ದಾವಣಗೆರೆ | ಡಿ.23, 24ರಂದು ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನ

Date:

Advertisements

ಸಮಾಜ ಎದುರಿಸುತ್ತಿರುವ ಸಮಸ್ಯೆಗಳು, ಬೇಡಿಕೆ ಮತ್ತಿತರ ವಿಚಾರಗಳ ಬಗ್ಗೆ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಅಧಿವೇಶನದಲ್ಲಿ ನಿರ್ಣಯಗಳನ್ನು ಮಂಡಿಸಿ ರಾಜ್ಯ ಸರ್ಕಾರಕ್ಕೆ ಕೊಡಲಾಗುವುದು ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಮೈದಾನದಲ್ಲಿ ಡಿಸೆಂಬರ್‌ 23 ಮತ್ತು 24ರಂದು ನಡೆಯಲಿರುವ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದ ಹಂದರ(ವೇದಿಕೆ) ಪೂಜೆ ನೆರವೇರಿಸಿ ಮಾತನಾಡಿದರು.

“ಡಿಸೆಂಬರ್‌ 23 ಮತ್ತು 24ರಂದು ನಡೆಯುವ ಮಹಾ ಅಧಿವೇಶನದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಸಮಾಜ ಬಾಂಧವರು ಭಾಗವಹಿಸುವರು. ಹತ್ತು ಲಕ್ಷದಷ್ಟು ಜನರನ್ನು ಸೇರಿಸಬಹುದಿತ್ತು. ಆದರೆ ನಾವೇ ಮಿತಿ ಹಾಕಿಕೊಂಡಿದ್ದೇವೆ. ಅಧಿವೇಶನಕ್ಕೆ ಬಂದವರಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು.

Advertisements

“ಜಾತಿಗಣತಿ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ಮಾಡುವುದಿಲ್ಲ. ಏಕೆಂದರೆ ವರದಿ ಏನಿದೆ ಎಂಬುದನ್ನು ನೋಡಿಯೇ ಚರ್ಚೆ ಮಾಡುತ್ತೇವೆ” ಎಂದರು.

“ದಾವಣಗೆರೆಯಲ್ಲಿ 1917ರ ನಂತರ ಎರಡನೇ ಬಾರಿಗೆ ಅಧಿವೇಶನ ನಡೆಯುತ್ತಿದೆ. ನೂರಾರು ಸಂಖ್ಯೆಯಲ್ಲಿ ನಾಡಿನ ವಿವಿಧ ಸ್ವಾಮೀಜಿಗಳು, ಮಠಾಧೀಶರು ಎಲ್ಲರೂ ಭಾಗವಹಿಸುವರು. ಭಾಲ್ಕಿಯಲ್ಲಿ ಭೀಮಣ್ಣ ಖಂಡ್ರೆಯವರ ಶತಮಾನೋತ್ಸವದಲ್ಲಿ ಭಾಗವಹಿಸಿ ಅಲ್ಲಿಯೇ ಅಧಿವೇಶನಕ್ಕೆ ಆಹ್ವಾನಿಸಲಾಗುವುದು” ಎಂದು ತಿಳಿಸಿದರು.

ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಜಿಲ್ಲಾ ಅಧ್ಯಕ್ಷ ದೇವರಮನೆ ಶಿವಕುಮಾರ್, ಬಿ ಸಿ ಉಮಾಪತಿ, ಕೆ ಜಿ ಶಿವಕುಮಾರ್, ಐನಳ್ಳಿ ಶುಭಮಂಗಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X