ಬಿಜೆಪಿ ರಾಜ್ಯಾಧ್ಯಕ್ಷನಾಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತೆ. ನಾನು ಕೂಡ ಬಿಜೆಪಿಯ ಹಿರಿಯ ನಾಯಕ. ಪಕ್ಷ ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯ ಘಟಕದ ಅಧ್ಯಕ್ಷ ಆಗಬಾರದೇ? ಎಂದು ಸಂಸದ ರಮೇಶ್ ಜಿಗಜಿಣಗಿ ಪ್ರಶ್ನಿಸಿದ್ದಾರೆ.
ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ ಅವರು, “ರಾಜ್ಯಾಧ್ಯಕ್ಷ ಯಾರು ಆಗಬೇಕೆಂದು ಬಹಿರಂಗ ಚರ್ಚೆ ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರಿಂದಲೇ ಆಯ್ಕೆಯಾಗುತ್ತಾರೆ” ಎಂದರು.
“ಅಧಿಕಾರಕ್ಕೆ ಬಂದಾಗ ಕಾರ್ಯಕರ್ತರ ಕಡೆ ಗಮನ ಹರಿಸಬೇಕು. ಮಂತ್ರಿಗಳಿದ್ದವರು, ಅಧಿಕಾರದಲ್ಲಿದ್ದವರು ಕಾರ್ಯಕರ್ತರ ಕಡೆ ಗಮನ ಕೊಡಬೇಕು. ಯಾರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಇದನ್ನು ಹೇಳಿಲ್ಲ. ಸಂಘಟನೆಯ ಬಗ್ಗೆ ಹೆಚ್ಚು ಗಮನ ಹರಿಸಬೇಕು” ಎಂದರು.
ನಿಮಗೆ ಅಕ್ಕಿ ಕೊಡುವ ಯೋಗ್ಯತೆ ಇಲ್ಲ
ನಿಮಗೆ ಅಕ್ಕಿ ಕೊಡುವ ಯೋಗ್ಯತೆ ಇಲ್ಲ ಅಂದರೆ ಸುಳ್ಳು ಹೇಳಿ ಯಾಕೆ ವೋಟ್ ತೆಗೆದುಕೊಂಡಿರಿ? ಬಡವರ ಬಗ್ಗೆ ಬಹಳ ಮಾತಾಡುತ್ತೀರಿ ಈಗ ಅಕ್ಕಿ ಕೊಡಿ. ಬಡವರನ್ನು ಗುತ್ತಿಗೆ ಹಿಡಿದಿದ್ದೀರಾ, ಇದೆಲ್ಲಾ ನಾಟಕ ಬಿಡಿ” ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
“ಸುಳ್ಳು ಹೇಳಿ ವೋಟ್ ತಗೊಂಡಿರೆ ಅದು ಬಹಳ ದಿನ ಉಳಿಯುವುದಿಲ್ಲ. ಸುಳ್ಳು ಹೇಳಿ ವೋಟ್ ತಗೊಂಡಿದ್ದಾರೆ. ಇದೇ ನಾಟಕ ಲೋಕಸಭಾ ಚುನಾವಣೆಯಲ್ಲಿ ನಡೆಯುವುದಿಲ್ಲ”ಎಂದರು.

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.