ಕಲಬುರಗಿ | ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಜಾತಿಗಣತಿ ವರದಿ ಜಾರಿಗೊಳಿಸಿ: ದಸಂಸ ಮುಖಂಡ ಮರೆಪ್ಪ ಹಳ್ಳಿ

Date:

ಅಕ್ಟೋಬರ್ 18ರಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನಕ್ಕಾಗಿ ಆಗ್ರಹಿಸಿ ಹಾಗೂ ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.50 ರಿಂದ ಶೇ.75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದಸಂಸ ಮುಖಂಡ ಮರೆಪ್ಪ ಹಳ್ಳಿ ಒತ್ತಾಯಿಸಿದ್ದಾರೆ.

- Advertisement -

ಕಲಬುರಗಿಯಲ್ಲಿ ಹೇಳಿಕೆ‌‌ ನೀಡಿರುವ ಅವರು “ಇತ್ತೀಚೆಗೆ ಸರ್ಕಾರವು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಜನಗಣತಿ ವರದಿಯನ್ನು ಸ್ವೀಕರಿಸಿದ್ದನ್ನು ದಲಿತ ಸಂಘರ್ಷ ಸಮಿತಿಯು ಸ್ವಾಗತಿಸಿ ಅಭಿನಂದನೆ ಸಲ್ಲಿಸುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ರಾಜ್ಯದ ಜನಸಂಖ್ಯೆಯ ಬಹು ಭಾಗವಾಗಿರುವ ಆದಿವಾಸಿಗಳು, ಅಲೆಮಾರಿಗಳು, ದಲಿತರು, ಹಿಂದುಳಿದವರು ಅಲ್ಪಸಂಖ್ಯಾತರು ಮುಂತಾದ ಶೋಷಿತ ಸಮುದಾಯಗಳು ಹಲವು ದಶಕಗಳಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಾ ಬಂದಿದ್ದವು. ಆದರೆ ಜಾತಿ ಕೇಂದ್ರಿತ ಪಕ್ಷ ರಾಜಕಾರಣವು ಈ ಸಮುದಾಯಗಳ  ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಸ್ಥಿತಿಗತಿಗಳನ್ನು ಉತ್ತಮ ಪಡಿಸುವ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದವು. ಇದರಿಂದಾಗಿ ಸಮಾಜದಲ್ಲಿ ಅಸಮಾನತೆಯ ಕಂದಕಗಳು ಮತ್ತಷ್ಟು ಹೆಚ್ಚಾಗುತ್ತಲೇ ಬರುತ್ತಿತ್ತು. ಈ ನಿಟ್ಟಿನಲ್ಲಿ ‘ಸಾಮಾಜಿಕ ನ್ಯಾಯ’ದ  ಗುರಿಗಳನ್ನು ತಲುಪಲು ಕಾಲ ಕಾಲಕ್ಕೆ ಜಾತಿ ಜನಗಣತಿಯ ನಿಖರ ವಿವರಗಳನ್ನು ಆಧರಿಸಿ ಮೀಸಲಾತಿ ಹೆಚ್ಚಳ ಹಾಗೂ ಇನ್ನಿತರ ಯೋಜನೆಗಳನ್ನು ರೂಪಿಸುವುದು ಅನಿವಾರ್ಯ. ಈ ಕೊರತೆಯನ್ನು ತಮ್ಮ ಸರ್ಕಾರವು ನೀಗಿಸಲು ಹೊರಟಿರುವುದು ನಿಜಕ್ಕೂ  ಅಭಿನಂದನಾರ್ಹವಾದದು” ಎಂದರು.

“ಜಾತಿ ಜನಗಣತಿ ವರದಿ ಸ್ವೀಕಾರಗೊಂಡ ಕೂಡಲೇ ಕೆಲವು ಪಟ್ಟಭದ್ರ ಜಾತಿವಾದಿ ವ್ಯಕ್ತಿ ಹಾಗೂ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು ತೀವ್ರ ಅಸಮಾಧಾನ  ಹೊರಹಾಕಿ  ವಿರೋಧ ವ್ಯಕ್ತಪಡಿಸುತ್ತಿರುವುದು ಕಳವಳಕಾರಿ ಸಂಗತಿ. ಈ ಪಟ್ಟಭದ್ರ ಜಾತಿವಾದಿಗಳು  ಜಾತಿ ಜನಗಣತಿ ವರದಿಯನ್ನು ತಿರಸ್ಕರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದನ್ನು ದಸಂಸವು ತೀವ್ರವಾಗಿ ಖಂಡಿಸುತ್ತದೆ. ಅಲ್ಲದೆ, ‘ಸಾಮಾಜಿಕ ನ್ಯಾಯ’ ವಿರೋಧಿಯಾದ ಅಸಮಾಧಾನಗಳನ್ನು , ವಿರೋಧ, ಪ್ರತಿಭಟನೆಗಳನ್ನು ತಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸದೆ ‘ಸಾಮಾಜಿಕ ನ್ಯಾಯ’ದ  ಪರವಾಗಿ ದೃಢ ನಿಲುವು ತಾಳಬೇಕೆಂದು ” ಎಂದು ಮನವಿ‌ ಮಾಡಿದರು.

“ಈ ಜಾತಿ ಜನಗಣತಿ ವರದಿಯ ಅಂಕಿ – ಅಂಶಗಳ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗಗಳ  ಈಗಿರುವ ಶೇ.50 ರಷ್ಟು ಶೈಕ್ಷಣಿಕ, ಔದ್ಯೋಗಿಕ ಮೀಸಲಾತಿ  ಮಿತಿಯ ಪ್ರಮಾಣವನ್ನು  ಶೇ. 75ಕ್ಕೆ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದರ ಮೂಲಕ  ಕರ್ನಾಟಕ ರಾಜ್ಯದ ‘ಸಾಮಾಜಿಕ ನ್ಯಾಯ’ದ  ಪರಂಪರೆಯನ್ನು  ತಾವು ಮತ್ತು ತಮ್ಮ ಸರ್ಕಾರ ಮತ್ತೊಮ್ಮೆ ಎತ್ತಿ ಹಿಡಿದು ದೇಶಕ್ಕೇ ಮಾದರಿ ಆಡಳಿತ ನೀಡಬೇಕು ಎಂದು ಮರೆಪ್ಪ ಹಳ್ಳಿ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...