​​ದಾಂಡೇಲಿ | ಯುವತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪ; ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ FIR ದಾಖಲು

Date:

ದಾಂಡೇಲಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳು 18 ವರ್ಷದ ಯುವತಿಯೊಬ್ಬಳಿಗೆ ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಈ ಘಟನೆ ತೀವ್ರ ಸಂಚಲನ ಮೂಡಿಸಿದೆ.

- Advertisement -

ಘಟನೆಯ ವಿವರ: ಜುಲೈ 4ರಂದು ಅಪಘಾತಕ್ಕೀಡಾಗಿದ್ದ ತನ್ನ ಸ್ನೇಹಿತನನ್ನು ಭೇಟಿಯಾಗಲು ಹಾಗೂ ಆತನ ವಶದಲ್ಲಿದ್ದ ಮೊಬೈಲ್ ಪಡೆಯಲು ಯುವತಿ ತನ್ನ ಸ್ನೇಹಿತೆಯೊಂದಿಗೆ ದಾಂಡೇಲಿ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಠಾಣಾ ಆವರಣದಲ್ಲಿದ್ದ ದ್ವಿಚಕ್ರ ವಾಹನವನ್ನು ಬಿಡಿಸಿಕೊಡುವ ನೆಪದಲ್ಲಿ ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ನೀಡಿದ ಬಳಿಕವಷ್ಟೇ ವಾಹನವನ್ನು ಬಿಡುಗಡೆ ಮಾಡಲಾಗಿದೆ ಎಂದು ಯುವತಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಆರತಿಬೈಲು ಬಳಿ ಭೀಕರ ಅಪಘಾತ; ಪ್ರವಾಸಕ್ಕೆ ಹೊರಟಿದ್ದ ಧಾರವಾಡದ ಆರು ಮಂದಿ ದುರ್ಮರಣ

ಕೆಲವು ದಿನಗಳ ನಂತರ, ಠಾಣೆಯ ದಾಖಲೆಗಳಲ್ಲಿ ಲಭ್ಯವಿದ್ದ ಯುವತಿಯ ಮೊಬೈಲ್ ಸಂಖ್ಯೆಯನ್ನು ದುರ್ಬಳಕೆ ಮಾಡಿಕೊಂಡು, ಆರೋಪಿಗಳಲ್ಲಿ ಒಬ್ಬಾತ ವಾಟ್ಸಾಪ್ ಮೂಲಕ ಸಂಪರ್ಕ ಸಾಧಿಸಿದ್ದಾನೆ. ಜುಲೈ 6ರಂದು ರಾತ್ರಿ ವೇಳೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಫೋನ್ ಕರೆ ಮಾಡಿ ಅಸಭ್ಯವಾಗಿ ವರ್ತಿಸುವ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಆರಂಭದಲ್ಲಿ ಸ್ಥಳೀಯವಾಗಿ ನೀಡಿದ ದೂರಿನ ಮೇಲೆ ಯಾವುದೇ ಕ್ರಮ ಜರುಗಿಸಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಯುವತಿ, ನಂತರ ಕಾರವಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಖುದ್ದು ಭೇಟಿಯಾಗಿ ದೂರು ನೀಡಿದ್ದರು. ಇದರ ಬೆನ್ನಲ್ಲೇ ಜುಲೈ 8ರಂದು ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪ್ರಕರಣದ ಗಂಭೀರತೆಯನ್ನು ಅರಿತ ಪೊಲೀಸರು, ಆರೋಪಿಗಳು ಕಳುಹಿಸಿದ ವಾಟ್ಸಾಪ್ ಸಂದೇಶಗಳು, ಕರೆಗಳ ವಿವರಗಳು ಹಾಗೂ ಇತರೆ ಡಿಜಿಟಲ್ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದಾರೆ. ಕಾನೂನು ಪಾಲಿಸಬೇಕಾದವರೇ ಇಂತಹ ಕೃತ್ಯದಲ್ಲಿ ತೊಡಗಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...