ದಾಂಡೇಲಿ | ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 5 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ

Date:

ದಾಂಡೇಲಿ: ವಾಣಿಜ್ಯ ಉದ್ದೇಶಗಳಿಗಾಗಿ ನಿಯಮಬಾಹಿರವಾಗಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಬಳಸುತ್ತಿದ್ದ ನಗರದ ವಿವಿಧ ಹೋಟೆಲ್‌ಗಳ ಮೇಲೆ ಕಂದಾಯ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಗುರುವಾರ ಜಂಟಿ ದಾಳಿ ಒಟ್ಟು 5 ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

ನಗರದ ಹೋಟೆಲ್‌ಗಳು, ಟೀ ಅಂಗಡಿ ಹಾಗೂ ಎಗ್ ರೈಸ್ ಸೆಂಟರ್‌ಗಳಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಬದಲಿಗೆ ಡೊಮೆಸ್ಟಿಕ್ (ಗೃಹಬಳಕೆ) ಸಿಲಿಂಡರ್‌ಗಳನ್ನು ಬಳಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ತಹಶೀಲ್ದಾರ್ ಶೈಲೇಶ್ ಪರಮಾನಂದ್ ಹಾಗೂ ಆಹಾರ ನಿರೀಕ್ಷಕರ ನೇತೃತ್ವದ ತಂಡವು ವಿವಿಧೆಡೆ ತಪಾಸಣೆ ನಡೆಸಿತು. ಈ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿ ಗೃಹಬಳಕೆಯ ಸಿಲಿಂಡರ್ ಬಳಸುತ್ತಿರುವುದು ಪತ್ತೆಯಾದ ತಕ್ಷಣ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದರು.

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ಇತಿಹಾಸದ ಹಾದಿಯಲ್ಲಿ ಹುಲ್ಕುತ್ರಿ ಶಾಲಾ ಮಕ್ಕಳು; ಜೈನ ನೆಲೆಗಳ ಅಧ್ಯಯನ

ದಾಳಿಯ ನಂತರ ಮಾತನಾಡಿದ ತಹಶೀಲ್ದಾರ್ ಶೈಲೇಶ್ ಪರಮಾನಂದ್ ಅವರು, “ಸಾಮಾನ್ಯ ಜನರಿಗೆ ಮೀಸಲಿರುವ ಗೃಹಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ಕಾನೂನುಬಾಹಿರ. ಇಂತಹ ದುರುಪಯೋಗವನ್ನು ತಡೆಯಲು ನಗರದಲ್ಲಿ ನಿರಂತರವಾಗಿ ತಪಾಸಣಾ ಕಾರ್ಯಚರಣೆ ಮುಂದುವರಿಯಲಿದೆ,” ಎಂದು ತಿಳಿಸಿದರು.

ಆಹಾರ ನಿರೀಕ್ಷಕ ಗೋಪಿ ಚೌಹಾನ್ ಮಾತನಾಡಿ, “ಮಾರುಕಟ್ಟೆಯಲ್ಲಿ ವಾಣಿಜ್ಯ ಸಿಲಿಂಡರ್‌ಗಳ ತಾತ್ಕಾಲಿಕ ಕೊರತೆಯನ್ನು ನೆಪ ಮಾಡಿಕೊಂಡು ಹೋಟೆಲ್ ಮಾಲೀಕರು ಸಾರ್ವಜನಿಕರ ಬಳಕೆಯ ಸಿಲಿಂಡರ್‌ಗಳನ್ನು ಬಳಸುವಂತಿಲ್ಲ. ಇದರಿಂದಾಗಿ ಸಾಮಾನ್ಯ ಮನೆಗಳಿಗೆ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು,” ಎಂದು ಎಚ್ಚರಿಸಿದರು.

ಈ ಕಾರ್ಯಾಚರಣೆಯಲ್ಲಿ ಕಂದಾಯ ಮತ್ತು ಆಹಾರ ಇಲಾಖೆಯ ಸಿಬ್ಬಂದಿಗಳಾದ ದಯಾನಂದ್ ಹಾಗೂ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಉಡುಪಿ | ಈಜಲು ತೆರಳಿದ ಯುವಕರು ನೀರುಪಾಲು; ಬೈಂದೂರಿನಲ್ಲಿ ಕೊಲೆ ಯತ್ನ ಆರೋಪಿಗಳ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಸ್ನೇಹಿತರೊಂದಿಗೆ ಈಜಲು...

ಕೋಡಿಹಳ್ಳಿ ಚಂದ್ರಶೇಖರ್ ಬಂಧನ ಖಂಡಿಸಿ ಮುಧೋಳದಲ್ಲಿ ರೈತರ ಪ್ರತಿಭಟನೆ

ಕಳಸಾ–ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರೈತಪರ ಹೋರಾಟ ನಡೆಸಿದ್ದ ರಾಜ್ಯ ರೈತ...

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...