ದಾವಣಗೆರೆ | ಸ್ಲಂ ನಿವಾಸಿಗಳ ಪ್ರಮುಖ ಬೇಡಿಕೆ ಈಡೇರಿಸದ ಬಜೆಟ್;‌ ಅನುದಾನಕ್ಕೆ ಆಗ್ರಹ

Date:

Advertisements

2024-25ನೇ ಸಾಲಿನ ಗ್ಯಾರಂಟಿ ಬಜೆಟಿನಲ್ಲಿ ಸ್ಲಂ ನಿವಾಸಿಗಳ ಪ್ರಮುಖ ಬೇಡಿಕೆಗಳಿಗೆ ಅನುದಾನ ಹಂಚಿಕೆ ಮಾಡಿಲ್ಲ. ಸ್ಲಂ ಜನರ ಬೇಡಿಕೆಗಳನ್ನು ಸಾಮಾಜಿಕ ನ್ಯಾಯದಡಿಯಲ್ಲಿ ಪೂರಕ ಆಯವ್ಯಯದಲ್ಲಿ ಈಡೇರಿಸಬೇಕೆಂದು ಸ್ಲಂ ಜನಾಂದೋಲನ ಕರ್ನಾಟಕದ ದಾವಣಗೆರೆ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಎಸ್‌ ಎಲ್‌ ಆನಂದಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಪ್ರತಿ ಬಾರಿಯ ಆಯವ್ಯಯದಲ್ಲಿ ಸ್ಲಂ ನಿವಾಸಿಗಳು ನಿರೀಕ್ಷೆ ಮಾಡುವ ಬೇಡಿಕೆಗಳಾದ ವಸತಿ ಹಕ್ಕು ಖಾತ್ರಿ, ಸ್ಲಂ ಅಭಿವೃದ್ಧಿ ಮಸೂದೆ, ಸ್ಲಂ ಜನಸಂಖ್ಯೆಗೆ ಅನುಗುಣವಾಗಿ ಪಾಲು, ಲ್ಯಾಂಡ್ ಬ್ಯಾಂಕ್ ನೀತಿ, ನಿವೇಶನ ರಹಿತರ ಸಮಸ್ಯೆ, ನಗರ ಉದ್ಯೋಗ ಖಾತ್ರಿ, ಹಕ್ಕು ಪತ್ರ ಮತ್ತು ಕ್ರಯಪತ್ರಗಳ ತ್ವರಿತ ನೋಂದಣಿಗಳ ಬಗ್ಗೆ ಉಲ್ಲೇಖವಿರಲಿ ಪ್ರಸ್ತಾಪ ಕೂಡ ಆಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ವಸತಿ ಇಲಾಖೆಯ ಅಡಿಯಲ್ಲಿ 6ನೇ ಗ್ಯಾರಂಟಿಯಾಗಿ ಪ್ರಧಾನ ಮಂತ್ರಿ ಅವಾಸ್ ಯೋಜನೆ ಫಲಾನುಭವಿ ವಂತಿಕೆಯನ್ನು ಪೂರ್ಣವಾಗಿ ಭರಿಸಲು ತೀರ್ಮಾನಿಸಿದ್ದು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ 1,18,359 ಮನೆಗಳ ನಿರ್ಮಾಣದ ಗುರಿ ಹೊಂದಿದ್ದು, ಶೀಘ್ರವಾಗಿ 48,796 ಮನೆಗಳನ್ನು ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರಿಸುವುದಾಗಿ ಹೇಳಲಾಗಿದೆ. ಅಲ್ಲದೇ ಫಲಾನುಭವಿ ವಂತಿಕೆಯನ್ನು 1ಲಕ್ಷಕ್ಕೆ ಏರಿಕೆ ಮಾಡಿರುವುದು, ರಾಜ್ಯ ಕೊಳಗೇರಿ ಜನರ ಸರ್ವತೋಮುಖ ಅಭಿವೃದ್ಧಿಗೆ ಸರಿಸುಮಾರು 1 ಸಾವಿರ ಕೋಟಿ ಬೇಕಾಗುತ್ತದೆ” ಎಂದು ಹೇಳಿದರು.

Advertisements

“ರಾಜ್ಯದ ಆಯವ್ಯಯದಲ್ಲಿ ನಗರಗಳ ಜೀವನಾಡಿಯಾಗಿ ಕೊಳಗೇರಿಗಳಲ್ಲಿ ವಾಸ ಮಾಡುತ್ತಿರುವ ಜನಗಳಿಗೆ ಹಾಗೂ ಕೊಳಗೇರಿ ಪ್ರದೇಶಗಳ ಮೂಲ ಸೌಕರ್ಯನ್ನೊಳಗೊಂಡ ಅಭಿವೃದ್ಧಿಗೆ, ಕೊಳಗೇರಿ ನಿವಾಸಿಗಳಿಗೆ ಸೂಕ್ತ ಕ್ರಮಗಳನ್ನು ಕೈಗೊಂಡು ಶೀಘ್ರವೇ ಅನುದಾನ ತೆಗೆದಿರಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಎಂಪಿಎಂ ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು: ಸಚಿವ ಮಧು ಬಂಗಾರಪ್ಪ

ಪ್ರಧಾನ ಕಾರ್ಯದರ್ಶಿ ಜಿ ಎಚ್ ರೇಣುಕಾ ಯಲ್ಲಮ್ಮ ಮಾತನಾಡಿ, “ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಉಪ ಹಂಚಿಕೆ ಅಡಿಯಲ್ಲಿ 39,000 ಕೋಟಿ ನಿಗದಿ ಮಾಡಿದ್ದು, ಇದು ನೇರವಾಗಿ ಕೈ ಸೇರಬೇಕಿದೆ. ಅಧಿಕಾರಿಗಳ ಜಾತಿ ತಾರತಮ್ಯ, ಬೇಜವಾಬ್ದಾರಿ ಮನೋಧೋರಣೆಯಿಂದಾಗಿ ಪ್ರತಿ ವರ್ಷ ಖರ್ಚಾಗಾದೆ ಉಳಿಕೆ ಆಗುತ್ತಿರುವ ಅನುದಾನದ ಬಳಕೆಯ ಬಗ್ಗೆ ಸರ್ಕಾರ ಗಮನ ವಹಿಸಬೇಕು. ಅಂತಹ ಅಧಿಕಾರಿಗಳ ಮೇಲೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯಿದೆಯ ಸೆಕ್ಷನ್ 24ರ ಕರ್ತವ್ಯ ಲೋಪದಡಿಯಲ್ಲಿ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಸಮಿತಿಯ ಅಧ್ಯಕ್ಷ ಎಂ ಶಬೀರ್‌ ಸಾಬ್, ಮಂಜುಳಾ, ಮಹಮ್ಮದ್ ಯೂಸುಫ್, ಮೆಹಬೂಬ್ ಸಾಬ್‌, ಜಂಶಿದಾಬಾನು ಸೇರಿದಂತೆ ಇತರ ಸದಸ್ಯರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X