ದಸರಾ ಉದ್ಘಾಟನೆ: ಸಾಹಿತಿ ಬಾನು ಮುಷ್ತಾಕ್‌ಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

Date:

Advertisements

ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಅಧಿಕೃತವಾಗಿ ಬುಧವಾರ ಆಹ್ವಾನಿಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು, ಇಂದು ಹಾಸನ ನಗರದ ಅಮೀರ್ ಮೊಹಲ್ಲಾದಲ್ಲಿರುವ ಸಾಹಿತಿ ಬಾನು ಮುಷ್ತಾಕ್ ಅವರ ಮನೆಗೆ ಭೇಟಿ ನೀಡಿ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ದಸರಾ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡುವ ಮೂಲಕ ಅಧಿಕೃತವಾಗಿ ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಿದರು.

musthaq

ದಸರಾ ಆಹ್ವಾನವನ್ನು ಪ್ರೀತಿಯಿಂದ ಸ್ವೀಕರಿಸಿದ ಬಾನು ಮುಷ್ತಾಕ್ ಅವರು, ದಸರಾ ಆರಂಭಕ್ಕೂ ಮುನ್ನ ವಿದೇಶದಲ್ಲಿ ಕೆಲವೊಂದು ಕನ್ನಡಪರ ಕಾರ್ಯಕ್ರಮಗಳಿವೆ. ಅದನ್ನು ಮುಗಿಸಿಕೊಂಡು ಬರುತ್ತೇವೆ. ಆ ಬಳಿಕ ದಸರಾ ಕಾರ್ಯಕ್ರಮಕ್ಕಾಗಿ ಮೈಸೂರಿಗೆ ತೆರಳುವ ದಿನಾಂಕವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.

ಇದೇ ವೇಳೆ ಮೈಸೂರು ಅಪರ ಜಿಲ್ಲಾಧಿಕಾರಿ ಶಿವರಾಜ್, ಚಾಮುಂಡಿ ದೆವಾಲಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಜಿ.ಪಂ. ಸಿಇಒ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಅಯುಕ್ತರಾದ ತನ್ವಿರ್ ಆಶಿಫ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಧರ್ಮಸ್ಥಳ | ಸಾಕ್ಷಿ ದೂರುದಾರ ಚಿನ್ನಯ್ಯ ಮತ್ತೆ ಎಸ್ಐಟಿ ಕಸ್ಟಡಿಗೆ

ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ-ಸಂಘಪರಿವಾರ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿತ್ತು. ಬಾನು ಮುಷ್ತಾಕ್ ಅವರು ‘ಮುಸ್ಲಿಂ’ ಎಂಬ ಕಾರಣಕ್ಕೆ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಸಂಘಪರಿವಾರ ವಿರೋಧ ವ್ಯಕ್ತಪಡಿಸುವ ಮೂಲಕ ಇದನ್ನು ವಿವಾದವನ್ನಾಗಿ ಸೃಷ್ಟಿಸಲು ಪ್ರಯತ್ನಿಸಿತ್ತು. ಆದರೆ, ಇದ್ಯಾವುದಕ್ಕೂ ಜಗ್ಗದ ಸಿದ್ದರಾಮಯ್ಯ ಕಾಂಗ್ರೆಸ್‌ ಸರ್ಕಾರ, ಅಧಿಕೃತವಾಗಿ ಮೈಸೂರು ಜಿಲ್ಲಾಡಳಿತದ ಮೂಲಕ ಬುಧವಾರ ಆಹ್ವಾನ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

Download Eedina App Android / iOS

X