ಮಂಗಳೂರು | ಪರಿಸರ ಉಳಿಸಿದರೆ ಭವಿಷ್ಯ ಉಳಿಯುತ್ತದೆ: ದರ್ಶನ್ ಹೆಚ್.ವಿ

Date:

ಪರಿಸರ, ನೀರು ಹಾಗೂ ಆಹಾರ ಶುಚಿಯಾಗಿದ್ದರೆ ಜೀವಸಂಕುಲದ ರಕ್ಷಣೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಸಂರಕ್ಷಿಸಬೇಕಿದ್ದು, ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಹೇಳಿದರು.

- Advertisement -

ನಗರದ ಕೆಪಿಟಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿದರೆ ಸಮಾಜವೂ ಉತ್ತಮ ಪರಿಸರವನ್ನು ಹೊಂದಲು ಸಾಧ್ಯವಾಗುತ್ತದೆ. ಆಧುನಿಕ ಜೀವನಶೈಲಿಯ ಒತ್ತಡದಲ್ಲಿ ಪರಿಸರ ಹಾನಿಯಾಗುತ್ತಿದ್ದು, ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಪರಿಸರವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಮಾತನಾಡಿ, ಪರಿಸರ ನಾಶದಿಂದ ಮಾನವ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಪರಿಸರವನ್ನು ನಾವು ಕಾಪಾಡಿದರೆ ಪರಿಸರವೂ ನಮ್ಮನ್ನು ರಕ್ಷಿಸುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ, ಹಿರಿಯ ಪರಿಸರ ಅಧಿಕಾರಿ ರಾಜಶೇಖರ ಪುರಾಣಿಕ್, ಕೆಪಿಟಿ ಪ್ರಾಂಶುಪಾಲ ಹರೀಶ್ ಶೆಟ್ಟಿ, ಎನ್‌ಐಟಿಕೆ ನಿವೃತ್ತ ಪ್ರಾಧ್ಯಾಪಕ ಶ್ರೀ ನಿಕೇತನ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಮಂಜು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸೀಡ್ ಬಾಲ್ ಹಾಗೂ ಬಟ್ಟೆ ಬ್ಯಾಗ್‌ಗಳನ್ನು ವಿತರಿಸಲಾಯಿತು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಯೆಯ್ಯಾಡಿಯಿಂದ ಕೆಪಿಟಿವರೆಗೆ ಜಾಗೃತಿ ಜಾಥಾ ನಡೆಯಿತು. ಪ್ರಧಾನ ಜಿಲ್ಲಾ ನ್ಯಾಯಾಧೀಶ ಬಸವರಾಜ್ ಜಾಥಾವನ್ನು ಉದ್ಘಾಟಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿರುವ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...

ಶಿವಮೊಗ್ಗ | KSRTC ಬಸ್‌ನ ಟಯರ್ ಸ್ಫೋಟ; ಅನಾಹುತ ತಪ್ಪಿಸಿದ ಚಾಲಕ

ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಬಳಿ KSRTC ಬಸ್‌ನ ಮುಂಭಾಗದ ಟಯರ್ ಬ್ಲಾಸ್ಟ್...