ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಆ ಪೈಕಿ ಉಪ್ಪಿನಂಗಡಿ ಇಳಂತಿಲ ಮೂಲದ ಓರ್ವ ಯುವತಿಯೂ ಸೇರಿದ್ದಾರೆ.
ಉದ್ಯಮಿಯಾಗಿರುವ ಇಳಂತಿಲ ಮೂಲದ ಕರುಣಾಕರ ಶೆಟ್ಟಿ ಮತ್ತು ಕಾರ್ಕಳ ಹೆಬ್ರಿಯ ಪೂಜಾ ಶೆಟ್ಟಿಯವರ ಪುತ್ರಿ ಚಿನ್ನಯಿ ಶೆಟ್ಟಿ(20) ಕಾಲ್ತುಳಿತದಿಂದ ಸಾವಿಗೀಡಾಗಿದವರು ಎಂದು ತಿಳಿದು ಬಂದಿದೆ. ಕಾಲ್ತುಳಿತದಲ್ಲಿ ಗಂಭೀರ ಗಾಯಗೊಂಡಿದ್ದ ಚಿನ್ಮಯಿ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವನಪ್ಪಿದ್ದಾರೆ.
ಬೆಂಗಳೂರಿನ ಕನಕಪುರ ರಸ್ತೆಯ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಚಿನ್ಮಯಿ ಶೆಟ್ಟಿ ಅವರು ಅತ್ಯುತ್ತಮ ಯಕ್ಷಗಾನ ಕಲಾವಿದೆಯೂ ಆಗಿದ್ದರು. ಇವರು ಬೆಂಗಳೂರಿನ ಯಕ್ಷತರಂಗ ತಂಡದ ವಿದ್ಯಾರ್ಥಿನಿಯಾಗಿದ್ದರು. ಅಲ್ಲದೆ ಉತ್ತಮ ಬಾಸ್ಕೆಟ್ ಬಾಲ್ ಕ್ರೀಡಾಪಟು ಕೂಡಾ ಆಗಿದ್ದರು. ಚಿನ್ಮಯಿ ಶೆಟ್ಟಿಯವರ ತಂದೆ ಕರುಣಾಕರ ಶೆಟ್ಟಿಯವರು ಮೂಲತ: ಸೋಮವಾರಪೇಟೆ ನಿವಾಸಿಯಾಗಿದ್ದು ಕೆಲ ವರ್ಷಗಳ ಹಿಂದೆ ಇಳಂತಿಲದಲ್ಲಿ ಜಾಗ ಖರೀದಿಸಿ ಮನೆ ಮಾಡಿದ್ದರು.
ಬೆಂಗಳೂರುನಲ್ಲಿ ಉದ್ಯಮಿಯಾಗಿರುವ ಕರುಣಾಕರ ಶೆಟ್ಟಿಯವರು ಕುಟುಂಬದೊಂದಿಗೆ ಬೆಂಗಳೂರುನಲ್ಲಿಯೇ ವಾಸ್ತವ್ಯವಿದ್ದು ಅಂಡೆತ್ತಡ್ಕದಲ್ಲಿ ಅವರ ತಾಯಿ ಮತ್ತು ಮಗಳ ಮಗ ವಾಸ್ತವ್ಯವಿದ್ದಾರೆ. ವಿಷಯ ತಿಳಿದು ಅವರು ಬೆಂಗಳೂರುಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.