ದಾಂಡೇಲಿ | ಬಡ ರೋಗಿಗಳಿಂದ ಹಣ ವಸೂಲಿ ಆರೋಪ: ವೈದ್ಯರಿಗೆ ಶಾಸಕ ಆರ್.ವಿ. ದೇಶಪಾಂಡೆ ಖಡಕ್ ಸೂಚನೆ

Date:

ದಾಂಡೇಲಿ: “ನಾವು ಹಣ ಕೇಳುವುದಿಲ್ಲ, ಅವರೇ ಕೊಟ್ಟರೆ ತೆಗೆದುಕೊಳ್ಳುತ್ತೇವೆ” ಎಂಬ ವೈದ್ಯರ ಉಡಾಫೆ ಮಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು, ಬಡ ರೋಗಿಗಳಿಂದ ಹಣ ವಸೂಲಿ ಮಾಡುವ ವೈದ್ಯರ ವಿರುದ್ಧ ಕಠಿಣ ಎಚ್ಚರಿಕೆ ನೀಡಿದ ಘಟನೆ ನಗರದ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.

- Advertisement -

ದಾಂಡೇಲಿಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ ಬಡ ಕುಟುಂಬಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಗಂಭೀರ ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಈ ಹಿನ್ನೆಲೆಯಲ್ಲಿ ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ-ಮಕ್ಕಳ ಆರೋಗ್ಯ ಆಸ್ಪತ್ರೆಯ ‘ಆರೋಗ್ಯ ರಕ್ಷಾ ಸಮಿತಿ’ ಸಭೆಯಲ್ಲಿ ಶಾಸಕರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ಆಸ್ಪತ್ರೆಯ ಸೌಲಭ್ಯಗಳು, ರೋಗಿಗಳ ಸೇವೆ ಮತ್ತು ಔಷಧಿ ಲಭ್ಯತೆ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ, ಬಡ ರೋಗಿಗಳಿಂದ ಹಣ ಪಡೆಯುತ್ತಿರುವ ಭ್ರಷ್ಟಾಚಾರದ ವಿಷಯ ಪ್ರಸ್ತಾಪವಾಯಿತು.

ಈ ಸುದ್ದಿ ಓದಿದ್ದೀರಾ? ಕಾರವಾರ | ನೌಕಾಬಲಕ್ಕೆ ಆನೆಬಲ: ಕಲ್ವರಿ ಸಬ್‌ಮೆರಿನ್ ನಿರ್ವಹಣಾ ಕೇಂದ್ರ ಲೋಕಾರ್ಪಣೆ

ಆಸ್ಪತ್ರೆಯ ವೈದ್ಯರಾದ ಡಾ. ಅಖಿಲ ಕಿತ್ತೂರ ಮತ್ತು ಡಾ. ಕೀರ್ತಿ ಎಂಬುವವರು ಹೆರಿಗೆ ಮತ್ತು ಸಿಜೇರಿಯನ್ ನಂತರ ರೋಗಿಗಳಿಂದ ಸುಮಾರು 15,000 ದಿಂದ 20,000 ರೂಪಾಯಿ ವರೆಗೆ ಹಣ ಪಡೆಯುತ್ತಿದ್ದಾರೆ ಎಂದು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದಿದ್ದರು.

ಈ ಬಗ್ಗೆ ಶಾಸಕರು ವೈದ್ಯರನ್ನು ಪ್ರಶ್ನಿಸಿದಾಗ, “ನಾವು ಯಾರಿಂದಲೂ ಕೇಳಿ ಪಡೆಯುವುದಿಲ್ಲ, ಅವರಾಗಿ ಕೊಟ್ಟಿದ್ದನ್ನು ಮಾತ್ರ ಸ್ವೀಕರಿಸುತ್ತೇವೆ” ಎಂದು ವೈದ್ಯರು ವಿಚಿತ್ರವಾಗಿ ಸಮರ್ಥಿಸಿಕೊಂಡರು.ವೈದ್ಯರ ಈ ಸಮರ್ಥನೆಯಿಂದ ಕುಪಿತಗೊಂಡ ದೇಶಪಾಂಡೆ ಅವರು, “ನಾವು ಕೇಳುವುದಿಲ್ಲ, ಕೊಟ್ಟಷ್ಟು ತೆಗೆದುಕೊಳ್ಳುತ್ತೇವೆ ಎಂದರೆ ಏನರ್ಥ?” ಎಂದು ಗುಡುಗಿದರು.

ಮುಂದೆ ಯಾರಿಂದಾದರೂ ಹಣ ಸ್ವೀಕರಿಸಿದರೆ ನೇರವಾಗಿ ಪೊಲೀಸ್ ದೂರು ದಾಖಲಿಸುವುದಾಗಿ ಎಚ್ಚರಿಕೆ ನೀಡಿದ ಶಾಸಕರು, ಇದುವರೆಗೆ ಯಾರಿಂದೆಲ್ಲಾ ಹಣ ಪಡೆಯಲಾಗಿದೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲು ತಹಶೀಲ್ದಾರರಿಗೆ ಸೂಚನೆ ನೀಡಿದರು.

“ಬಡವರ ಹತ್ತಿರ ಸುಲಿಗೆ ಮಾಡಿದರೆ ಹುಷಾರ್, ನನ್ನ ಮೇಲೆ ಪ್ರಕರಣ ದಾಖಲಾದರೂ ಸರಿ, ಇಂತಹ ಭ್ರಷ್ಟಾಚಾರವನ್ನು ನಾನು ಸಹಿಸುವುದಿಲ್ಲ” ಎಂದು ಕಟ್ಟುನಿಟ್ಟಾಗಿ ಎಚ್ಚರಿಸಿದರು. ಈ ಸಭೆಯಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...