ದಾಂಡೇಲಿ | ‘ಮೇವಾ ಮೋದಕ್’ ಹೆಸರಿನಲ್ಲಿ ಮಾದಕ ವಸ್ತು ಮಾರಾಟ ಆರೋಪ; ಪೊಲೀಸ್ ದಾಳಿ, 1.986 ಕೆ.ಜಿ. ವಸ್ತು ಜಪ್ತಿ

Date:

ದಾಂಡೇಲಿ: ನಗರದ ಜೆ.ಎನ್. ರಸ್ತೆಯಲ್ಲಿರುವ ಎಸ್.ಕೆ. ಏಜೆನ್ಸಿ ಹೊಲ್ಸೇಲ್ ಅಂಗಡಿಯಲ್ಲಿ ‘SANAN MEWA MODAK (SPECIAL)’ ಹೆಸರಿನಲ್ಲಿ ಮಾದಕ ಅಂಶ ಹೊಂದಿರುವ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ,

- Advertisement -

ದಾಂಡೇಲಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ. ಕಿರಣ ಪಾಟೀಲ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಪಂಚರ ಸಮಕ್ಷಮ ಶನಿವಾರ ದಾಳಿ ನಡೆಸಿ, ಸುಮಾರು 1 ಕೆ.ಜಿ. 986 ಗ್ರಾಂ ತೂಕದ ಮಾದಕ ಅಂಶ ಹೊಂದಿರುವ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಮಧ್ಯಾಹ್ನ ಸುಮಾರು 1.10 ಗಂಟೆಗೆ ಎಸ್.ಕೆ. ಏಜೆನ್ಸಿ ಅಂಗಡಿಗೆ ದಾಳಿ ನಡೆಸಿದ ವೇಳೆ, ಯಾವುದೇ ಪರವಾನಗಿ ಇಲ್ಲದೆ ಸಾರ್ವಜನಿಕರಿಗೆ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ‘SANAN MEWA MODAK (SPECIAL)’ ಹೆಸರಿನ 10 ಚಿಕ್ಕ ರಟ್ಟಿನ ಬಾಕ್ಸ್‌ಗಳು ಪತ್ತೆಯಾಗಿವೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ತಂದೆ ಹತ್ಯೆ, ತಾಯಿ ಜೈಲು ಪಾಲು; ಅನಾಥರಾದ ಮಕ್ಕಳ ನೆರವಿಗೆ ಧಾವಿಸಿದ ಶಾಸಕ ಭೀಮಣ್ಣ ನಾಯ್ಕ್

ಉತ್ಪನ್ನದ ಪ್ಯಾಕೆಟ್ ಮೇಲೆ Cannabis Sativa ಅಂಶ ಇರುವುದಾಗಿ ನಮೂದಿಸಲಾಗಿತ್ತು. ಮಾಹಿತಿ ದೊರೆತ ತಕ್ಷಣ ಸ್ಥಳಕ್ಕೆ ಆಗಮಿಸಿದ ಎಸ್‌ಒಸಿಒ (SOCO – Scene of Crime Officer) ಅಧಿಕಾರಿಗಳು ಪ್ರಾಥಮಿಕ ಪರೀಕ್ಷಾ ಕಿಟ್ ಮೂಲಕ ಪರಿಶೀಲನೆ ನಡೆಸಿದಾಗ, ಉತ್ಪನ್ನದಲ್ಲಿ ಮಾದಕ ಅಂಶ ಇರುವುದಾಗಿ ಪ್ರಾಥಮಿಕವಾಗಿ ದೃಢಪಟ್ಟಿದೆ.

ಬಳಿಕ ಪಂಚರ ಸಮಕ್ಷಮ ಒಟ್ಟು 1 ಕೆ.ಜಿ. 986 ಗ್ರಾಂ ತೂಕದ 10 ಬಾಕ್ಸ್‌ಗಳನ್ನು ಕಾನೂನುಬದ್ಧವಾಗಿ ಜಪ್ತಿ ಮಾಡಲಾಗಿದೆ. ಈ ಸಂಬಂಧ ನಿರ್ಮಲನಗರ ನಿವಾಸಿ ಹಾಗೂ ಎಸ್.ಕೆ. ಏಜೆನ್ಸಿ ಅಂಗಡಿ ಮಾಲೀಕ ಸಂಜಯ ಮುರಳೀಧರ ಮಹೇಶ್ವರಿ (62) ವಿರುದ್ಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚಿನ ದಿನಗಳಲ್ಲಿ ದಾಂಡೇಲಿ ನಗರದಲ್ಲಿ ಮಾದಕ ವಸ್ತುಗಳ ವಿರುದ್ಧ ಪಿ.ಎಸ್.ಐ. ಕಿರಣ ಪಾಟೀಲ ಅವರು ನಿರಂತರವಾಗಿ ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸುತ್ತಿದ್ದು, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ನಿಲುವು ತಾಳಿರುವುದು ಗಮನಾರ್ಹವಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಪಿ.ಎಸ್.ಐ. ಅಮೀನಸಾಬ ಅತ್ತಾರ್ ಕೈಗೊಂಡಿದ್ದು, ಮಾದಕ ವಸ್ತುಗಳ ಸರಬರಾಜು ಜಾಲ, ಮೂಲ ಪೂರೈಕೆದಾರರು ಹಾಗೂ ಇತರರ ಪಾತ್ರದ ಕುರಿತು ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...