ದಲಿತರ ಭೂಮಿ ವಿವಾದ: ಜೂನ್ 29ರಂದು ಜಿಲ್ಲಾವ್ಯಾಪಿ ಹೋರಾಟದ ಎಚ್ಚರಿಕೆ

Date:

ಚಿಕ್ಕಬಳ್ಳಾಪುರ: ದಲಿತರಿಗೆ ಮಂಜೂರಾಗಿರುವ ಭೂಮಿಗೆ ಸಂಬಂಧಿಸಿದ ವಿವಾದವನ್ನು ತಕ್ಷಣ ಇತ್ಯರ್ಥಪಡಿಸಬೇಕು. ಇಲ್ಲದಿದ್ದರೆ ಜೂನ್ 29ರಂದು ಜಿಲ್ಲಾದ್ಯಂತ ಅರಣ್ಯ ಇಲಾಖೆ ಕಚೇರಿಗಳ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.

ನಿರಂತರ ಧರಣಿ ಸತ್ಯಾಗ್ರಹದ ವೇಳೆ ಮಾತನಾಡಿದ ಮುಖಂಡರು, 1972ರಲ್ಲಿ ದಲಿತರಿಗೆ ಭೂಮಿ ಮಂಜೂರಾಗಿದ್ದು, ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದೇವೆ. ಜಿಲ್ಲಾಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸಮಸ್ಯೆಗೆ ಸ್ಪಷ್ಟ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿದರು. ಜಿಲ್ಲಾ ಅರಣ್ಯಾಧಿಕಾರಿಗಳು ಈ ಭೂಮಿಗೂ ಅರಣ್ಯ ಇಲಾಖೆಗೂ ಸಂಬಂಧವಿಲ್ಲ ಎಂದು ಹೇಳಿದ್ದರೆ, ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ ವೇಳೆ ಗೊಂದಲ ಉಂಟಾಗಿರುವ ಕಾರಣ ಧರಣಿಯನ್ನು ಮುಂದುವರಿಸಲಾಗಿದೆ ಎಂದರು.

1991ರಲ್ಲಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ಹೇಗೆ ಹಸ್ತಾಂತರ ಮಾಡಲಾಯಿತು ಎಂಬುದನ್ನು ಅಧಿಕಾರಿಗಳು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ಮುಖಂಡ ಬಿ.ವಿ. ವೆಂಕಟರಮಣ ಮಾತನಾಡಿ, ಡಿಎಫ್ಒ ಹಾಗೂ ಎಸಿಎಫ್ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಸಹಕಾರ ನೀಡುತ್ತಿಲ್ಲ. ನಂದಿ ಮೆಡಿಕಲ್ ಫಾರೆಸ್ಟ್ ಹಾಗೂ ಈಶಾ ಸಂಸ್ಥೆಗೆ ಅರಣ್ಯ ಭೂಮಿ ನೀಡಿರುವಾಗ, ದಲಿತರಿಗೆ ನ್ಯಾಯ ನೀಡುವಲ್ಲಿ ಸರ್ಕಾರ ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಟೀಕಿಸಿದರು. ಹೈಕೋರ್ಟ್ ಆದೇಶದ ಪ್ರಕಾರ ದಲಿತರ ಒತ್ತುವರಿ ತೆರವು ಮಾಡಬಾರದು ಎಂಬ ಸೂಚನೆ ಇದ್ದರೂ ಅದನ್ನು ಪಾಲಿಸಲಾಗುತ್ತಿಲ್ಲ ಎಂದು ಆರೋಪಿಸಿದರು.

ಎನ್.ಎ. ವೆಂಕಟೇಶ್ ಮಾತನಾಡಿ, ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ ದಲಿತರಿಗೆ ನ್ಯಾಯ ಒದಗಿಸಬೇಕು. ಜೂನ್ 29ರಂದು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅರಣ್ಯ ಇಲಾಖೆ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು. ತಹಶೀಲ್ದಾರ್ ವಿರುದ್ಧ ಕ್ರಮ ಜರುಗುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ರಾಜಾಕಾಂತ್ ಮಾತನಾಡಿ, ಕಂದಾಯ ಇಲಾಖೆ ಜನಪರವಾಗಿ ಕಾರ್ಯನಿರ್ವಹಿಸಿ ಸಂಕಷ್ಟದಲ್ಲಿರುವವರಿಗೆ ನೆರವಾಗಬೇಕಿತ್ತು. ಆದರೆ ಕಳೆದ ಎಂಟು ದಿನಗಳಿಂದ ಸಮಸ್ಯೆ ಪರಿಹರಿಸುವ ಪ್ರಯತ್ನ ನಡೆದಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದು, ಜನಪ್ರತಿನಿಧಿಗಳು ಕೂಡ ಜನರ ಪರವಾಗಿ ನಿಲ್ಲುತ್ತಿಲ್ಲ ಎಂಬ ಭಾವನೆ ಮೂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

1972ರಲ್ಲಿ ದಲಿತರಿಗೆ ನೀಡಿರುವ ಭೂಮಿ ದಾಖಲೆಗಳನ್ನು ಪರಿಗಣಿಸದೆ, ಬಡವರ ಭೂಮಿಯನ್ನು ಸಾಗುವಳಿ ಹೆಸರಿನಲ್ಲಿ ವಶಪಡಿಸಿಕೊಳ್ಳಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ವಿ.ಟಿ.ಯು. ಹಾಗೂ ಈಶಾ ಸಂಸ್ಥೆಗಳಿಗೆ ಸಂಬಂಧಿಸಿದ ಭೂಮಿಯ ವಿಚಾರದಲ್ಲೂ ಪ್ರಶ್ನೆಗಳನ್ನು ಎತ್ತಿದರು.

