ದಲಿತರು ಸಿಎಂ ಸ್ಥಾನ ಬೇಡದೇ; ಹಕ್ಕಾಗಿ ಮಂಡಿಸಬೇಕು: ಲೇಖಕ ಸಿ. ಹರಕುಮಾರ್

Date:

ಮೈಸೂರಿನ ರೋಟರಿ ಸಭಾಂಗಣದಲ್ಲಿ ಶನಿವಾರ ದಸಂಸ ರಾಜ್ಯ ಸಂಚಾಲಕ ದಿ. ಲಕ್ಷ್ಮಿನಾರಾಯಣ ನಾಗವಾರ ಅವರ ಪ್ರಥಮ ವರ್ಷದ ಸ್ಮರಣಾರ್ಥ ನಡೆದ ‘ಗುರಿಮುಟ್ಟದ ದಲಿತ ರಾಜಕಾರಣ ಮತ್ತು ಮುಂದಿನ ನಡೆ’ ವಿಚಾರ ಸಂಕೀರಣದಲ್ಲಿ ಮಾತನಾಡಿದ ಲೇಖಕ ಸಿ. ಹರಿಕುಮಾರ್, ‘ದಲಿತರು ಸಿಎಂ ಸ್ಥಾನಕ್ಕಾಗಿ ಬೇಡದೇ, ಹಕ್ಕಾಗಿ ಮಂಡಿಸಬೇಕು’ ಎಂದು ಕಿವಿಮಾತು ಹೇಳಿದರು.

- Advertisement -

“ಸಿದ್ದರಾಮಯ್ಯ ಅಹಿಂದ ನಾಯಕರಾಗಿ, ಕೋಮುವಾದಿಗಳ ಕಡು ವಿರೋಧಿಯಾಗಿ ಗುರುತಿಸಿಕೊಂಡು, ಕಂದಾಚಾರ, ಮೌಢ್ಯಗಳನ್ನು ದಿಕ್ಕರಿಸಿ ರಾಜಕಾರಣದ ವಿಚಾರ ಬಂದಾಗ ಅಧಿಕಾರಕ್ಕಾಗಿ ಬೇಡಿಕೆಯ ಹಕ್ಕನ್ನು ಸಮರ್ಥವಾಗಿ ಮಂಡಿಸುತ್ತಾರೆ. ಎಲ್ಲಾ ಸಮುದಾಯದವರನ್ನು ತಮ್ಮೊಟ್ಟಿಗೆ ಕರೆದೊಯ್ಯುವ ಚಾಣಾಕ್ಷತನ ಎರಡು ಬಾರಿ ಮುಖ್ಯಮಂತ್ರಿಯಾಗುವಂತೆ ಮಾಡಿದೆ. ಇದುವರೆಗೆ ದಲಿತರು ಹಕ್ಕು ಮಂಡಿಸದೆ, ಕೇವಲ ಬೇಡುವುದೇ ಆಗಿರುವುದು ಸಮಾಜದ ಹಿನ್ನಡೆಗೆ ಕಾರಣ. ಸಚಿವ ಸತೀಶ್ ಜಾರಕಿಹೊಳಿ 2028ಕ್ಕೆಮುಖ್ಯಮಂತ್ರಿಹುದ್ದೆ ಕೇಳುವುದಾಗಿ ಹೇಳಿದ್ದಾರೆ. ಆದರೇ, ಹಕ್ಕು ಮಂಡಿಸುತಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, “ದಲಿತರ ಮುಂದಿನ ನಡೆ ಅಧಿಕಾರ ಹಿಡಿಯುವ ಕಡೆಗೆ ಸಾಗಬೇಕಿದೆ. ಕೇವಲ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಕೊಟ್ಟರೆ ಸಾಲದು. ಆರಂಭದಲ್ಲಿಯೇ ಷರತ್ತು ವಿಧಿಸಿ ಬೆಂಬಲ ಕೊಡುವಂತೆ ಹೇಳಿದ್ದೆ. ಆದರೇ, ಮುಖಂಡರು ಈ ಬಾರಿ ಸಮುದಾಯಕ್ಕೆ ಅಧಿಕಾರ ಸಿಗಲಿದೆ ಎನ್ನುವ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದರು. ಇದರಿಂದ, ರಾಜಕೀಯ ಶಕ್ತಿ ಹೊಂದುವ ಗುರಿ ತಲುಪಲು ಸಾಧ್ಯವಾಗುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸಂಘಟನಾ ಸಂಚಾಲಕ ದೇವಗಳ್ಳಿ ಸೋಮಶೇಖರ್ ಮಾತನಾಡಿ, “ಅಹಿಂದ ವರ್ಗ ಇರುವುದು ತಮಗಾಗಿ ಮಾತ್ರವೋ, ಇಲ್ಲಾ ಎಲ್ಲಾ ಸಮುದಾಯಗಳ ಒಳಗೊಳ್ಳುವಿಕೆಗೆ ಎಂಬುದನ್ನು ಸಿಎಂ ಸಿದ್ದರಾಮಯ್ಯನವರು ಅರಿತುಕೊಳ್ಳಬೇಕು. ದಲಿತರನ್ನು ಕೇವಲ ಮತ ಬ್ಯಾಂಕಾಗಿ ಬಳಸುವುದನ್ನು ಮೊದಲು ನಿಲ್ಲಿಸಬೇಕು. ರಾಜ್ಯದಲ್ಲಿ ಉನ್ನತ ಸ್ಥಾನಮಾನಗಳನ್ನು ನೀಡುವುದರ ಮೂಲಕ ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ನಾಮಧಾರಿ ಗೌಡ ಸಮುದಾಯವನ್ನು ಪ್ರವರ್ಗ 2ಎ ಸೇರಿಸುವ ಪ್ರಯತ್ನಕ್ಕೆ ಪ್ರಾಮಾಣಿಕ ಬೆಂಬಲ: ಹೆಚ್ ಡಿ ಕುಮಾರಸ್ವಾಮಿ

ವಿಚಾರಸಂಕೀರಣದಲ್ಲಿ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ದಸಂಸ ಹಿರಿಯ ಮುಖಂಡ ಹರಿಹರ ಆನಂದಸ್ವಾಮಿ, ವಿಭಾಗಿಯ ಸಂಚಾಲಕ ರಾಜಶೇಖರ್ ಕೋಟೆ, ಜಿಲ್ಲಾ ಸಂಚಾಲಕ ಸರಗೂರು ಸಣ್ಣಸ್ವಾಮಿ,ರಾಜ್ಯ ದಲಿತ ಮಹಿಳಾ ಒಕ್ಕೂಟದ ಸಂಚಾಲಾಕಿ ಜಾನಕಮ್ಮ ಲಕ್ಸ್ಮಿ ನಾರಾಯಣ ನಾಗವಾರ, ರಾಜ್ಯ ಕಾರ್ಯಕಾರಿ ಸಂಚಾಲಕ ಭುಗತಗಳ್ಳಿ ಕೆ. ಮಣಿಯಯ್ಯ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...