ದಾವಣಗೆರೆ | ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಎರಡನೇ ತಾಯಂದಿರು: ಶಾಸಕ ಕೆ ಎಸ್ ಬಸವಂತಪ್ಪ

Date:

ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಲಾಲನೆ, ಪಾಲನೆ, ಅಕ್ಷರಾಭ್ಯಾಸ ಸೇರಿದಂತೆ ಎಲ್ಲ ರೀತಿಯ ಪೋಷಣೆಗಳನ್ನು ಮಾಡುತ್ತಾರೆ. ಹಾಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಎರಡನೇ ತಾಯಿಯ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ ಶ್ಲಾಘಿಸಿದರು.

- Advertisement -

ದಾವಣಗೆರೆ ನಗರದ ಪಾಲಿಕೆ ಆವರಣದಲ್ಲಿ ರಾಧಮ್ಮ ರಂಗಪ್ಪ ಬಯಲು ರಂಗಮಂದಿರದಲ್ಲಿ ಎಚ್ ಕೆ ರಾಮಚಂದ್ರಪ್ಪ ಬಣದ ಅಂಗನವಾಡಿ ಕಾರ್ಯಕರ್ತೆಯರ ನೂತನ ಸಂಘಟನೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು “ಸಮಾಜಕ್ಕೆ ಸಂಘಟನೆಯ ಧ್ಯೇಯ, ಉದ್ದೇಶಗಳು ಮುಖ್ಯವಾಗುತ್ತದೆ. ಸಂಘಟನೆ ಜನಪರವಾಗಿರಬೇಕು ಮತ್ತು ನೊಂದಿರುವವರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಸಮಾಜಕ್ಕೆ ಅಂತಹ ಸಂಘಟನೆಗಳ ಅಗತ್ಯವಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಅಂಗನವಾಡಿ ಕಾರ್ಯಕರ್ತೆಯರು ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಹಲವಾರು ಸರ್ಕಾರಗಳು ಭರವಸೆಗಳನ್ನು ನೀಡಿ ಹೋಗಿವೆ. ಕಾರ್ಮಿಕ ಕಾಯ್ದೆ ಅನ್ವಯ ಕನಿಷ್ಠ ವೇತನವೇ ₹17,500 ವೇತನವಿದೆ. ಆ ಕನಿಷ್ಠ ವೇತನವೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗುತ್ತಿಲ್ಲ. ಯಾವುದೇ ಸರ್ಕಾರಗಳಿರಲಿ ಕನಿಷ್ಠ ವೇತನ ವಿಚಾರವಾಗಿ ನಾನು ಮುಂದಿನ ದಿನಗಳಲ್ಲಿ ನಿಮ್ಮ ಪರವಾಗಿ ನಿಲ್ಲುತ್ತೇನೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ಜಾರಿಗೆ ನಾನು ಸರ್ಕಾರದ ಗಮನಸೆಳೆಯಲು ಪ್ರಯತ್ನಿಸುತ್ತೇನೆ” ಎಂದು ಭರವಸೆ ನೀಡಿದರು.

“ನೀವು ಮಕ್ಕಳಿಗೆ ಎರಡನೇ ತಾಯಂದಿರಿದ್ದ ಹಾಗೆ. ಮಗುವಿನ ತಾಯಿ ಮಕ್ಕಳಿಗೆ ಯಾವ ರೀತಿ ಪೋಷಣೆ ಮಾಡುತ್ತಾಳೋ, ಅದೇ ರೀತಿ ಇಡೀ ದಿನ ಮಕ್ಕಳನ್ನು ನಿಮ್ಮೊಟ್ಟಿಗೆ ಇಟ್ಟುಕೊಂಡು ಆ ಎಲ್ಲ ರೀತಿಯ ಆರೈಕೆ, ಪೋಷಣೆ ಮಾಡುತ್ತೀರಿ. ಮುಂದೆ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹೆಮ್ಮರವಾಗಿ ಬೆಳೆದು ಕೆಲಸ ಮಾಡುವ ಸಣ್ಣ ಸಣ್ಣ ಮಕ್ಕಳು ನಿಮ್ಮ ಕೈಯಲ್ಲಿ ಬೆಳೆಯುತ್ತಾರೆ. ಆ ಮಕ್ಕಳು ದೇವರು ಇದ್ದಂತೆ. ಅವರುಗಳನ್ನು ಸುರಕ್ಷಿತವಾಗಿ ನೋಡಿಕೊಳ್ಳುವ, ಆರೈಕೆ ಮಾಡುವ ಹೊಣೆ ಅಂಗನವಾಡಿ ಕಾರ್ಯಕರ್ತೆಯರ ಮಹತ್ವದ ಕೆಲಸ” ಎಂದು ಪ್ರಶಂಸೆ ವ್ಯಕ್ತಪಡಿಸಿ ಸಂಘಟನೆಗೆ ಶುಭ ಕೋರಿದರು.