ತಹಶೀಲ್ದಾರ್ ರಶ್ಮಿ ಅವರ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿದ ಮುಖಂಡರು, ಈ ಸಮಸ್ಯೆಗೆ ಕಾರಣರಾಗಿರುವ ಅಧಿಕಾರಿಯ ವಿರುದ್ಧ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜೂನ್ 29ರೊಳಗೆ ಸಮಸ್ಯೆ ಬಗೆಹರಿಯದಿದ್ದರೆ ಬೃಹತ್ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

1991-92ರಲ್ಲಿ ಕಂದಾಯ ಇಲಾಖೆಯಿಂದ ಅರಣ್ಯ ಇಲಾಖೆಗೆ ಭೂಮಿ ಹಸ್ತಾಂತರ ಮಾಡುವಾಗ, ಈಗಾಗಲೇ ಜನರು ಸಾಗುವಳಿ ಮಾಡುತ್ತಿದ್ದ ಭೂಮಿಯ ಕುರಿತು ಯಾಕೆ ಪರಿಶೀಲನೆ ನಡೆಸಲಿಲ್ಲ ಎಂಬ ಪ್ರಶ್ನೆಯನ್ನೂ ಅವರು ಮುಂದಿಟ್ಟರು.
ಪರಮೇಶ್ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಕೂಡ ದಲಿತರ ಸಮಸ್ಯೆಯನ್ನು ನಿರ್ಲಕ್ಷಿಸಿದೆ. ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕಾಗಿದ್ದರೂ ಅದಾಗಿಲ್ಲ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಫಾರೆಸ್ಟ್ ಸೆಟ್ಲ್‌ಮೆಂಟ್ ಸೆಲ್‌ನಿಂದ ಕ್ಲಿಯರೆನ್ಸ್ ದೊರೆತಿದ್ದರೂ ಕಂದಾಯ ಇಲಾಖೆ ಅನಗತ್ಯ ತೊಂದರೆ ನೀಡುತ್ತಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇದನ್ನು ಓದಿದ್ದೀರಾ..? ಕೋಲಾರ | ಸುಳ್ಳು ಹೇಳುವವರ ಬಾಯಿ ಲೌಡ್ ಸ್ಪೀಕರ್ ಆಗಿದೆ, ಸತ್ಯ ಹೇಳುವವರ ಬಾಯಿಗೆ ಲಕ್ವಾ ಹೊಡೆದಿದೆ : ರಮೇಶ್ ಕುಮಾರ್

ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ಪರಮೇಶ್, ಜಿಲ್ಲಾ ಸಂಚಾಲಕ ಪಿ.ಜಿ. ಗಂಗಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಬಿ.ವಿ. ವೆಂಕಟರಮಣ, ಎನ್.ಎ. ವೆಂಕಟೇಶ್, ಸಂಘಟನಾ ಸಂಚಾಲಕ ಶ್ರೀರಂಗಪ್ಪ, ಕಲಾಮಂಡಳಿ ಸಂಚಾಲಕ ಇಸ್ಕೂಲಪ್ಪ, ಬಾಗೇಪಲ್ಲಿ ತಾಲೂಕು ಸಂಚಾಲಕ ಪೈಪಾಳ್ಯ ರವಿ, ಗೌರಿಬಿದನೂರಿನ ಟಿ. ನರಸಿಂಹಮೂರ್ತಿ, ಶಿಡ್ಲಘಟ್ಟ ತಾಲೂಕು ಸಂಚಾಲಕ ದೊಡ್ಡ ತಿರುಮಲಪ್ಪ, ಚಿಂತಾಮಣಿ ತಾಲೂಕು ಸಂಚಾಲಕ ಎಸ್.ಸಿ. ನಾರಾಯಣಸ್ವಾಮಿ, ಮಂಚೇನಹಳ್ಳಿ ತಾಲೂಕು ಸಂಚಾಲಕ ಎಂ. ನರಸಿಂಹಮೂರ್ತಿ, ಗುಡಿಬಂಡೆ ತಾಲೂಕು ಸಂಚಾಲಕ ಸಿ.ವಿ. ರಮಣ್ಣ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆರಿಗೆಯ ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ! ಬಾಲಕನ ವಿರುದ್ಧ ಪೋಕ್ಸೋ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ...

ಶೌಚಕ್ಕೆ ಬಾವಿ ನೀರು ಹೊರುವ ವಿದ್ಯಾರ್ಥಿಗಳು: ತಾತ್ಕಾಲಿಕವಷ್ಟೇ ಎಂದು ನುಣುಚಿದ ಆಡಳಿತ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ...

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims &...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...