ಉಜಿರೆ ಅನೈತಿಕ ಪೊಲೀಸ್ ಗಿರಿ ಪ್ರಕರಣ : SDPI ತೀವ್ರ ಖಂಡನೆ

Date:

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಅಪ್ರಾಪ್ತ ಮುಸ್ಲಿಂ ಬಾಲಕನ ಅಪಹರಣೆ, ಅಮಾನುಷ ಹಲ್ಲೆ ಮತ್ತು ಆತ್ಮಹತ್ಯೆಗೆ ಪ್ರೇರೇಪಿಸಿದ ಘಟನೆ ಅತ್ಯಂತ ಕ್ರೂರ, ಮಾನವೀಯತೆಯಿಲ್ಲದ ಹಾಗೂ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತದ್ದಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಅಪ್ರಾಪ್ತ ಬಾಲಕನನ್ನು ಧರ್ಮದ ಆಧಾರದ ಮೇಲೆ ಗುರುತಿಸಿ ಹಲ್ಲೆ ನಡೆಸಿರುವುದು ಸಂಘಟಿತ ದ್ವೇಷ ರಾಜಕಾರಣದ ಪ್ರತಿಫಲವಾಗಿದೆ. “ಅನೈತಿಕ ಪೊಲೀಸ್ ಗಿರಿ” ಎಂಬ ಹೆಸರಿನಲ್ಲಿ ಕೆಲ ಸಂಘಪರಿವಾರದ ಕಾರ್ಯಕರ್ತರು ಕಾನೂನನ್ನು ಕೈಗೆತ್ತಿಕೊಂಡು ನಿರಪರಾಧ ಯುವಕರ ಮೇಲೆ ದೌರ್ಜನ್ಯ ಎಸಗುತ್ತಿರುವುದು ಅತ್ಯಂತ ಖಂಡನೀಯ ಎಂದು ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
Untitled design 20260315 161436 0000
ಜಾಹಿರಾತು

ಬಾಲಕನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಗುಂಪಾಗಿ ಹಲ್ಲೆ ನಡೆಸಿರುವುದು ಹಾಗೂ ಬಳಿಕ ಜೀವಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿರುವುದು ಗಂಭೀರ ಅಪರಾಧವಾಗಿದ್ದು, ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ.
ಈ ಹಿನ್ನೆಲೆಯಲ್ಲಿ ಆರೋಪಿಗಳಾದ ಗೌರವ್ ಶೆಟ್ಟಿ, ರಮೇಶ್ ಸೇರಿದಂತೆ ಸಂಬಂಧಪಟ್ಟ ಎಲ್ಲರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು SDPI ಆಗ್ರಹಿಸುತ್ತದೆ. ಜೊತೆಗೆ, ಇಂತಹ ಸಂಘಟಿತ ದಾಳಿಗಳ ಹಿಂದೆ ಇರುವ ಶಕ್ತಿಗಳನ್ನು ಪತ್ತೆಹಚ್ಚಿ ಸಂಪೂರ್ಣವಾಗಿ ನಿಗ್ರಹಿಸಬೇಕು.
ರಾಜ್ಯದಲ್ಲಿ ಹೆಚ್ಚುತ್ತಿರುವ “ಅನೈತಿಕ ಪೊಲೀಸ್ ಗಿರಿ” ಕೃತ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅಪ್ರಾಪ್ತರು ಮತ್ತು ಅಲ್ಪಸಂಖ್ಯಾತ ಸಮುದಾಯದ ಸುರಕ್ಷತೆಯನ್ನು ಖಚಿತಪಡಿಸಬೇಕಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕಾನೂನು ಕೈಗೆತ್ತಿಕೊಳ್ಳುವ ಪ್ರವೃತ್ತಿಯನ್ನು ಕಟ್ಟುನಿಟ್ಟಾಗಿ ತಡೆಯದಿದ್ದರೆ ಸಮಾಜದಲ್ಲಿ ಭಯ ಮತ್ತು ಅಶಾಂತಿ ಹೆಚ್ಚುವ ಅಪಾಯವಿದೆ. ಈ ಅಮಾನುಷ ಘಟನೆಯನ್ನು SDPI ತೀವ್ರವಾಗಿ ಖಂಡಿಸುತ್ತದೆ ಹಾಗೂ ಸಂತ್ರಸ್ತ ಬಾಲಕನಿಗೆ ನ್ಯಾಯ ದೊರಕುವವರೆಗೆ ಹೋರಾಟ ನಡೆಸುವುದಾಗಿ ನವಾಝ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...