ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ., ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಸಹ ಶಿಕ್ಷಕಿ ಶ್ರೀಮತಿ ಶಿಭಾ ಪಿ.ಜೆ., ಡಾ. ಅಂಬೇಡ್ಕರ್ ಅವರ ಆದರ್ಶಗಳು, ಅವರ ಶ್ರಮ ಮತ್ತು ಸಮಾಜಮುಖಿ ಕಾರ್ಯಗಳ ಕುರಿತು ಬೆಳಕು ಚೆಲ್ಲಿದರು. ಜೊತೆಗೆ, ಭಾರತೀಯ ಸಂವಿಧಾನದ ರಚನೆ ಹಾಗೂ ಅದರ ಮಹತ್ವವನ್ನು ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದ ಭಾಗವಹಿಸಿ, ಕಾರ್ಯಕ್ರಮಕ್ಕೆ ಸಾಕ್ಷಿಯಾದರು.




