ರಾಯಚೂರು | ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ದಸಂಸದಿಂದ ಪ್ರತಿಭಟನೆ

Date:

ಸುಪ್ರೀಂ ಕೋರ್ಟ್ ಅದೇಶದಂತೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ಕರೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಎನ್.ಮೂರ್ತಿ ಬಣ)ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಸುಪ್ರೀಂ ಕೋರ್ಟಿನ ತೀರ್ಪಿನಂತೆ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರುವಲ್ಲಿ ರಾಜ್ಯ ಸರಕಾರ ಹಿಂದೇಟು ಹಾಕುತ್ತಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

2023 -24 ಮತ್ತು 2024-24 ನೇ ಸಾಲಿನಲ್ಲಿ 25,391 ಕೋಟಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಅಭಿವೃದ್ಧಿಯ ಹಣವನ್ನು ದುರ್ಬಳಕ್ಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಣವನ್ನು ಅದೇ ಸಮಾಜದ ಅಭಿವೃದ್ಧಿಗೆ ವಾಪಸ್ ನೀಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ ? ಯಾದಗಿರಿ | ದಲಿತ ಯುವತಿಗೆ ಲೈಂಗಿಕ ದೌರ್ಜನ್ಯ; ಡಿವೈಎಸ್‌ಪಿ ಕಚೇರಿ ಎದುರು ದಸಂಸ ಧರಣಿ

ಪ.ಜಾತಿ, ಪ.ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಮೆರಿಟ್ ವಿದ್ಯಾರ್ಥಿ ವೇತನ ಸಮರ್ಪಕವಾಗಿ ನೀಡುತ್ತಿಲ್ಲ. ವಿದೇಶದಲ್ಲಿ ಎಸ್.ಸಿ, ಎಸ್.ಟಿ. ವ್ಯಾಸಂಗ ಮಾಡಲು ಪ್ರಬುದ್ಧ ಯೋಜನೆ ರದ್ದು ಮಾಡಲಾಗಿದೆ. ಪುನಃ ಆರಂಭಿಸಬೇಕೆಂದು ಆಗ್ರಹಿಸಿದರು.

ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣ ಜಾರಿಯಾಗುವವರೆಗೂ ಕೇಂದ್ರ ಮತ್ತು ರಾಜ್ಯದ ಎಲ್ಲಾ ಉದ್ಯೋಗ ನೇಮಕಾತಿಗಳನ್ನು ಸ್ಥಗಿತಗೊಳಿಸಬೇಕು, ಖಾಸಗಿ ಉದ್ಯೋಗ ಕ್ಷೇತ್ರ ಮತ್ತು ಗುತ್ತಿಗೆ ನೇಮಕಾತಿಗಳಲ್ಲಿಯೂ ಎಸ್.ಸಿ, ಎಸ್.ಟಿ ಮೀಸಲಾತಿ ಜಾರಿ ಮಾಡಬೇಕು. ಕೇಂದ್ರ ಸರ್ಕಾರ ಕೂಡಲೇ ಎಸ್‌ಸಿ, ಎಸ್‌ಟಿ ಅಭಿವೃದ್ಧಿಗಾಗಿ ಎಸ್‌ಸಿ, ಎಸ್‌ಟಿ ಕಾಯ್ದೆ ರಚಿಸಿ ಜನಸಂಖ್ಯೆಗನುಗುಣವಾಗಿ ಬಜೆಟ್‌ನಲ್ಲಿ ಹಣ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಇನ್ನೊಬ್ಬರಿಗೆ ಒಳಮೀಸಲಾತಿ ಬೇಡ ಎನ್ನುವ ಹಕ್ಕಾಗಲಿ, ನೈತಿಕತೆಯಾಗಲಿ ಯಾರಿಗೂ ಇಲ್ಲ- ದೇವನೂರ ಮಹಾದೇವ

ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾಧ್ಯಕ್ಷ ಅಶೋಕ ನಂಜಲದಿನ್ನಿ, ಉಪಾಧ್ಯಕ್ಷ ರಂಗಪ್ಪ ಕೋತಿಗುಡ್ಡ, ಎಂ. ಮನೋಹರ ಸಿರವಾರ, ರಾಜು ಬೊಮ್ಮ ನಾಳ, ಜಯರಾಜ್ ಟೈಗರ್, ಬಸವರಾಜ ನಾಡಂಗಿ ಕಲ್ಮಲ, ಹುಲುಗಪ್ಪ, ಯೇಸು, ಮೌನೇಶ, ಚಂದ್ರಪ್ಪ, ಬಸವರಾಜ, ಮಾರೆಪ್ಪ, ವಿಜಯ ಕುಮಾರ, ಆನಂದಪ್ಪ, ರಾಜಪ್ಪ ಸೇರಿದಂತೆ ಅನೇಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...