ಯಾದಗಿರಿ | ದಲಿತರಿಗೆ ಬಹಿಷ್ಕಾರ ಪ್ರಕರಣ : ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ರಸ್ತೆ ತಡೆ

Date:

ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ ಕಾರಣಕ್ಕೆ ಗ್ರಾಮದ ಸವರ್ಣೀಯರು ಪರಿಶಿಷ್ಟ ಜಾತಿಯ ಕುಟುಂಬದವರಿಗೆ ಬಹಿಷ್ಕಾರ ಹಾಕಿದ ಎಲ್ಲಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಹುಣಸಗಿ ಪಟ್ಟಣದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

- Advertisement -

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ) ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಂಟಿಯಾಗಿ ಹುಣಸಗಿ ಪಟ್ಟಣದ ಬಸವೇಶ್ವರ ವೃತ್ತದ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಪ್ರತಿಭಟನೆ ಉದ್ದೇಶಿಸಿ ದಸಂಸ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ʼದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಪ್ರಕರಣದ ಹತ್ತು ಜನ ಆರೋಪಿಗಳನ್ನು ಬಂಧಿಸಬೇಕು. ಕೊಡೇಕಲ್ ಗ್ರಾಮದ 15 ವರ್ಷದ ದಲಿತ ಯುವತಿಯ ಮೇಲೆ ಅದೇ ಗ್ರಾಮದ ಮೂರು ಜನ ಮೇಲ್ವರ್ಗದವರು ಅತ್ಯಾಚಾರಕ್ಕೆ ಯತ್ನಿಸಿದ ಮೂರು ಜನರ ಮೇಲೆ ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಾಗಿದ್ದರೂ ಬಂಧಿಸಿಲ್ಲ. ರಾಜಕೀಯ ನಾಯಕರ ಒತ್ತಡದಿಂದ ದಲಿತರಿಗೆ ಜಾತಿ ನಿಂದನೆ, ಬೆದರಿಕೆ ಹಾಕುತ್ತಿದ್ದಾರೆ. ಕೂಡಲೇ 3 ಜನ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕುʼ ಎಂದು ಆಗ್ರಹಿಸಿದರು.

ʼಈ ಪ್ರಕರಣದ ಕುರಿತು ಈಗಾಗಲೇ ಸುರಪುರ ತಾಲೂಕು ಪೊಲೀಸ್‌ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಘಟನೆ ನಡೆದು ಎರಡು ತಿಂಗಳು ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಬಂಧಿಸಬೇಕುʼ ಎಂದು ಒತ್ತಾಯಿಸಿದರು.

WhatsApp Image 2024 09 24 at 7.07.30 PM

ʼಸವರ್ಣೀಯರಿಂದ ಬಹಿಷ್ಕಾರಕ್ಕೊಳಗಾದ ಬಪ್ಪರಗಿ ಗ್ರಾಮದ 10 ದಲಿತ ಕುಟುಂಬಗಳಿಗೆ ತಲಾ 4 ಎಕರೆ ಜಮೀನು ಕೊಡಬೇಕು. ಮಾದಿಗ ಜನಾಂಗದವರಿಗೆ ಕಿರಾಣಿ, ಹೋಟೆಲ್, ಹಿಟ್ಟಿನ ಗಿರಣಿ, ಪಾದರಕ್ಷೆ ಅಂಗಡಿ ಉದ್ಯೋಗ ನಡೆಸಲು ನಾಲ್ಕು ಕುಟುಂಬಗಳಿಗೆ ಸ್ವಯಂ ಉದ್ಯೋಗ ಅಡಿಯಲ್ಲಿ ಸಾಲ ಮಂಜೂರು ಮಾಡಬೇಕು” ಎಂದು ಆಗ್ರಹಿಸಿದರು

ʼಕೊಡೇಕಲ್ ಗ್ರಾಮದ ಸಂತ್ರಸ್ತೆ ಅಪ್ರಾಪ್ತ ಬಾಲಕಿ ಕುಟುಂಬಕ್ಕೆ ಸರ್ಕಾರ ನಾಲ್ಕು ಎಕರೆ ಜಮೀನು ಕೊಟ್ಟು ನಿಗಮದಿಂದ ಉದ್ಯೋಗಕ್ಕೆ ಸಾಲ ಕೊಡಬೇಕು. ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಚನ್ನೂರು (ಕೆ) ಗ್ರಾಮದಲ್ಲಿ ದಲಿತರ ಮೇಲೆ ಕೌಂಟರ್ ಸುಳ್ಳು ಪ್ರಕರಣ ಹಾಗೂ ಗುರುಮಿಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಅರಕೇರಾ (ಕೆ) ಗ್ರಾಮದ ದಲಿತರ ಮೇಲೆ ದಾಖಲಾದ ಸುಳ್ಳು ಪ್ರಕರಣವನ್ನು ರದ್ದುಪಡಿಸಬೇಕುʼ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ | ನಾಳೆ ಜನಪ್ರತಿನಿಧಿಗಳ ಕೋರ್ಟ್ ತೀರ್ಪು

ಈ ಸಂದರ್ಭದಲ್ಲಿ ಅಜೀಜ್ ಸಾಬ್ ಐಕೂರ್, ಮಲ್ಲಿಕಾರ್ಜುನ ಕುರುಕುಂದಿ, ನಾಗರಾಜ ಓಕಳಿ, ನಿಂಗಣ್ಣ ಎನ್.ಗೋನಾಲ, ರಮೇಶ್ ಪೂಜಾರಿ, ಮಾನಪ್ಪ‌ ಶೆಳ್ಳಗಿ, ರಾಮಪ್ಪ ಕೋರೆ, ಭೀಮಣ್ಣ ಅಡ್ಡೂಡಗಿ, ಗೋಪಾಲ ಗೋಗಿಕೇರಾ, ಚಂದ್ರಮ ದೀವಳಗುಡ್ಡ, ಬಸವಣ್ಣ ದೊಡ್ಡಮನಿ , ಭೀಮಣ್ಣ‌ ಲಕ್ಷ್ಮೀಪುರ, ತಿಪ್ಪಣ ಗೋನಾಲ,ಹುಲಗಪ್ಪ ಜಾಂಗೀರ,ಹೊನ್ನಪ್ಪ ದೇವಿಕೇರಿ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...