ಸೌದಿ ಅರೇಬಿಯಾದಲ್ಲಿ ಜ. 18,19ರಂದು ʼವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನʼ

Date:

ಸೌದಿ ಅರೇಬಿಯಾದ ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ಮತ್ತು ಹೃದಯವಾಹಿನಿ – ಕರ್ನಾಟಕ ಒಗ್ಗೂಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ 17ನೇ ʼವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನʼವನ್ನು ಆಯೋಜಿಸಲಾಗಿದೆ. ಸಮ್ಮೇಳನವು ಸೌದಿ ಅರೇಬಿಯಾದ ದಮಾಮ್‌ನಲ್ಲಿ 2024ರ ಜನವರಿ 18 ಮತ್ತು 19 ರಂದು ನಡೆಯಲಿದೆ ಎಂದು ಅನಿವಾಸಿ ಭಾರತೀಯ ಉದ್ಯಮಿ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಬಿ. ಝಕರಿಯಾ ಜೋಕಟ್ಟೆ ತಿಳಿಸಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. “ಸೌದಿ ಅರೇಬಿಯಾದ ಇತಿಹಾಸದಲ್ಲೇ ಮೊದಲ ಬಾರಿಗೆ ʼವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನʼ ನಡೆಯುತ್ತಿದ್ದು, ಜಿಸಿಸಿ ದೇಶಗಳ ಕನ್ನಡಿಗರು ಸಮ್ಮೇಳನದಲ್ಲಿ ಭಾಗವಹಿಸುವುದರ ಮೂಲಕ ಪ್ರೋತ್ಸಾಹಿಸಬೇಕು” ಎಂದು ಝಕರಿಯಾ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಸಮ್ಮೇಳನದಲ್ಲಿ ಸಾಹಿತ್ಯಕ್ಕೆ ಸಂಬಂದಪಟ್ಟಂತೆ ಕವಿಗೋಷ್ಠಿ, ಹಾಸ್ಯಗೋಷ್ಠಿ, ಮಾಧ್ಯಮಗೋಷ್ಠಿ ಹಾಗೂ ಅನಿವಾಸಿ ಕನ್ನಡಿಗರ ಗೋಷ್ಠಿ ಜರಗಲಿದ್ದು, ಭರತನಾಟ್ಯ, ಜಾನಪದ ನೃತ್ಯ, ನೃತ್ಯ ರೂಪ, ಯಕ್ಷಗಾನ, ಡೊಳ್ಳು ಕುಣಿತ, ದಫ್ ಮುಂತಾದ ಕಲೆಗಳು ಪ್ರದರ್ಶನಗೊಳ್ಳಲಿದೆ. ಕನ್ನಡದ ಸಹೋದರ ಭಾಷೆಗಳಾದ ತುಳು, ಕೊಂಕಣಿ, ಬ್ಯಾರಿ, ಕೊಡವ ಮತ್ತು ಅರೆ ಭಾಷೆಗಳ ಕಾರ್ಯಕ್ರಮಗಳನ್ನೂ ಸಮ್ಮೇಳನದಲ್ಲಿ ಸೇರಿಸಿಕೊಳ್ಳಲಾಗಿದೆ” ಎಂದು ತಿಳಿಸಿದರು.

“ಸಮ್ಮೇಳನದ ಉದ್ಘಾಟನೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಮಂತ್ರಿಸಲಾಗುವುದು. ವಿಧಾನಸಭಾಧ್ಯಕ್ಷರಾದ ಯು ಟಿ ಖಾದರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ, ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಆರೋಗ್ಯ ಖಾತೆ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಉನ್ನತ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಪೌರಾಡಳಿತ ಮತ್ತು ಹಜ್ ಖಾತೆ ಸಚಿವರಾದ ರಹಿಂ ಖಾನ್‌ ಹಾಗೂ ಅನಿವಾಸಿ ಭಾರತೀಯ ವೇದಿಕೆಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷ ಪ್ರೊ ಎಸ್.‌ ಜಿ. ಸಿದ್ದರಾಮಯ್ಯ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ” ಎಂದರು.

ಈ ಸುದ್ದಿ ಓದಿದ್ದೀರಾ?: ಆಂಧ್ರಪ್ರದೇಶದ ಚುನಾವಣಾ ಲೆಕ್ಕಾಚಾರ ಬದಲಿಸುವರೇ ಪ್ರಶಾಂತ್ ಕಿಶೋರ್?

