ದಾಂಡೇಲಿ | ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ: ಸಚಿವ ರಾಮಲಿಂಗ ರೆಡ್ಡಿ ಎಚ್ಚರಿಕೆ

Date:

ದಾಂಡೇಲಿ: ರಾಜ್ಯದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಸಂಬಂಧಪಟ್ಟ ಆರ್‌ಟಿಒ ಮತ್ತು ಎ.ಆರ್.ಟಿ.ಒ ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಅವರು ತಿಳಿಸಿದ್ದಾರೆ.

- Advertisement -

​ಶುಕ್ರವಾರ ದಾಂಡೇಲಿಯಲ್ಲಿ 6.55 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರಿಗೆ ಇಲಾಖೆಯ ಬಹುತೇಕ ಸೇವೆಗಳನ್ನು ಈಗಾಗಲೇ ಆನ್‌ಲೈನ್ ಮಾಡಲಾಗಿದ್ದು, ಸಾರ್ವಜನಿಕರು ಮಧ್ಯವರ್ತಿಗಳ ಮೊರೆ ಹೋಗುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಾಜ್ಯದಲ್ಲಿ ಸದ್ಯ 20 ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು ಕಾರ್ಯಾರಂಭ ಮಾಡಿವೆ. ಇನ್ನು 25 ಕಡೆಗಳಲ್ಲಿ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿವೆ. ಇದರೊಂದಿಗೆ ಒಟ್ಟು 45 ಪಥಗಳು ಸಿದ್ಧವಾಗಲಿದ್ದು,

ದೇಶದಲ್ಲೇ ಅತೀ ಹೆಚ್ಚು ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. ಈ ಪಥಗಳು ಸಂಪೂರ್ಣವಾಗಿ ಸೆನ್ಸರ್ ಆಧಾರಿತವಾಗಿದ್ದು, ಮಾನವ ಹಸ್ತಕ್ಷೇಪವಿಲ್ಲದೆ ಪಾರದರ್ಶಕವಾಗಿ ಪರೀಕ್ಷೆ ನಡೆಯಲಿದೆ.

ವಾಹನಗಳ ಫಿಟ್ನೆಸ್ (ಪರಿಶೀಲನೆ) ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ‘ಜಿಯೋ ಫೆನ್ಸಿಂಗ್’ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಇದರಿಂದ ವಾಹನಗಳು ಕಡ್ಡಾಯವಾಗಿ ಕಚೇರಿಗೆ ಬಂದರೆ ಮಾತ್ರ ತಪಾಸಣೆ ಸಾಧ್ಯವಾಗಲಿದೆ. ಇದರೊಂದಿಗೆ ರಾಜ್ಯದ ವಾಣಿಜ್ಯ ವಾಹನಗಳ ಲೋಕೇಶನ್ ಟ್ರ್ಯಾಕಿಂಗ್ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದರು.

ಇತ್ತೀಚೆಗೆ ನಡೆದ ಸ್ಲೀಪರ್ ಬಸ್ ಅಪಘಾತಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತಂದಿದೆ. ಖಾಸಗಿ ಬಸ್ ಮಾಲೀಕರು ಈ ತಿಂಗಳ ಅಂತ್ಯದೊಳಗೆ ಸರ್ಕಾರದ ನಿಯಮಗಳಿಗೆ ಒಪ್ಪಿಗೆ ಸೂಚಿಸಿದರೆ ಮಾತ್ರ ಸ್ಲೀಪರ್ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ ? ಸಿದ್ದಾಪುರ | ಇತಿಹಾಸದ ಹಾದಿಯಲ್ಲಿ ಹುಲ್ಕುತ್ರಿ ಶಾಲಾ ಮಕ್ಕಳು; ಜೈನ ನೆಲೆಗಳ ಅಧ್ಯಯನ

ಸ್ಥಳೀಯ ಶಾಸಕ ಆರ್.ವಿ. ದೇಶಪಾಂಡೆ ಅವರ ಕೋರಿಕೆಯಂತೆ ದಾಂಡೇಲಿಯಲ್ಲಿ ಶೀಘ್ರದಲ್ಲೇ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿ ಆರಂಭವಾಗಲಿದೆ. ಅಲ್ಲದೆ, ದಾಂಡೇಲಿ-ಬೆಂಗಳೂರು ಮಾರ್ಗವಾಗಿ ಹೊಸ ‘ಪಲ್ಲಕ್ಕಿ’ ಬಸ್ ಸೌಲಭ್ಯ ಒದಗಿಸಲು ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಭರವಸೆ ನೀಡಿದರು.

​ಕಾರ್ಯಕ್ರಮದಲ್ಲಿ ಶಾಸಕ ಆರ್.ವಿ. ದೇಶಪಾಂಡೆ ಮಾತನಾಡಿ, ದಾಂಡೇಲಿಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಜೊತೆಗೆ ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಠಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸಮಾರಂಭದಲ್ಲಿ ಸಾರಿಗೆ ಇಲಾಖೆಯ ಅಪರ ಸಾರಿಗೆ ಆಯುಕ್ತ ಹಾಲಸ್ವಾಮಿ, ಜಂಟಿ ಆಯುಕ್ತ ಸಿದ್ದಪ್ಪ ಕಲ್ಲೇರ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...