ರಾಯಚೂರು | ಅಪಘಾತದಲ್ಲಿ ಗಾಯಗೊಂಡ ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಭರಿಸಲು ದಲಿತ ವಿದ್ಯಾರ್ಥಿ ಪರಿಷತ್ ಮನವಿ

Date:

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ನಿನ್ನೆ ನಡೆದ ಭೀಕರ ಅಪಘಾತ ದುರಂತಕ್ಕೀಡಾದ ಬಾಲಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಹಾಗೂ ಗಾಯಗೊಂಡ ಮಕ್ಕಳ ವಿದ್ಯಾಭ್ಯಾಸದ ವೆಚ್ಚ ಭರಿಸಲು ಒತ್ತಾಯಿಸಿ ದಲಿತ ವಿಧ್ಯಾರ್ಥಿ ಪರಿಷತ್ ವತಿಯಿಂದ ಮಸ್ಕಿ ತಹಶೀಲ್ದಾರ್ ಮಲ್ಲಪ್ಪ ಯರಗೋಳ ಅವರಿಗೆ ಮನವಿ ಪತ್ರ ಸಲ್ಲಿಸಿದರು.

- Advertisement -

ವಿದ್ಯಾರ್ಥಿ ಯುವಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳ ಮೂಲಕ ಸರ್ಕಾರ ಕಾರ್ಯೋನ್ಮುಖರಾಗಿರುವ ಹಿನ್ನೆಲೆಯಲ್ಲಿ ಕೆಲವು ಸರ್ಕಾರಿ ಸಂಸ್ಥೆಯವರ ಬೇಜವಾಬ್ದಾರಿಯಿಂದ ಮತ್ತು ನಿರ್ಲಕ್ಷ್ಯದಿಂದ ಅಮಾಯಕರ ಜೀವ ಮತ್ತು ಜೀವನ ಬೀದಿ ಪಾಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಸ್ತೆಯಲ್ಲಿ ಗುಂಡಿ ಬಿದ್ದಿರುವುದರಿಂದ ಅದನ್ನು ತಪ್ಪಿಸುವುದಕ್ಕೆ ಹೋದಾಗ ಶಾಲಾ ಬಸ್ ಸಾರಿಗೆ ಬಸ್‌ಗೆ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಇದಕ್ಕೆ ನೇರ ಕಾರಣ ಕಳಪೆ ಕಾಮಗಾರಿ. ರಸ್ತೆಯನ್ನು ಮಾಡಿದ ಗುತ್ತಿಗೆದಾರರ ಲೈಸನ್ಸ್ ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ರಾಯಚೂರು

ರಸ್ತೆಯಲ್ಲಿ ಮಳೆಯಿಂದ ತೆಗ್ಗು, ಗುಂಡಿಗಳು ಬಿದ್ದು ಸಾವು-ನೋವು ಅನುಭವಿಸಿವೆ. ಸಂಬಂಧಪಟ್ಟ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಇಂತಹ ಭೀಕರ ಘಟನೆ ಸಂಭವಿಸಿದರೆ ಮಾತ್ರ ಕೆಲವು ದಿನ ಅರೆಬರೆ ಗುಂಡಿಗಳು ಮುಚ್ಚುತ್ತಾರೆ. ರಸ್ತೆ ಗುತ್ತಿಗೆದಾರರು ಬೇಕಾಬಿಟ್ಟಿ ಕಳಪೆ ಕಾಮಗಾರಿ ಮಾಡಿದ್ದಾರೆ ಎಂದು ಆರೋಪಿಸಿದರು. ಲೋಕೋಪಯೋಗಿ ಇಲಾಖೆ ಹಾಗೂ ಕೆ ಆರ್ ಡಿ ಎಲ್ ಇಲಾಖೆ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ

ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಮೌನೇಶ್ ತುಗ್ಗಲದಿನ್ನಿ, ಹುಸೇನಪ್ಪ ಇರಕಲ್ಲ, ಅಮರೇಶ್ ಭೋವಿ , ಮಲ್ಲಿಕಾರ್ಜುನ ಭೋವಿ , ಶರಣಪ್ಪ ದಿನಸಮುದ್ರ , ಮಲ್ಲಿಕ್ ಮುರಾರಿ , ಕಾಸಿಮಪ್ಪ ಡಿ ಮುರಾರಿ , ಪ್ರಸನ್ನ ಕಟ್ಟಿಮನಿ , ಸುದೀಪ್ ಬಸಾಪುರ , ಅನಂತ ಬಿ , ಸುರೇಶ , ರಾಹುಲ್ ಮಸ್ಕಿ. ರವಿ ದೇಸಾಯಿ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...