ನಾಡಹಬ್ಬ ದಸರಾ ಮಹೋತ್ಸವ ಅರ್ಥಪೂರ್ಣ ಹಾಗೂ ಅದ್ದೂರಿ ಆಚರಣೆಗೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು ಹಾಗೂ ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ 31ರಂದು ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

- Advertisement -

ದಸರಾ ಹಬ್ಬವನ್ನು ದಿನಾಂಕ ಅಕ್ಟೋಬರ್‌ 15 ರಿಂದ ಬೆಳಗ್ಗೆ 10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಅಕ್ಟೋಬರ್ 24, 2023 ರಂದು ಜಂಬೂ ಸವಾರಿ ನಡೆಯಲಿದೆ. ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ತೀರ್ಮಾನಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ವಿಶಿಷ್ಟ ದೀಪಾಲಂಕಾರ

ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ

ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ  ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ಸೂಚಿಸಿದರು.

ವಸ್ತು ಪ್ರದರ್ಶನ

ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು  ಹಾಗೂ ಎಲ್ಲ ಮಳಿಗೆಗಳೂ ಕೂಡ ಭರ್ತಿಯಾಗಿರಬೇಕೆಂದು ಸೂಚಿಸಿದರು.

ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ

ಎಲ್ಲ ಪ್ರಕಾರಗಳಲ್ಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಮುಂದಿನ ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಾಮ ಮಂದಿರದ ಮೇಲೆ ದಾಳಿ: ಸತ್ಯಪಾಲ್ ಮಲಿಕ್ ಆರೋಪ

ಏರ್ ಶೋ

ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕೆಂದು. ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಮುಖ್ಯಮಂತ್ರಿಗಳು ತಿಳಿಸಿದರು.

ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಯಿತು. ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.

ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ  ಅನುದಾನ ಒದಗಿಸುವ ಬಗ್ಗೆ ಹಾಗೂ ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈ ಬಿಡಬೇಕು ಎಂದು ತೀರ್ಮಾನಿಸಲಾಯಿತು. 

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ, ಶಿವರಾಜ ತಂಗಡಗಿ, ಹೆಚ್ ಕೆ ಪಾಟೀಲ್, ಭೈರತಿ ಸುರೇಶ್, ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...