿಣ ಕನ್ನಡ ಟ್ವೆಕಾಂಡೋ ತಂಡದ ಫಿಸಿಯೋಥೆರಪಿಸ್ಟ್ ಡಾ. ಫಾತಿಮಾ ಭಾಷಿಯಾ (ಪಿಟಿ) ದೈಹಿಕ ಬೆಂಬಲ ಒದಗಿಸಿದ್ದಾರೆ. ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸುರತ್ಕಲ್ ಎಕ್ಸ್ ಟ್ರೀಮ್ ಫಿಟ್ ಅಂಡ್ ಫೈಟ್ ಕ್ಲಬ್ ತರಬೇತಿ ಹಾಗೂ ತಾಂತ್ರಿಕ ಬೆಂಬಲ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಈ ಸಾಧನೆಗೆ ಕ್ರೀಡಾಭಿಮಾನಿಗಳಿಂದ ಹಾಗೂ ಕ್ರೀಡಾ ವಲಯದಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಪಿಲಿಕುಳಕ್ಕೆ ಹೊಸ ರೂಪ: 339.90 ಎಕರೆ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್

ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ವಿಜ್ಞಾನ, ಪರಿಸರ, ಶಿಕ್ಷಣ ಹಾಗೂ ಪ್ರವಾಸೋದ್ಯಮ ಒಳಗೊಂಡ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....