ದಾವಣಗೆರೆ | ಪಾರ್ಕ್‌ನಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಪಾಲಿಕೆ ಚಿಂತನೆ; ನಿವಾಸಿಗಳ ಪ್ರತಿಭಟನೆ

Date:

ದಾವಣಗೆರೆ ಮಹಾನಗರ ಪಾಲಿಕೆಯು 41ನೇ ವಾರ್ಡ್‌ನಲ್ಲಿರುವ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲು ಮುಂದಾಗಿದೆ. ಪಾಲಿಕೆಯ ಕ್ರಮವನ್ನು ಖಂಡಿಸಿ ಎಸ್.ಎ.ರವೀಂದ್ರನಾಥ್ ನಗರ ನಾಗರಿಕ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿದೆ.

ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ ಸ್ಥಳೀಯ ನಿವಾಸಿಗಳು ಮತ್ತು ಸಮಿತಿ ಸದಸ್ಯರು, “ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಮುಂದಾದರೆ, ತೀವ್ರ ಹೋರಾಟ ಎದುರಿಸಬೇಕಾಗುತ್ತದೆ. ಪಾಲಿಕೆ ಅಧಿಕಾರಿಗಳು ತಮ್ಮ ನಿರ್ಧಾರವನ್ನು ಹಿಂಪಡೆಯಬೇಕು. ಉದ್ಯಾನವನ್ನು ಪಾಲಿಕೆ ಅಭಿವೃದ್ಧಿ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಸ್ಥಳೀಯ ಮುಖಂಡ ಹಾಗೂ ಚೌಡೇಶ್ವರಿ ದೇವಸ್ಥಾನದ ಟ್ರಸ್ಟಿ ಎಂ.ಆನಂದ್ ಮಾತನಾಡಿ, “ಆರೋಗ್ಯ ಮತ್ತು ನೈರ್ಮಲ್ಯ ದೃಷ್ಟಿಯಿಂದ ಮಹಾನಗರ ಪಾಲಿಕೆಯ ಈ ಯೋಜನೆ ಅವೈಜ್ಞಾನಿಕವಾಗಿದೆ. ಎಸ್.ಎ.ರವೀಂದ್ರನಾಥ ನಗರದ ನಿವಾಸಿಗಳಿಗೆ ಹಾಗೂ ಕೈಗಾರಿಕೆ ಪ್ರದೇಶದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ತೀವ್ರ ತೊಂದರೆ ಆಗಲಿದ್ದು, ತಕ್ಷಣ ಈ ನಿರ್ಧಾರವನ್ನು ಕೈಬಿಡಬೇಕು: ಎಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಉದ್ಯಾನವನವು ದಾವಣಗೆರೆಯ ನಗರದ ಅತಿದೊಡ್ಡ ಪಾರ್ಕ್‌ ಆಘಿದೆ. ಪಕ್ಕದಲ್ಲಿಯೇ ಕೈಗಾರಿಕಾ ಪ್ರದೇಶ ಇದೆ. ಚೌಡೇಶ್ವರಿ ದೇವಸ್ಥಾನ, ಭೂತಪ್ಪ ದೇವಸ್ಥಾನ ಇವೆ. ಸುತ್ತಮುತ್ತ ಜನವಸತಿ ಪ್ರದೇಶ ಇದೆ. ಅಲ್ಲದೆ, ಈ ಜಾಗವನ್ನು ಟೌನ್‌ಹಾಲ್ ಮತ್ತು ಸರ್ಕಾರಿ ಶಾಲಾ ಕಟ್ಟಡ ನಿರ್ಮಿಸಲು ಕಾಯ್ದಿರಿಸಲಾಗಿದೆ ಎಂದು ನಕಾಶೆಯಲ್ಲೇ ತಿಳಿಸಲಾಗಿದೆ. ಈ ಹಿಂದೆ ಜಿಲ್ಲಾಧಿಕಾರಿ, ಜಿ.ಪಂ ಸಿಇಓ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರ ವಸತಿಗೃಹ ನಿರ್ಮಿಸಲು ಸಹ ಯೋಜನೆ ಸಿದ್ಧವಾಗಿತ್ತು. ಅದೂ ಕೂಡ ನೆನೆಗುದಿಗೆ ಬಿದ್ದಿದೆ” ಎಂದು ಆರೋಪಿಸಿದರು.

