ದಲಿತ ಯುವಕನಿಗೆ ಜಾತಿ ನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಕೆ ಕಟ್ಟಾಪುರ ಗ್ರಾಮದಲ್ಲಿ ನಡೆದಿದೆ.
ಮಾದಿಗ ಸಮುದಾಯಕ್ಕೆ ಸೇರಿದ ಹನುಮಂತ ಎಂಬಾತ ಹಲ್ಲೆಗೊಳಗಾದ ಯುವಕ. ಗ್ರಾಮದ ನಿವಾಸಿಗಳಾದ ಮಂಜಪ್ಪ , ಬರೆಪ್ಪ , ಮೌನೇಶ್ , ದುರುಗೇಶಪ್ಪ , ಪ್ರಕಾಶ ಹಲ್ಲೆ ಮಾಡಿದವರು ಎಂದು ಪ್ರಕರಣ ದಾಖಲಿಸಲಾಗಿದೆ.
ಹನುಮಂತ ಹೊಲದಿಂದ ಮನೆ ಕಡೆಗೆ ಹೋಗುವ ಮಾರ್ಗದಲ್ಲಿ ಗ್ರಾಮದ ಯುವಕರು ಮದ್ಯಪಾನ ಸೇವಿಸಿ ಕುಳಿತಿದ್ದರು. ಏಕಾಏಕಿ ಇವನ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹಲ್ಲೆ ಮಾಡುತ್ತಿದ್ದ ಯುವಕ ಕೂಗಾಡುತ್ತಿದ್ದ. ಈ ವೇಳೆ ಹೊಲದಲ್ಲಿದ್ದ ಹನುಮಂತನ ಸಹೋದರ ಧ್ವನಿ ಕೇಳಿಸಿಕೊಂಡು ಜಗಳ ಬಿಡಿಸಲು ಬಂದಿದ್ದಾನೆ. ಈ ವೇಳೆ ಅಣ್ಣನ ಮೇಲೆಯೂ ಹಲ್ಲೆ ಮಾಡಿದ್ದಾರೆ. ಸುತ್ತಮುತ್ತಲಿನ ಜನರು ಬರುವುದನ್ನು ನೋಡಿ ಓಡಿ ಹೋದರು ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಚನ್ನಗಿರಿ | ಟ್ರ್ಯಾಕ್ಟರ್ ನೋಂದಣಿಗೆ ರೈತನಿಂದ ಲಂಚ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಉಪತಹಶೀಲ್ದಾರ್
ಹಲ್ಲೆಗೊಳಗಾದ ಯುವಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದಿದ್ದಾರೆ. ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದರೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿರ್ಲಕ್ಷ್ಯಕ್ಕೆ ಕಾರಣ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

Koppal Nalli sullu kesu bahala agtaide. Corrupt officers and politicians ivella polisara jote serikondu madtaidare