ಮಂಗಳೂರು | ಜೀವರಾಜ್ ಪ್ರಮಾಣವಚನ ಸ್ವೀಕಾರಕ್ಕೆ ತನ್ನಿಂದ ವಿಳಂಬವಾಗಿಲ್ಲ: ಸ್ಪೀಕರ್ ಯು.ಟಿ.ಖಾದರ್

Date:

ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಜೀವರಾಜ್ ಅವರ ಪ್ರಮಾಣವಚನ ಸ್ವೀಕಾರದಲ್ಲಿ ಯಾವುದೇ ಉದ್ದೇಶಪೂರ್ವಕ ವಿಳಂಬವಾಗಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.

- Advertisement -

ಬುಧವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲೇ ಕಾರ್ಯನಿರ್ವಹಿಸುವ ಜವಾಬ್ದಾರಿ ತಮ್ಮ ಮೇಲಿದೆ. ಅದಕ್ಕೆ ಅನುಗುಣವಾಗಿಯೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಗಳು ಪರಸ್ಪರ ವಿಶ್ವಾಸದ ಮೇಲೆ ನಡೆಯಬೇಕು. ವಿಶ್ವಾಸದ ಕೊರತೆ ಉಂಟಾದರೆ ವ್ಯವಸ್ಥೆ ದುರ್ಬಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಜೀವರಾಜ್ ಅವರು ಮಂಗಳವಾರ ಪೂರ್ವಾಹ್ನ 11 ಗಂಟೆಗೆ ಅರ್ಜಿ ಸಲ್ಲಿಸಿದ್ದು, ನಿಯಮಾವಳಿಗಳ ಪ್ರಕಾರ ಅಗತ್ಯ ಅಭಿಪ್ರಾಯಗಳನ್ನು ಪಡೆದು ಸಮಯ ನಿಗದಿಪಡಿಸಲಾಗುತ್ತದೆ. ಈ ಪ್ರಕ್ರಿಯೆಯ ನಡುವಿನ ಅವಧಿಯನ್ನು ವಿಳಂಬ ಎಂದು ಕರೆಯುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

ಇದು ವಿಶಿಷ್ಟ ಸನ್ನಿವೇಶವಾಗಿದ್ದು, ಸಂವಿಧಾನ ಮತ್ತು ಕಾನೂನಿನಡಿ ಅವಕಾಶ ಕಲ್ಪಿಸುವುದು ಅಗತ್ಯ. ಆದರೆ ಸಂವಿಧಾನಾತ್ಮಕ ಪೀಠಗಳ ಬಗ್ಗೆ ಸಂಶಯ ಹುಟ್ಟಿಸುವ ರೀತಿಯಲ್ಲಿ ಹೇಳಿಕೆ ನೀಡುವುದು ತಪ್ಪು ಎಂದು ಖಾದರ್ ಎಚ್ಚರಿಸಿದರು.

ಈ ವಿಚಾರವಾಗಿ ರಾಜ್ಯಪಾಲರು ದೂರವಾಣಿ ಮೂಲಕ ಸಂಪರ್ಕಿಸಿ ವಿಚಾರಿಸಿದ್ದು, ಯಾವುದೇ ವಿಳಂಬವಾಗಿಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...