“ಇಂತಹ ಪ್ರಮುಖ ಪ್ರದೇಶದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಕಸ ವಿಲೇವಾರಿ ಘಟಕ ಸ್ಥಾಪಿಸಲು ಹೊರಟಿರುವುದು ಸ್ಥಳೀಯ ನಾಗರಿಕರನ್ನು ಆತಂಕಕ್ಕೀಡು ಮಾಡಿದೆ. ಒಂದು ವೇಳೆ ಹಠಕ್ಕೆ ಬಿದ್ದು ಪಾಲಿಕೆ ಏನಾದರೂ ಇಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಿದರೆ, ಸುತ್ತಮುತ್ತಲಿನ ನಿವಾಸಿಗಳು ರೋಗ-ರುಜಿನಗಳಿಗೆ ತುತ್ತಾಗುವ ಸಾಧ್ಯತೆ ಇದೆ, ಘಟಕದಿಂದ ಹೊರಸೂಸುವ ದುರ್ವಾಸನೆ, ಕ್ರಿಮಿಕೀಟಗಳಿಂದಾಗಿ ಯಾವ ನಾಗರಿಕರು ಇಲ್ಲಿ ವಾಸಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ತಕ್ಷಣ ಪಾಲಿಕೆ ತನ್ನ ನಿರ್ಧಾರವನ್ನು ಕೈಬಿಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಸ್.ಎ.ರವೀಂದ್ರನಾಥ ನಗರ ನಾಗರಿಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್ ಮಲ್ಲನಗೌಡ್ರು, ಅಧ್ಯಕ್ಷ ಎನ್ ಸಿದ್ಧರಾಮಪ್ಪ, ಪದಾಧಿಕಾರಿಗಳಾದ ಎಸ್.ಆರ್.ಸೋಮಶೇಖರಪ್ಪ, ಎನ್.ಎಸ್.ಮಹೇಶ್ವರಪ್ಪ, ಜಿ.ಕರಿಬಸಪ್ಪ, ಸಿ.ಕೆ.ಶಿವಪ್ಪ ಸೇರಿದಂತೆ ಸ್ಥಳೀಯ ನಾಗರಿಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜು. 19: ಬ್ಯಾರಿ ಅಕಾಡೆಮಿ ಅಧ್ಯಕ್ಷ-ಸದಸ್ಯರ ಪದಗ್ರಹಣ; ‘ಪಿರ್ಸಪ್ಪಾಡ್‌’ ಬ್ಯಾರಿ ಸಾಂಸ್ಕೃತಿಕ ಸಂಭ್ರಮ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಪಿರ್ಸಪ್ಪಾಡ್‌ (ಬ್ಯಾರಿ ಸಾಂಸ್ಕೃತಿಕ ಸಂಭ್ರಮ)...

ಧಾರವಾಡ | ಸಂಶೋಧನೆಗೆ ಜನಸಂಖ್ಯಾ ಅಧ್ಯಯನದಲ್ಲಿ ವಿಪುಲ ಅವಕಾಶಗಳಿವೆ -ಡಾ. ಎಂ. ಎನ್.ಮೇಗೇರಿ

"ಜನಸಂಖ್ಯಾ ಅಧ್ಯಯನದಲ್ಲಿ ಸಂಶೋಧನೆಗೆ ಸಾಕಷ್ಟು ಅವಕಾಶಗಳಿವೆ. ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚಿನ ಮಹತ್ವ...

ಧಾರವಾಡ | ಕರ್ನಾಟಕ ಕಾಲೇಜಿನ ಪ್ರವೇಶಾತಿಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯ: ಮುತ್ತಪ್ಪ ಎಸ್ ಆಕ್ರೋಶ

ಕರ್ನಾಟಕ ಕಾಲೇಜಿನ ಪ್ರವೇಶಾತಿಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯ ಎಸಗುತ್ತಿದ್ದು, ಪ್ರವೇಶ ಶುಲ್ಕದ ಹೆಸರಿನಲ್ಲಿ...

ಗದಗ | ನೂತನ ಡಿಸಿಯಾಗಿ ಗೋವಿಂದ ರೆಡ್ಡಿ ನೇಮಕ; ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವರೇ?

ಗದಗ ಜಿಲ್ಲೆಯ ನೂತನ ಡಿಸಿಯಾಗಿ ಗೋವಿಂದ ರೆಡ್ಡಿ ಅವರು ನಿರ್ಗಮಿತ ಜಿಲ್ಲಾಧಿಕಾರಿ...