“ಕುದ್ರೋಳಿ ಗಣೇಶ್ ಅವರ ತಂಡದಿಂದ ಮ್ಯಾಜಿಕ್ ಶೋ, ಮಿಮಿಕ್ರಿ ಗೋಪಿ ಅವರಿಂದ ಸ್ವರಾನುಕರಣೆ, ಮಹದೇವ ಸತ್ತಿಗೇರಿ ಅವರಿಂದ ಹಾಸ್ಯ ಭಾಷಣ, ಗೋ ನಾ ಸ್ವಾಮಿ, ಪುಷ್ಪ ಆರಾಧ್ಯ, ಅನಿಲ್ ಬಾಸಗಿ ಮತ್ತು ಶಿವು ಮುಂತಾದ ಗಾಯಕರಿಂದ ಸ್ವರಮಂಜರಿ, ರಂಗ ಸಂಸ್ಕೃತಿ ಬೆಂಗಳೂರು ತಂಡದಿಂದ ಕಿರು ನಗೆನಾಟಕ, ಬಹರೇನ್ ಕಲಾವಿದರಿಂದ ಯಕ್ಷಗಾನ, ಮಂಗಳೂರಿನ ಬ್ಯಾರಿ ಕಲಾವಿದರಿಂದ ದಫ್ ಪ್ರದರ್ಶನ, ಪುಷ್ಕರ ಪರ್ಫಾರ್ಮಿಂಗ್ ಆರ್ಟ್ಸ್ ಬೆಂಗಳೂರು ಇವರಿಂದ ಭರತನಾಟ್ಯ, ಸಾಗರ ಮತ್ತು ಮಂಡ್ಯ ಜಾನಪದ ಕಲಾವಿದರಿಂದ ಡೊಳ್ಳು ಕುಣಿತ ಹಾಗೂ ಇನ್ನು ಹಲವಾರು ಕಲಾವಿದರಿಂದ ವೈವಿಧ್ಯಮಯ ಕಾರ್ಯಕ್ರಮಗಳು ಸೌದಿ ಅರೇಬಿಯಾದ ಕನ್ನಡಿಗರನ್ನು ರಂಜಿಸಲಿವೆ” ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷ, ಕೆ.ಪಿ. ಮಂಜುನಾಥ್ ಸಾಗರ್, ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ ಅಧ್ಯಕ್ಷ ಸತೀಶ್ ಬಜಾಲ್, ಜೊತೆ ಕಾರ್ಯದರ್ಶಿ ಪ್ರವೀಣ್ ಪೀಟರ್ ಅರೇನ್ಹಾ, ಕೋಶಾಧಿಕಾರಿ ಅಯಾಝ್ ಕೈಕಂಬ ಹಾಗೂ ಸಂಯೋಜಕ ಅಶ್ರಫ್ ನೌಶಾದ್ ಕೊಲ್ಯ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಹಾವೇರಿ | ಪಿಎಫ್ ಹೊಸ ನೀತಿ: ವಿರೋಧಿಸಿ ಮಹಿಳಾ ಉದ್ಯೋಗಿಗಳು ದಿಡೀರ್ ಹೆದ್ದಾರಿ ತಡೆದು ಪ್ರತಿಭಟನೆ

"ಕೇಂದ್ರ ಸರ್ಕಾರವು ಭವಿಷ್ಯನಿಧಿ (ಪಿಎಫ್) ಸೌಲಭ್ಯದಲ್ಲಿ ಹೊಸ ಆದೇಶ ಮಾಡಿರುವುದು ಗಾರ್ಮೆಂಟ್ಸ್...

ಚಿಕ್ಕಮಗಳೂರು | ರಾಷ್ಟ್ರೀಯ ಹೆದ್ದಾರಿ: ಮರಗಳ ಕಟಾವು ತನಿಖೆಗೆ ಒತ್ತಾಯ

ಮೂಡಿಗೆರೆ ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಕೆಳಗೂರು ಸಮೀಪದ ಸಾಲು ಮರ...

ಬಾಗಲಕೋಟೆ | ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಗಮನಾರ್ಹ ಸೇವೆ...