ವಿಜಯಪುರ | ಅಂಬೇಡ್ಕರ್ ಜೀವನಾಧಾರಿತ ಸ್ಪರ್ಧಾತ್ಮಕ ಪರೀಕ್ಷೆಗೆ ಚಾಲನೆ: ಒಟ್ಟು 6 ಲಕ್ಷ ಬಹುಮಾನ

Date:

Advertisements

2024-25 ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕ‌ರ್ ಕುರಿತಾದ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಅಕ್ಟೋಬರ್ 15 ರಿಂದ ನೋಂದಣಿ ಆರಂಭವಾಗಿದ್ದು ಫೆ.28 ನೊಂದಣಿ ಕೊನೆ ದಿನಾಂಕವಾಗಿರುತ್ತದೆ. ಇದಕ್ಕಾಗಿ ಆರು ಲಕ್ಷ ಬಹುಮಾನ‌‌ ಇಡಲಾಗಿದೆ. ಆಸಕ್ತರು ಭಾಗವಹಿಸಿ ಬಹುಮಾನ ಗೆಲ್ಲಬಹುದು ಎಂದು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಹೇಳಿದರು.

ವಿಜಯಪುರ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ನಾವು ಅಂಬೇಡ್ಕರ್ ಅವರ ವಿಚಾರಧಾರೆಗಳು, ಅವರ ವ್ಯಕ್ತಿತ್ವ ಹಾಗೂ ಭಾರತಕ್ಕೆ ಸಂವಿಧಾನ ಸಿದ್ಧಪಡಿಸಲು ಅವರು ಹಾಕಿರುವ ಶ್ರಮವನ್ನು ಹಿಗೆ ಅವರ ಜೀವನದ ಬಗ್ಗೆ ಸಾರ್ವಜನಿಕರಲ್ಲಿ, ಅದರಲ್ಲೂ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ, ಹಮ್ಮಿಕೊಳ್ಳುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆನ್‌ಲೈನ್ ಮಾದರಿಯಲ್ಲಿ ನಡೆಸಲಾಗುತ್ತಿದ್ದು, 125 ಅಂಕಗಳನ್ನು ಹೊಂದಿರಲಿವೆ. 100 ಪ್ರಶ್ನೆಗಳು ಕೇವಲ ಅಂಬೇಡ್ಕರ್ ಪ್ರಶ್ನೆಗಳಾಗಿದ್ದರೆ ಇನ್ನುಳಿದ 25 ಪ್ರಶ್ನೆಗಳು ಸಂವಿಧಾನದ ಕುರಿತಾಗಿವೆ. ಅದರಂತೆ ಪ್ರತಿ ನಾಲ್ಕು ತಪ್ಪು ಉತ್ತರಗಳಿಗೆ 1 ಸರಿ ಅಂಕವನ್ನು ಕಡಿತಗೊಳಿಸಲಾಗುತ್ತದೆ ಎಂದು ವಿವರಿಸಿದರು.

Advertisements

ಈ ವರ್ಷ 6 ಲಕ್ಷ ಬಹುಮಾನದ ಮೊತ್ತ ಇಡಲಾಗಿದ್ದು, ಪ್ರಥಮ ಬಹುಮಾನ 3 ಲಕ್ಷ, ದ್ವಿತೀಯ ಬಹುಮಾನ 2 ಲಕ್ಷ ಹಾಗೂ ತೃತೀಯ ಬಹುಮಾನ 1 ರೂಪಾಯಿ ನೀಡಲಾಗುತ್ತದೆ. ಈ ಕೆಳಕಂಡ ಈಮೇಲ್ WW.mydvp.org ಹಾಗೂ 9380678859 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.

ಪರೀಕ್ಷೆ ಬರೆಯಲು ಎಲ್ಲಾ ಜಾತಿ, ಧರ್ಮಕ್ಕೆ ಸೇರಿದವರಿಗೆ ಅವಕಾಶ ನೀಡಲಾಗಿದೆ. ನಿರ್ದಿಷ್ಟ ಜಾತಿ, ಧರ್ಮಕ್ಕೆ ಮೀಸಲಿರಿಸದೇ ಸಮಾಜದ ಎಲ್ಲ ಧರ್ಮದ ಯುವಕರು-ಯುವತಿಯರು ಬರೆಯಬಹುದಾಗಿದೆ. 2025ರ ಏ.14ರಂದು ಬಿ.ಆರ್ ಅಂಬೇಡ್ಕರ್ ಅವರ ಜನ್ಮದಿನದಂದು ಬಹುಮಾನ ವಿತರಣೆ ಮಾಡಲಾಗುವುದು’ ಎಂದು ಇದೇ ವೇಳೆ ಶ್ರೀನಾಥ್ ಪೂಜಾರಿ ತಿಳಿಸಿದರು.

ಈ ಸಂದರ್ಭದಲ್ಲಿ ಪರೀಕ್ಷೆ ಪೋಸ್ಟರ್ ಬಿಡುಗಡೆ ಮಾಡಿ, ಪರೀಕ್ಷೆ ನೋಂದಣಿ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಜಿಲ್ಲಾ ಘಟಕದ ಉಪಾಧ್ಯಕ್ಷ ಮಹಾದೇವ ಚಲವಾದಿ, ಮುಖಂಡ ಯಮನಪ್ಪ ಮಾದರ, ಸಲಹಾ ಸಮಿತಿಯ ಸದಸ್ಯ ಮಲ್ಲು ಕುಂಬಾರ ಇದ್ದರು.

1002067540
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X