ಸುಳ್ಯ | ಎಡಮಂಗಲದಲ್ಲಿ ʼಪ್ರಜಾಧ್ವನಿ ಕರ್ನಾಟಕʼ ಸಹಯೋಗದಲ್ಲಿ ಗಾಂಧಿ ಜಯಂತಿ

Date:

ಪ್ರಜಾಧ್ವನಿ ಕರ್ನಾಟಕ ಮತ್ತು ಸರಕಾರಿ ಪ್ರೌಢಶಾಲೆ ಎಡಮಂಗಲ ಇವುಗಳ ಸಹಯೋಗದಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಮತ್ತು ಭಾರತದ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ದಿನಾಂಕ 02.10.2026 ರಂದು ಆಚರಿಸಲಾಯಿತು. ಎಡಮಂಗಲ ಸರಕಾರಿ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜನಾರ್ದನ ಪರ್ಲ ಇವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮ ವಿದ್ಯಾರ್ಥಿಗಳಿಂದ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಬಳಿಕ ಅತಿಥಿಗಳು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

- Advertisement -

ಶಾಲಾ ಮುಖ್ಯಮಂತ್ರಿ ಕು. ಶ್ರೇಯಾ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಪ್ರಜಾಧ್ವನಿ ಕರ್ನಾಟಕದ ಸ್ಥಾಪಕ ಸದಸ್ಯ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿರ್ದೇಶಕ ಕೆ. ಪಿ. ಜಾನಿ ಪ್ರಸ್ತಾವಿಕವಾಗಿ ಮಾತನಾಡಿ, ಪ್ರಜಾಧ್ವನಿ ಕರ್ನಾಟಕ ಸಂಘಟನೆಯ ಆಶಯಗಳನ್ನು ವಿವರಿಸಿದರು. ಶಾಲಾ ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿ ಕುರಿತು ಚುಟುಕಾಗಿ ಭಾಷಣ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಧಾರ್ಮಿಕ ಪರಿಷತ್ತು ಸದಸ್ಯ ಲಕ್ಷ್ಮೀಶ ಗಬ್ಬಲಡ್ಕರವರು ಮಹಾತ್ಮ ಗಾಂಧಿಯವರ ಜೀವನ, ಅವರು ಪಾಲಿಸಿದ ಸತ್ಯ, ಶಾಂತಿ, ಅಹಿಂಸಾ ತತ್ವಗಳ ಕುರಿತು ಮತ್ತು ಇಂದಿನ ದಿನಗಳಲ್ಲೂ ಅವುಗಳ ಪ್ರಸ್ತುತತೆ ಹಾಗೂ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಶಾಲಾ ಹಿರಿಯ ಶಿಕ್ಷಕ ಆನಂದ ಕೆ. ಎಸ್. ಸಂದರ್ಭೋಚಿತವಾಗಿ ಮಾತನಾಡಿದರು.

Advertisements

ಇನ್ನೋರ್ವ ಮುಖ್ಯ ಅತಿಥಿ ಪ್ರಜಾಧ್ವನಿ ಕರ್ನಾಟಕದ ಅಧ್ಯಕ್ಷ ಪ್ರವೀಣ್ ಮುಂಡೋಡಿ ಗಾಂಧೀ ಜಯಂತಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯ ಶುಭಾಶಯಗಳನ್ನು ಕೋರಿ ಪ್ರಜಾಧ್ವನಿ ಕರ್ನಾಟಕ ನಡೆಸಿಕೊಂಡು ಬರುತ್ತಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜನಾರ್ದನ ಪರ್ಲ ಅಧ್ಯಕ್ಷೀಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಪ್ರಜಾಧ್ವನಿ ಕರ್ನಾಟಕದ ಪದಾಧಿಕಾರಿಗಳು ಹಾಗೂ ಸದಸ್ಯರಾದ ಗೋಪಾಲ್ ಪೆರಾಜೆ, ಮೋಹನ್ ಕೆ. ಪಿ. ಕಡಬ, ಶಿವಶಂಕರ್ ಕಡಬ, ಮಹೇಶ್ ಬೆಳ್ಳಾರ್ಕರ್, ಅಶ್ರಫ್ ಸಾಹುಕಾರ್, ಭರತ್ ಕುಕ್ಕುಜಡ್ಕ, ಕೇಶವ ಮೊರಂಗಲ್ಲು, ಶಾಲಾ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಕು. ಸಮನ್ವಿ ಕೆ. ಎಲ್ಲರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕು. ಸುಪ್ರಿಯಾ ಎ. ಕೊನೆಯಲ್ಲಿ ಧನ್ಯವಾದ ಸಮರ್ಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಪ್ರಜಾಧ್ವನಿ ಕರ್ನಾಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.

gandhi jayanthi ಸುಳ್ಯ
a71d07b5bd5d836dcc8d9f6e0431618b502c4dbb6bb3f88fc7df55ead8b958a2?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...