ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

Date:

ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳೆದ ಎರಡು ವರ್ಷಗಳಿಂದ ಅಪೂರ್ಣವಾಗಿದ್ದು, ಕಳಪೆ ಗುಣಮಟ್ಟದ ಕಾಮಗಾರಿ ನಡೆಸಲಾಗಿದೆ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ಡಿ. ಸ್ಯಾಮ್ಸನ್, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

- Advertisement -

ನಗರ ಪಾರ್ಕ್ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ಅರಣ್ಯ ಇಲಾಖೆಗೆ ಒಟ್ಟು 3 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಇದರಲ್ಲಿ ಈಗಾಗಲೇ 1 ಕೋಟಿ ರೂ. ಬಿಡುಗಡೆಯಾಗಿದೆ. ಆದರೆ, ಎರಡು ವರ್ಷಗಳ ಹಿಂದೆ ಆರಂಭವಾದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಬಿಡುಗಡೆಯಾದ ಅನುದಾನಕ್ಕೆ ತಕ್ಕಂತೆ ಕೆಲಸ ನಡೆಯದೆ, ಗುತ್ತಿಗೆದಾರರಿಗೆ ಭಾಗಶಃ ಕಾಮಗಾರಿ ನಡೆಸಿದರೂ ಹಣ ಪಾವತಿಸಲಾಗಿದೆ ಎಂಬ ಮಾಹಿತಿ ಇದೆ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಪಾರ್ಕ್ ಅಭಿವೃದ್ಧಿ ಕಾಮಗಾರಿಯ ಮೇಲ್ವಿಚಾರಣೆಗಾಗಿ ರಚಿಸಿರುವ ದಂಡಕಾರಣ್ಯ ಸಮಿತಿಗೆ ಡಿಸಿಎಫ್ ಅಧ್ಯಕ್ಷರಾಗಿದ್ದು, ಆರ್‌ಎಫ್‌ಒ ಕಾರ್ಯದರ್ಶಿಯಾಗಿದ್ದಾರೆ. ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿಯೇ ಯೋಜನೆ ಪೂರ್ಣಗೊಳ್ಳದೆ ಉಳಿದಿದ್ದು, ಅನುದಾನದ ಬಳಕೆಯ ಬಗ್ಗೆಯೂ ಅನುಮಾನಗಳಿವೆ ಎಂದು ಸ್ಯಾಮ್ಸನ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ಯೋಜನೆ ಸಮರ್ಪಕವಾಗಿ ಪೂರ್ಣಗೊಂಡಿದ್ದರೆ ಮಕ್ಕಳಿಗೆ ದೈಹಿಕ ಚಟುವಟಿಕೆ ನಡೆಸಲು ಕ್ರೀಡಾ ಉಪಕರಣಗಳು, ಜಿಮ್ ಸಲಕರಣೆಗಳು, ಮೀನುಗಳ ಅಕ್ವೇರಿಯಂ, ಹಾರ್ನ್‌ಬಿಲ್ ಪ್ರತಿಮೆ, ಮನರಂಜನೆ ಹಾಗೂ ವೈಜ್ಞಾನಿಕ ತಿಳಿವಳಿಕೆ ನೀಡುವ ಕೇಂದ್ರ ಸೇರಿದಂತೆ ಹಲವು ಸೌಲಭ್ಯಗಳು ಸಾರ್ವಜನಿಕರಿಗೆ ಲಭ್ಯವಾಗುತ್ತಿದ್ದವು. ಇದರಿಂದ ದಾಂಡೇಲಿಯ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಗುತ್ತಿತ್ತು. ಆದರೆ, ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಯೋಜನೆಯ ಉದ್ದೇಶವೇ ಈಡೇರದಂತಾಗಿದೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ನಿರ್ಮಿಸಿರುವ ಕೆಲವು ಭಾಗಗಳಲ್ಲಿ ಪಾಚಿ ಬೆಳೆದಿದ್ದು, ಹುಲ್ಲು ಮತ್ತು ಕಸಕಡ್ಡಿಗಳು ತುಂಬಿಕೊಂಡಿವೆ. ಇದರಿಂದ ಪಾರ್ಕ್ ಪರಿಸರದ ಅಂದ ಹಾಳಾಗಿದ್ದು, ಸಾರ್ವಜನಿಕರ ಬಳಕೆಗೆ ಯೋಗ್ಯವಾಗಿಲ್ಲ. ದಂಡಕಾರಣ್ಯ ಸಮಿತಿಯೂ ನಿರೀಕ್ಷಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಇಚ್ಛಾಶಕ್ತಿಯ ಕೊರತೆಯಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.

