ಮಂಗಳೂರು | ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ನೀಡಲು ಸ್ಪೀಕರ್ ಸೂಚನೆ

Date:

ಕುಡಿಯುವ ನೀರಿನ ಯೋಜನೆಗಳಿಗೆ ವಿಳಂಬವಿಲ್ಲದೇ ವಿದ್ಯುತ್ ಸಂಪರ್ಕ ನೀಡಲು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಸೂಚಿಸಿದ್ದಾರೆ.

- Advertisement -

ಅವರು ಗುರುವಾರ ಪ್ರಜಾ ಸೌಧ ದಲ್ಲಿ ಉಳ್ಳಾಲ ತಾಲೂಕು ಬರ ನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಲವೆಡೆ ಟ್ಯಾಂಕ್ ನಿರ್ಮಿಸಿ ಬೋರ್ ವೆಲ್ ಕೊರೆಯಲಾಗಿದ್ದರೂ ವಿದ್ಯುತ್ ಸಂಪರ್ಕ ವಿಳಂಬವಾಗಿ ನೀರು ಪೂರೈಕೆಗೆ ತೊಂದರೆಯಾಗುತ್ತಿವೆ. ಡೆಪಾಸಿಟ್ ಮೊತ್ತಕ್ಕೆ ಕಾಯದೆ, ವಿದ್ಯುತ್ ಸಂಪರ್ಕ ನೀಡಲು ಈಗಾಗಲೇ ಸರಕಾರ ಸೂಚಿಸಿದೆ. ಮುಂದೆ ಗ್ರಾಮ ಪಂಚಾಯತ್ ಗೆ ಅನುದಾನ ಬಂದಾಗ ಈ ಮೊತ್ತವನ್ನು ಹೊಂದಾಣಿಕೆ ಮಾಡುವಂತೆ ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕುಡಿಯುವ ನೀರಿನ ಯೋಜನೆ ರೂಪಿಸುವಾಗ ಸ್ಥಳೀಯ ಸಮಸ್ಯೆಗಳನ್ನು ಅರಿತು ಅದಕ್ಕೆ ತಕ್ಕಂತೆ ಅನುಷ್ಠಾನ ಗೊಳಿಸಬೇಕು. ಮುಂದಿನ 30 ವರ್ಷದ ನೀರಿನ ಬೇಡಿಕೆ ಪೂರೈಸಲು ಯೋಜನೆ ಸಹಕಾರಿಯಾಗಬೇಕು. ಅಗತ್ಯ ಬಿದ್ದರೆ ವಿಶೇಷ ಅನುದಾನಕ್ಕೆ ಪ್ರಯತ್ನಿಸಲಾಗುವುದು ಎಂದು ಖಾದರ್ ತಿಳಿಸಿದರು.

ಕುಡಿಯುವ ನೀರು ನಿರ್ವಹಣೆಗೆ ಅವಶ್ಯಕತೆಯಂತೆ ಅನುದಾನ ನೀಡಲಾಗುತ್ತಿದೆ. ಪೈಪ್ ಮೂಲಕ ನೀರು ಪೂರೈಕೆ ಸಾಧ್ಯವಾಗದಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಗ್ರಾಮ ಪಂಚಾಯತ್ ಅನುದಾನದೊಂದಿಗೆ ಟಾಸ್ಕ್ ಫೋರ್ಸ್ ನಿಂದಲೂ ಅನುದಾನ ನೀಡಲಾಗುವುದು ಎಂದು ಸ್ಪೀಕರ್ ಹೇಳಿದರು.

ಮಳೆಗಾಲ ಸಿದ್ಧತೆ: ಮುಂಬರುವ ಮಳೆಗಾಲದಲ್ಲಿ ನೀರಿನ ಸರಾಗ ಹರಿವಿಗೆ ತೊಂದರೆಯಾಗುವ ಪ್ರದೇಶಗಳನ್ನು ಮೊದಲೇ ಗುರುತಿಸಬೇಕು. ಎಲ್ಲಾ ಚರಂಡಿಗಳ ಹೂಳೆತ್ತಲು ಕ್ರಮ ವಹಿಸಬೇಕು. ಕಳೆದ ವರ್ಷ ಪ್ರಾಕೃತಿಕ ದುರಂತಗಳು ನಡೆದ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ದುರಂತಗಳು ನಡೆದರೆ ಸ್ಥಳೀಯ ಅಧಿಕಾರಿಗಳು ತಕ್ಷಣವೇ ಭೇಟಿ ನೀಡಬೇಕು ಎಂದು ಸ್ಪೀಕರ್ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಿ ಇ ಒ ವಿನಾಯಕ್ ಕಾರ್ಭರಿ ಮಾತನಾಡಿ, ಜಿಲ್ಲೆಯಲ್ಲಿ ಬರ ನಿರ್ವಹಣೆ ಮತ್ತು ಕುಡಿಯುವ ನೀರಿನ ಪೂರೈಕೆಗೆ ಒಂದು ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 12 ಲಕ್ಷ ಅನುದಾನ ಇದೆ ಎಂದರು.

ಸಭೆಯಲ್ಲಿ ಮೂಡಾ ಅಧ್ಯಕ್ಷ ಸದಾಶಿವ, ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...