ಕೊಪ್ಪಳ | ಜಾತಿ ನಿಂದನೆಗೈದು ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

Date:

ದಲಿತ ಯುವಕನಿಗೆ ಜಾತಿ ನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಕೆ ಕಟ್ಟಾಪುರ ಗ್ರಾಮದಲ್ಲಿ ನಡೆದಿದೆ.

- Advertisement -

ಮಾದಿಗ ಸಮುದಾಯಕ್ಕೆ ಸೇರಿದ ಹನುಮಂತ ಎಂಬಾತ ಹಲ್ಲೆಗೊಳಗಾದ ಯುವಕ. ಗ್ರಾಮದ ನಿವಾಸಿಗಳಾದ ಮಂಜಪ್ಪ , ಬರೆಪ್ಪ , ಮೌನೇಶ್ , ದುರುಗೇಶಪ್ಪ , ಪ್ರಕಾಶ ಹಲ್ಲೆ ಮಾಡಿದವರು ಎಂದು ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹನುಮಂತ ಹೊಲದಿಂದ ಮನೆ ಕಡೆಗೆ ಹೋಗುವ ಮಾರ್ಗದಲ್ಲಿ ಗ್ರಾಮದ ಯುವಕರು ಮದ್ಯಪಾನ ಸೇವಿಸಿ ಕುಳಿತಿದ್ದರು. ಏಕಾಏಕಿ ಇವನ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಲ್ಲೆ ಮಾಡುತ್ತಿದ್ದ ಯುವಕ ಕೂಗಾಡುತ್ತಿದ್ದ. ಈ ವೇಳೆ ಹೊಲದಲ್ಲಿದ್ದ ಹನುಮಂತನ ಸಹೋದರ ಧ್ವನಿ ಕೇಳಿಸಿಕೊಂಡು ಜಗಳ ಬಿಡಿಸಲು ಬಂದಿದ್ದಾನೆ. ಈ ವೇಳೆ ಅಣ್ಣನ ಮೇಲೆಯೂ ಹಲ್ಲೆ ಮಾಡಿದ್ದಾರೆ.‌ ಸುತ್ತಮುತ್ತಲಿನ ಜನರು ಬರುವುದನ್ನು ನೋಡಿ ಓಡಿ ಹೋದರು ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಚನ್ನಗಿರಿ | ಟ್ರ್ಯಾಕ್ಟರ್ ನೋಂದಣಿಗೆ ರೈತನಿಂದ ಲಂಚ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಉಪತಹಶೀಲ್ದಾರ್

ಹಲ್ಲೆಗೊಳಗಾದ ಯುವಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದಿದ್ದಾರೆ. ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದರೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿರ್ಲಕ್ಷ್ಯಕ್ಕೆ ಕಾರಣ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...