ಇದಲ್ಲದೆ, ದಾಂಡೇಲಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಕಂಪಾರ್ಟ್‌ಮೆಂಟ್ 5/2ರ ಗಾಂಧಿನಗರ ಈದ್ಗಾ ಮೈದಾನ ಸೇರಿದಂತೆ ಕೆಲವು ಕಡೆಗಳಲ್ಲಿಯೂ ಕಾಮಗಾರಿಗಳು ಅಪೂರ್ಣವಾಗಿವೆ. ದಾಖಲೆಗಳಲ್ಲಿ ಕಾಮಗಾರಿ ಮುಂದುವರಿದಿರುವಂತೆ ತೋರಿಸಲಾಗುತ್ತಿದ್ದರೂ, ಸ್ಥಳದಲ್ಲಿ ಸಮರ್ಪಕವಾಗಿ ಕೆಲಸ ನಡೆದಿಲ್ಲ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.

ದಂಡಕಾರಣ್ಯ ಕಾಮಗಾರಿಯ ಗುತ್ತಿಗೆ ಪಡೆದ ವ್ಯಕ್ತಿ, ಕೆಲಸ ಮಾಡಿದ ಕಾರ್ಮಿಕರಿಗೆ ಸಮರ್ಪಕ ವೇತನ ನೀಡಿಲ್ಲ ಎಂಬ ಮಾಹಿತಿಯೂ ಇದೆ. ಈ ಎಲ್ಲ ವಿಚಾರಗಳನ್ನು ಅರಣ್ಯ ಇಲಾಖೆಯ ಮೇಲಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಬೇಕು. ಕಾಮಗಾರಿಯ ಗುಣಮಟ್ಟ ಹಾಗೂ ಅನುದಾನದ ಬಳಕೆಯನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಪೂರ್ಣವಾಗಿರುವ ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಡಿ. ಸ್ಯಾಮ್ಸನ್ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಚಾಕೋಲೆಟ್ ಆಮಿಷವೊಡ್ಡಿ ಅಪ್ರಾಪ್ತತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣ ದಾಖಲು

ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 12 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದು ಲೈಂಗಿಕ...

ಉಡುಪಿ | ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಬೆದರಿಕೆ? ₹42.97 ಲಕ್ಷ ವಂಚನೆ ಆರೋಪ; ಇಬ್ಬರ ಬಂಧನ

ಮದುವೆ ಪ್ರಸ್ತಾಪದ ವಿಚಾರವಾಗಿ ಪರಿಚಯವಾಗಿದ್ದ ಮಹಿಳೆಯೊಬ್ಬರು ಹಾಗೂ ಇತರರು ಸೇರಿ ಬೆದರಿಕೆ...

ಉಡುಪಿ | ಪಕ್ಷ ಸಂಘಟನೆ ಜತೆಗೆ ಜನಸೇವೆಯಲ್ಲೂ ರಮೇಶ್ ಕಾಂಚನ್ ಮುಂಚೂಣಿ: ಸೊರಕೆ

ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ...

ಚಿಕ್ಕಮಗಳೂರು | ಭದ್ರಾ ಉಪಕಣಿವೆ ಯೋಜನೆ: ತುರ್ತಾಗಿ ತುಂಬಿಸಿ; ರೈತ ಸಂಘ ಗುರುಶಾಂತಪ್ಪ

ಅಜ್ಜಂಪುರ ತಾಲ್ಲೂಕಿನಲ್ಲಿ ಬರಗಾಲ ಅನುಭವಿಸುತ್ತಿರುವ  ಜನರ ಒಳಿತಿಗೆ ಭದ್ರಾ ಉಪಕಣಿವೆ ಯೋಜನೆ...