ವಿಟ್ಲ | ಪವಿತ್ರ ಮಾಸದ ಸಿದ್ಧತೆ: ‘ಅಹ್ಲನ್ ರಮದಾನ್’ ಆಚರಿಸಿದ ಜಮಾಅತೆ ಇಸ್ಲಾಮೀ ಹಿಂದ್

Date:

ಪವಿತ್ರ ಅಹ್ಲನ್ ರಮದಾನ್ ತಿಂಗಳಿಗೆ ನಾವು ಯಾವ ರೀತಿಯಲ್ಲಿ ನಮ್ಮನ್ನು ಸಜ್ಜುಗೊಳಿಸಬೇಕು ಎಂಬುವುದರ ಕುರಿತು ಜಮಾಅತೆ ಇಸ್ಲಾಮೀ ಹಿಂದ್, ಸ್ಥಾನೀಯ ಸಮಿತಿಯ ಅಧ್ಯಕ್ಷ ಜನಾಬ್ ಉಮರ್ ಮೌಲವಿ ಮಡಿಕೇರಿ ವಿಶೇಷ ಪ್ರವಚನವನ್ನು ನೀಡಿದರು.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಇಲ್ಲಿನ ಬ್ರೈಟ್ ಆಡಿಟೋರಿಯಂ ಸಭಾಂಗಣದಲ್ಲಿ ‘ಅಹ್ಲನ್ ರಮದಾನ್’ ಹೆಸರಿನಲ್ಲಿ ಪವಿತ್ರ ಮಾಸದ ಸಿದ್ಧತೆಗಾಗಿ ಹಮ್ಮಿಕೊಂಡಿದ್ದ ರಮಝಾನ್ ಸ್ವಾಗತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪ್ರಾಸ್ತಾವಿಕ ಮಾತುಗಳನ್ನಾಡಿದ ಅಬ್ದುಲ್ ಖಾದರ್ ಕುಕ್ಕಾಜೆಯವರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿಗಳನ್ನು ಸ್ವಾಗತಿಸಿದರು. ಜಮಾಅತೆ ಇಸ್ಲಾಮೀ ವಿಟ್ಲ ಇದರ ಅಧೀನದಲ್ಲಿರುವ ಮದರಸ ‘ವ್ಯಾಲ್ಯೂ ಎಜುಕೇಷನ್ ಸೆಂಟರ್‘ ಇದರ ಮುಖ್ಯ ಶಿಕ್ಷಕಿ ಶ್ರೀಮತಿ ರಾಬಿಯಾ ಅಬ್ದುಲ್ ರಹೀಮ್ ಅವರು ಈ ಮದರಸದ ಮಕ್ಕಳ ಅರಬಿ ಭಾಷಾ ಜ್ಞಾನ ಸೇರಿದಂತೆ ಶೈಕ್ಷಣಿಕ ವೈವಿಧ್ಯತೆಯ ಬಗ್ಗೆ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿರಸಿ | ಮಾರಿಕಾಂಬಾ ಜಾತ್ರೆಗೆ ಭರದ ಸಿದ್ಧತೆ: ಭಕ್ತರ ಸುರಕ್ಷತೆ ಕ್ರಮಗಳಿಗೆ ಸೂಚನೆ, ಸರ್ಕಾರಿ ಕಾಲೇಜಿಗೆ ₹3 ಕೋಟಿ ಅನುದಾನ

ಈ ಕಾರ್ಯಕ್ರಮವನ್ನು ನಿರೂಪಿಸಿದ, ಜ.ಇ. ಹಿಂದ್ ಇದರ ಸ್ಥಾನೀಯ ಅಧ್ಯಕ್ಷರು ಮತ್ತು ಅನುಗ್ರಹ ಮಹಿಳಾ ವಿದ್ಯಾಸಂಸ್ಥೆ, ಕಲ್ಲಡ್ಕ ಇದರ ಆಡಳಿತ ಮಂಡಳಿಯ ಅಧ್ಯಕ್ಷರೂ ಆಗಿರುವ ಜನಾಬ್ ಯಾಸೀನ್ ಬೇಗ್ ಅವರು ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಅಧ್ಯಯನ ಕೋರ್ಸ್‌ಗಳ ಬಗ್ಗೆ ವಿವರಣೆ ನೀಡಿದರು. ಈಗಾಗಲೇ 2026-27ರ ಶೈಕ್ಷಣಿಕ ವರ್ಷದ ದಾಖಲಾತಿ ಆರಂಭಿಸಿದ್ದು ಆಸಕ್ತ ವಿದ್ಯಾಥಿಗಳು ತ್ವರೆ ಮಾಡಿಕೊಳ್ಳುವಂತೆ ಕೇಳಿಕೊಂಡು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಧನ್ಯವಾದವಿತ್ತರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...