ದಾಂಡೇಲಿ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕರ್ಕಾ ಕ್ರಾಸ್ ಹಾಗೂ ಅಜಗಾಂವ ರಸ್ತೆಯ ಮಧ್ಯೆ ಸೋಮವಾರ ಸಂಜೆ ಸಂಭವಿಸಿದೆ.
ಘಟನೆಯ ವಿವರ: ಧಾರವಾಡದ ಫಾರೂಖ್ ಸಾಬ್ ಹಾಗೂ ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತಪಟ್ಟ ದುರ್ದೈವಿಗಳು. ಇವರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ.
ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಎರಡು ಮರಗಳ ನಡುವೆ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸಮಯದಲ್ಲಿ ಕಾರಿನಲ್ಲಿ ಒಟ್ಟು ಮೂವರು ಪ್ರಯಾಣಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡಿರುವ ಚಾಲಕನನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಶಿರಸಿ | ಆಯುರ್ವೇದ ವೈದ್ಯ ಕೊಲೆ ಪ್ರಕರಣ: 24 ಗಂಟೆಯೊಳಗೆ ಆರೋಪಿಯ ಬಂಧನ, 15 ಲಕ್ಷದ ಚಿನ್ನಾಭರಣ ವಶ
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.





