ತೊಕ್ಕೊಟ್ಟು ಆರಿಫ್ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗೆ ಸಿಸಿಬಿ ಎಸಿಪಿ ತಂಡಕ್ಕೆ ತನಿಖೆ ವರ್ಗಾವಣೆ

Date:

ಮಂಗಳೂರಿನ ಹೊರ ವಲಯದ ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ (46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾಯಿಸುತ್ತಿರುವ ಹಿನ್ನೆಲೆ, ಅವರನ್ನು ತಕ್ಷಣ ಬಂಧಿಸುವುದು ಪೊಲೀಸರಿಗೆ ಸವಾಲಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

- Advertisement -

ಈವರೆಗೆ ನಡೆದ ತನಿಖೆಯಲ್ಲಿ ಕೊಲೆ ಕೃತ್ಯದಲ್ಲಿ ಇನ್ನಷ್ಟು ಮಂದಿಯ ಭಾಗವಹಿಸುವಿಕೆ ಇದ್ದೇ ಇರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳಿಗೆ ಸಹಾಯ ಮಾಡಿರುವ ಶಂಕಿತ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರ ಪಾತ್ರ ದೃಢಪಟ್ಟರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಇದೇ ವೇಳೆ, ಆರೋಪಿಗಳಿಗೆ ಆಶ್ರಯ ನೀಡುವ ಅಥವಾ ಯಾವುದೇ ರೀತಿಯಲ್ಲಿ ಸಹಕರಿಸುವವರ ವಿರುದ್ಧ ಬಿಎನ್ಎಸ್ ಸೆಕ್ಷನ್ 249(ಎ) ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ರೌಡಿ ಶೀಟರ್ ಆಗಿದ್ದ ತಲಪಾಡಿ ಅಜ್ಜಿನಡ್ಕದ ಮುಳ್ಳುಗುಡ್ಡೆ ನಿವಾಸಿ ಆರಿಫ್ ಹುಸೈನ್ ಯಾನೆ ‘ಟಾಬ್ಲೆಟ್ ಆರಿಫ್’ (46) ಅವರನ್ನು ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಫ್ಲೈಓವರ್ ಮೇಲೆ ಶುಕ್ರವಾರ ಮುಂಜಾನೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಪ್ರಕರಣವು ಸ್ಥಳೀಯವಾಗಿ ಆತಂಕ ಸೃಷ್ಟಿಸಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...