ಧರ್ಮಸ್ಥಳ ಪ್ರಕರಣ | ರೇಡಾರ್‌ ಬಳಸಿ ಕಾರ್ಯಾಚರಣೆ ನಡೆಸಲು ಸುಜಾತಾ ಭಟ್ ಪರ ವಕೀಲರ ಆಗ್ರಹ

Date:

ಧರ್ಮಸ್ಥಳದಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ಸ್ಥಳಗಳಲ್ಲಿ GROUND PENETRATING RADAR(ರೇಡಾರ್) ಬಳಸುವಂತೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್‌ ಎನ್ ಅವರು ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಈವರಗೆ, ಸಾಕ್ಷಿ-ದೂರುದಾರ ತೇರಿರುವ 10 ಸ್ಥಳಗಳಲ್ಲಿ ಕೆಲವು ಸ್ಥಳದಲ್ಲಿ ಕಳೇಬರಗಳು ಪತ್ತೆ ಯಾಗಿರುತ್ತದೆ ಎಂದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ. ಸಾಕ್ಷಿಯೇ ಹೇಳಿರುವಂತೆ, ಆತ ಧರ್ಮಸ್ಥಳವನ್ನು 2014ರಲ್ಲಿಯೇ ತೊರೆದಿರುತ್ತಾನೆ. ಅಪಾರ ಮಳೆಯನ್ನು ಕಾಣುವ ಧರ್ಮಸ್ಥಳ ಪ್ರದೇಶದಲ್ಲಿ ಮಣ್ಣು ಒಂದೆಡೆಯಿಂದ ಮತ್ತೊಂದೆಡೆಗೆ ಹರಿದು ಶೇಖರಣೆಯಾಗುವ ಸಾಧ್ಯತೆ ಹೆಚ್ಚಿರುತ್ತದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ಗ್ರಾಮ ಪಂಚಾಯತ್ ಉಪಾಧ್ಯಕ್ಷರ ಬಂಧನಕ್ಕೆ ಸುಜಾತಾ ಭಟ್ ಪರ ವಕೀಲರ ಆಗ್ರಹ

ಹಾಗೆಯೇ, “ಸುಮಾರು 11 ವರ್ಷಗಳಲ್ಲಿ ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು ಸಾಕ್ಷಿದಾರ ತನ್ನ ನೆನಪಿನಲ್ಲಿ ಇಟ್ಟಿಕೊಂಡ ಗುರುತ್ತಿನಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ನಾವು ಈಗಾಗಲೇ ದಿನಾಂಕ ಜುಲೈ 29ರಂದು ಮನವಿ ಮಾಡಿಕೊಂಡಂತೆ ಭಾರತದಲ್ಲಿ ಬಳಕೆಯಲ್ಲಿರುವ ಅತ್ಯಾಧುನಿಕ GROUND PENETRATING RADAR (ಗ್ರೌಂಡ್ ಪೆನೇಟ್ರೇಟಿಂಗ್‌ ರೆೇಡಾರ್) ಗಳನ್ನು ಬಳಸಿ ಈಗಾಗಲೇ ಅಗೆಯಲಾಗಿರುವ ಸ್ಥಳಗಳಲ್ಲಿ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಕಳೇಬರಗಳ ಪತ್ತೆಗೆ ಬಳಸುವಂತೆ ಕೇಳಿಕೊಳ್ಳುತ್ತಿದ್ದೇವೆ” ಎಂದು ಆಗ್ರಹಿಸಿದ್ದಾರೆ.

“ಹುಲ್ಲುಕಡ್ಡಿಯನ್ನು ತೆರವುಗೊಳಿಸಲು ಬಳಸುವ ಯಂತ್ರದಷ್ಟು ಗಾತ್ರವಿರುವ GPRಗಳನ್ನು ಕೆಲವೇ ವ್ಯಕ್ತಿಗಳನ್ನು ನಿಯೋಜಿಸಿ ಈಗಾಗಲೇ ಅಗೆದಿರುವ ಸ್ಥಳಗಳಲ್ಲಿ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಕಳೇಬರಗಳ ಪತ್ತೆಗೆ ಬಳಸುವಂತೆ ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇನ್ನು ಎಸ್‌ಐಟಿ ತಂಡವನ್ನು ಶ್ಲಾಘಿಸಿರುವ ಅವರು, “ಅತ್ಯುತ್ತಮ ತಂಡದ ನೆರವಿನೊಂದಿಗೆ ಎಸ್‌ಐಟಿಯು ಹೊರತೆಗೆಯುವ ಪ್ರಕ್ರಿಯೆಯನ್ನು ನಡೆಸುತ್ತಿರುವುದು ಶ್ಲಾಘನೀಯ. ಪ್ರಣಬ್ ಮೊಹಂತಿಯವರ ನೇತೃತ್ವದ ಎಸ್‌ಐಟಿಯು GPRಗಳನ್ನು ಅಳವಡಿಸುವುದೆಂಬ ನಿರೀಕ್ಷೆಯನ್ನು ಅನೇಕ ತಜ್ಞರು ಹೊಂದಿರುತ್ತಾರೆ. GPRಗಳನ್ನು ನಿಯೋಜಿಸಲು ಎಸ್‌ಐಟಿಯವರಿಗೆ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನೆರವಾಗುತ್ತಾರೆಂಬ ಅಚಲ ನಂಬಿಕೆ ಮತ್ತು ವಿಶ್ವಾಸ ನಮ್ಮದು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...