ದಾಂಡೇಲಿ | ಅಧಿಕಾರಾವಧಿ ಮುಗಿಯುವ ಮುನ್ನ ನಗರಸಭೆ ಸದಸ್ಯರ ಹೈದ್ರಾಬಾದ್ ಪ್ರವಾಸ; ಚರ್ಚೆಗೆ ಕಾರಣ

Date:

ದಾಂಡೇಲಿ: ನಗರಸಭಾ ಸದಸ್ಯತ್ವದ ಅವಧಿ ಮುಗಿಯಲು ಕೇವಲ ಕೆಲವು ದಿನಗಳು ಬಾಕಿ ಇರುವ ಹೊತ್ತಿನಲ್ಲಿ, ದಾಂಡೇಲಿ ನಗರಸಭೆಯ ಪೌರಾಯುಕ್ತರು, ಆಡಳಿತಪಕ್ಷ ಹಾಗೂ ವಿರೋಧ ಪಕ್ಷದ ಸದಸ್ಯರನ್ನೊಳಗೊಂಡ ಸುಮಾರು 30 ಮಂದಿ ತಂಡ ಹೈದ್ರಾಬಾದಿಗೆ ಅಧ್ಯಯನ ಪ್ರವಾಸ ಕೈಗೊಂಡಿದೆ. ನಗರಸಭೆ ತಂಡ ಕಸದಿಂದ ಇಂಧನ ಉತ್ಪಾದನೆ ಪ್ರಕ್ರಿಯೆ ಕುರಿತು ಸಮಗ್ರ ಅಧ್ಯಯನ ಮಾಡುವ ಉದ್ದೇಶದಿಂದ ಈ ಪ್ರವಾಸ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

- Advertisement -

ಈ ಪ್ರವಾಸ ಇದೀಗ ನಗರದಲ್ಲಿ ಚರ್ಚೆಯ ವಿಷಯವಾಗಿದೆ. ಹೈದ್ರಾಬಾದ್‌ನ ದಕ್ಷಿಣ ಭಾರತದ ಪ್ರಪ್ರಥಮ ಕಸದಿಂದ ಇಂಧನ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ಸದಸ್ಯರು ಅಲ್ಲೇ ನಿಂತು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ, ರಸ್ತೆಗಳ ಗುಂಡಿಗಳು ಹಾಗೂ ಧೂಳಿನ ತೊಂದರೆಗಳಿಂದ ಜನತೆ ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಲಕ್ಷಗಟ್ಟಲೆ ಹಣವನ್ನು ನಗರಸಭೆ ನಿಧಿಯಿಂದ ಖರ್ಚುಮಾಡಿ ಟೂರ್‌ಗೆ ತೆರಳಿರುವುದು ಸಾರ್ವಜನಿಕ ಟೀಕೆಗೆ ಗ್ರಾಸವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸದಸ್ಯರ ಅಧಿಕಾದ ಅವಧಿ ಇದೆ ಅಕ್ಟೋಬರ್ 31ರಂದು ಮುಗಿಯುತ್ತದೆ ಈ ಸಂದರ್ಭದಲ್ಲಿ, ಅಧ್ಯಯನ ಯಾತ್ರೆಯಿಂದ ನಗರಕ್ಕೆ ಏನು ಪ್ರಯೋಜನವಾಗಲಿದೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಆಡಳಿತ ಪಕ್ಷದ ಸದಸ್ಯರ ಲೋಪ ದೋಷಗಳನ್ನು ವಿರೋಧಿಸಬೇಕಾದ ವಿರೋಧ ಪಕ್ಷದ ನಗರಸಭಾ ಸದಸ್ಯರು ಅವರೊಟ್ಟಿಗೆ ಕೈ ಜೋಡಿಸಿ ಯಾತ್ರೆ ಹೊರಟಿದ್ದು ಟೀಕೆಗೆ ಗುರಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಡಳಿತಾವಧಿ ನವೆಂಬರ್ 9ರೊಳಗೆ ಮುಗಿಯಲಿದೆ. ದಾಂಡೇಲಿ ನಗರಸಭೆಯ ಆಡಳಿತಾವಧಿ ಅಕ್ಟೋಬರ್ 31 ರಂದು ಮುಗಿಯಲಿದೆ ಎಂದು ಮಾಹಿತಿ ಬಂದಿದೆ.

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ಕರ್ನಾಟಕ ಬ್ಯಾಂಕ್‌ನಲ್ಲಿ ₹3.51 ಕೋಟಿ ರೂ.ಗಳ ವಂಚನೆ ಬೆಳಕಿಗೆ; ಪ್ರಕರಣ ದಾಖಲು.

ಈ ಹಂತದಲ್ಲಿ ಮತ್ತೇ ಸದ್ಯದಲ್ಲಿ ನಗರಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇಲ್ಲ. ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರದ ವತಿಯಿಂದ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವ ಸಾಧ್ಯತೆ ಇದೆ. ಹೀಗಿರುವಾಗ ನಗರಸಭೆ ಬೊಕ್ಕಸಕ್ಕೆ ಖರ್ಚು ಹಾಕಿ ನಗರೋದ್ಧಾರಕ್ಕಾಗಿ ಅಧ್ಯಯನ ಮಾಡಿ ಬಂದಿರುವ ನಗರಸಭಾ ಸದಸ್ಯರ ಅವಧಿಯೇ ಮುಗಿಯುತ್ತಿರುವಾಗ ಈ ಅಧ್ಯಯನ ಪ್ರವಾಸದಿಂದ ನಗರಕ್ಕೇನು ಉಪಯೋಗ ಎಂದು ಜನ ಪ್ರಶ್ನಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...