ಯಾದಗಿರಿ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ; ಶಾಸಕರ ಬಂಧನಕ್ಕೆ ಆಗ್ರಹಿಸಿ ದಸಂಸ ಪ್ರತಿಭಟನೆ

Date:

Advertisements

ಯಾದಗಿರಿ ನಗರದ ದಕ್ಷ ಹಾಗೂ ನಿಷ್ಠಾವಂತ ಪೊಲೀಸ್ ಇನ್ಸಪೆಕ್ಟರ್ ಪರಶುರಾಮ್ ಅವರ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಹಾಗೂ ಅವರ ಪುತ್ರನನ್ನು ಈವರೆಗೆ ಬಂಧಿಸದಿರುವುದನ್ನು ಖಂಡಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಭೀಮವಾದದ ಮುಖಂಡರು ಪ್ರತಿಭಟನೆ ನಡೆಸಿದರು.

“30 ಲಕ್ಷ ರೂ. ಲಂಚದ ಬೇಡಿಕೆ ಕಾರಣರಾದವರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದ್ದರೂ ಬಂಧಿಸಿಲ್ಲ. ಇದು ಖಂಡನೀಯ. ಈ ಪ್ರಕರಣದ ಅಮೂಲಾಗ್ರ ತನಿಖೆಗೆ ಸಿಬಿಐಗೆ ಒಪ್ಪಿಸಿ ಆರೋಪಿಗಳನ್ನು ತಕ್ಷಣ ಬಂಧಿಸಿ ಶಿಕ್ಷಿಸಬೇಕು” ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ದಸಂಸ ಜಿಲ್ಲಾಧ್ಯಕ್ಷ ಶರಣು ಎಸ್. ನಾಟೇಕರ್, “ಪಿಎಸ್‌ಐ ಪರಶುರಾಮ್ ಇವರ ಸಾವಿಗೆ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹಾಗೂ ಅವರ ಪುತ್ರ ಪಂಪಣಗೌಡ ಕಾರಣರಾಗಿದ್ದು, 30 ಲಕ್ಷ ರೂ. ಬೇಡಿಕೆ ಇಟ್ಟಿದ್ದರಿಂದ ಅವರು ಹೌಹಾರಿ ಒತ್ತಡಕ್ಕೂಳಗಾಗಿ, ಹೃದಯಾಘಾತದಿಂದ ಮೃತಪಟ್ಟಿರುತ್ತಾರೆ. ವಿನಾಕಾರಣ ಏಕಾಏಕಿ ವರ್ಗಾವಣೆ ಮಾಡಿದ್ದರಿಂದ ಅದನ್ನು ರದ್ದು ಮಾಡಲು 30 ಲಕ್ಷ ರೂ ಬೇಡಿಕೆ ಇಟ್ಟಿದ್ದರಿಂದ ಈ ಘಟನೆ ನಡೆದಿದೆ” ಎಂದು ತಿಳಿಸಿದರು.

Advertisements
ಯಾದಗಿರಿ1 2

“ದಕ್ಷ ಅಧಿಕಾರಿಯಾಗಿದ್ದ ಪರಶುರಾಮ್ ಅವರು ಯಾದಗಿರಿ ಠಾಣೆಗೆ ವರ್ಗವಾಗಿ ಬಂದ ಮೇಲೆ ನಗರದಲ್ಲಿ ಅಕ್ರಮಗಳನ್ನು ಮಟ್ಟಹಾಕಿ ಭ್ರಷ್ಟರಿಗೆ ಸಿಂಹಸ್ವಪ್ನರಾಗಿ ಕೆಲಸ ಮಾಡಿ ನಗರದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬಂದಿದ್ದರು. ಯಾವುದೇ ರಾಜಕೀಯ ಮಾಡದೇ ಯಾರ ಪಕ್ಷಪಾತವನ್ನೂ ಮಾಡದೇ ನ್ಯಾಯ ಪಕ್ಷಪಾತಿಯಾಗಿ ಕೆಲಸ ಮಾಡಿ ಶ್ರೀಸಾಮಾನ್ಯರಿಂದ ಸೈ ಎನಿಸಿಕೊಂಡ ದಕ್ಷ ಅಧಿಕಾರಿಯಾಗಿದ್ದರು” ಎಂದು ಶರಣು ಎಸ್. ನಾಟೇಕರ್ ತಿಳಿಸಿದರು.

“ಅವರ ಮರಣದಿಂದಾಗಿ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದರೆ ತಕ್ಷಣ ಆರೋಪಿಗಳನ್ನು ಬಂಧಿಸಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಇಲ್ಲವಾದಲ್ಲಿ ಯಾದಗಿರಿ ನಗರ ಬಂದ್ ಮಾಡಿ ಉಗ್ರ ಹೋರಾಟ ರೂಪಿಸಲಾಗುವುದು” ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಚ್ಚರಿಕೆ ನೀಡಿದೆ.

ಪ್ರತಿಭಟನೆಯಲ್ಲಿ ಭೀಮರಾಯ ಸಿಂಧಿಗೇರಿ, ಶಿವಶಂಕರ ಹೊಸಮನಿ, ಶಿವಶರಣಪ್ಪ ವಾಡಿ, ಭೀಮರಾಯ್ ಕಾಗಿ, ಖಂಡಪ್ಪ ಸಾಹುಕಾರ, ಮಾದೇವಪ್ಪ ಗುರುಸುಣಿಸಿ, ಮಲ್ಲಪ್ಪ ಲಂಡನಕರ್, ಸಿದ್ರಾಮ್ ಭಂಡಾರಿ, ಶರಣಪ್ಪ ಮಮ್ಮದರ್, ಮಾರುತಿ,
ಮಹಮ್ಮದ್ ಸಲೀಮ್, ಪವಿತ್ರ, ಸುರೇಖಾ ಇನ್ನಿತರರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X