ದಾಂಡೇಲಿ | ಬೊಮ್ಮನಳ್ಳಿ ಜಲಾಶಯದ ಹಿನ್ನೀರಿನಲ್ಲಿ ಕಾಡಾನೆ ಸಾವು; ವನ್ಯಜೀವಿ ಪ್ರೇಮಿಗಳಲ್ಲಿ ಆತಂಕ

Date:

ದಾಂಡೇಲಿ: ಇಲ್ಲಿನ ಪ್ರಸಿದ್ಧ ಬೊಮ್ಮನಳ್ಳಿ ಜಲಾಶಯದ ಹಿನ್ನೀರಿನಲ್ಲಿ ಅಂದಾಜು 24 ವರ್ಷದ ಗಂಡಾನೆಯೊಂದರ ಮೃತದೇಹ ಪತ್ತೆಯಾಗಿದ್ದು, ಪ್ರಕೃತಿ ಪ್ರೇಮಿಗಳು ಹಾಗೂ ವನ್ಯಜೀವಿ ವಲಯದಲ್ಲಿ ತೀವ್ರ ಕಳವಳ ಮೂಡಿಸಿದೆ.

- Advertisement -

ಜಲಾಶಯದ ನೀರಿನಲ್ಲಿ ಆನೆಯ ಶವ ತೇಲುತ್ತಿರುವ ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಹರಸಾಹಸ ಪಟ್ಟು ಮೃತದೇಹವನ್ನು ನೀರಿನಿಂದ ದಂಡೆಗೆ ತಂದು, ನಿಯಮಾನುಸಾರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸದ್ಯಕ್ಕೆ ಆನೆಯ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ವೈದ್ಯಕೀಯ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವಷ್ಟೇ ಸತ್ಯಾಂಶ ಹೊರಬೀಳಬೇಕಿದೆ. ಆನೆಯ ಅಕಾಲಿಕ ಮರಣಕ್ಕೆ ಪ್ರಾಥಮಿಕ ಕಾರಣಗಳು ಇನ್ನೂ ನಿಗೂಢವಾಗಿಯೇ ಇವೆ. ಆದರೆ, ಕಳೆದ ವರ್ಷ ಇದೇ ಅರಣ್ಯ ಪ್ರದೇಶದಲ್ಲಿ ವಿದ್ಯುತ್ ಸ್ಪರ್ಶದಿಂದ ಆನೆಯೊಂದು ಮೃತಪಟ್ಟಿದ್ದ ಘಟನೆ ಇನ್ನು ಹಸಿರಾಗಿರುವಾಗಲೇ ಈ ದುರಂತ ಸಂಭವಿಸಿರುವುದು ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಈ ಸುದ್ದಿ ಓದಿದ್ದೀರಾ? ಭಟ್ಕಳ | ಮುರಿನ ಕಟ್ಟೆ ಧ್ವಂಸ ಪ್ರಕರಣ; ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ, ನಗರದಲ್ಲಿ ನಿಷೇಧಾಜ್ಞೆ ಜಾರಿ

ಇದು ವಯೋಸಹಜ ಅಥವಾ ನೈಸರ್ಗಿಕ ಸಾವೇ? ಅಥವಾ ಇದರ ಹಿಂದೆ ಮಾನವನ ಪರೋಕ್ಷ ಹಸ್ತಕ್ಷೇಪವಿದೆಯೇ? ಎಂಬ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿವೆ. ಅಪಾರ ಜೀವವೈವಿಧ್ಯತೆಗೆ ಹೆಸರಾಗಿರುವ ದಾಂಡೇಲಿ ಅರಣ್ಯ ಪ್ರದೇಶವು ಆನೆಗಳ ಮುಕ್ತ ಸಂಚಾರಕ್ಕೆ ಪ್ರಮುಖ ಆವಾಸಸ್ಥಾನವಾಗಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ಕಾಡಿನಂಚಿನಲ್ಲಿ ಹೆಚ್ಚಾಗುತ್ತಿರುವ ಮಾನವನ ಹಸ್ತಕ್ಷೇಪ, ಅಕ್ರಮ ವಿದ್ಯುತ್ ಬೇಲಿಗಳ ಅಳವಡಿಕೆ, ಜಲಾಶಯಗಳ ಸುತ್ತಲಿನ ಅಸುರಕ್ಷಿತ ವಾತಾವರಣ ಮತ್ತು ವನ್ಯಜೀವಿಗಳ ಸಾಂಪ್ರದಾಯಿಕ ಸಂಚಾರ ಮಾರ್ಗಗಳ ಅತಿಕ್ರಮಣವು ಮೂಕಪ್ರಾಣಿಗಳ ಜೀವಕ್ಕೆ ಕಂಟಕವಾಗುತ್ತಿದೆಯೇ ಎಂಬ ಆರೋಪಗಳು ಪರಿಸರಾಸಕ್ತರಿಂದ ಕೇಳಿಬರುತ್ತಿವೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯು ಸೂಕ್ತ ತನಿಖೆ ನಡೆಸಿ, ವನ್ಯಜೀವಿಗಳ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...