ರೈತ ಮತ್ತು ಕಾರ್ಮಿಕ ರಾಜ್ಯ ಮುಖಂಡ ಎಂ ಗೋಪಾಲ್ ಮಾತನಾಡಿ, “ಅಂಗನವಾಡಿ ಕಾರ್ಯಕರ್ತೆಯರು 1975ರಲ್ಲಿ ₹3 ವೇತನದಿಂದ ಕಾರ್ಯನಿರ್ವಹಿಸುತ್ತ ಬಂದಿದ್ದಾರೆ. ಎಂದೂ ಕೂಡ ಅವರಿಗೆ ಸರಿಯಾದ ವೇತನ ಸೌಲಭ್ಯಗಳು ದೊರಕುತ್ತಿಲ್ಲ. ಅವರಿಗೆ ಸೌಲಭ್ಯಗಳು ದೊರಕಬೇಕಾದರೆ ಸಂಘಟನೆ ಮತ್ತು ಹೋರಾಟಗಳಿಂದ ಮಾತ್ರ ಸಾಧ್ಯ. 1975ರಲ್ಲಿ ಇಂದಿರಾಗಾಂಧಿಯವರು ಅಂಗನವಾಡಿ ವ್ಯವಸ್ಥೆ ಪ್ರಾರಂಭಿಸಿದಾಗ ಒಂದು ಸದೃಢ ಸಮಾಜ ಕಟ್ಟುವ ಮಕ್ಕಳಿಗೆ ತಾಯಿಯ ಗರ್ಭದಿಂದಲೇ ಪೋಷಕಾಂಶಗಳ ಆರೈಕೆ ನೀಡುವ ಉನ್ನತ ಧ್ಯೇಯೋದ್ದೇಶದೊಂದಿಗೆ ಅಂಗನವಾಡಿಗಳನ್ನು ಹೆಗ್ಡೆ ಪ್ರಾರಂಭಿಸಿದ್ದಾರೆ. ಇಂಥ ಮಹತ್ವದ ಯೋಜನೆಯಲ್ಲಿ ಕೆಲಸ ಮಾಡುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸರಿಯಾದ ಸೌಲಭ್ಯಗಳು ದೊರಕಬೇಕಿದೆ. ಸರ್ಕಾರಗಳು ಈ ಬಗ್ಗೆ ಗಮನ ಹರಿಸಬೇಕು” ಎಂದು ಒತ್ತಾಯಿಸಿದರು.

ಸಂಘಟನೆಯ ವಿಶಾಲಾಕ್ಷಮ್ಮ ಪ್ರಾಸ್ತಾವಿಕವಾಗಿ ಮಾತನಾಡಿ, “ನಾವು 40 ವರ್ಷಗಳಿಂದಲೂ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯನ್ನು ಸಕ್ರಿಯವಾಗಿ ಮಾಡಿಕೊಂಡು ಬಂದಿದ್ದೇವೆ. ಇತ್ತೀಚೆಗೆ ಪಕ್ಷದ ಕೆಲವರಿಂದ ಸಂಘಟನೆಯಲ್ಲಿ ಒಡಕುಂಟಾದ ಕಾರಣ ಅಲ್ಲಿರುವುದು ಸೂಕ್ತವಲ್ಲ ಎನಿಸಿ ಹೊಸ ಸಂಘಟನೆ ಕಟ್ಟುತ್ತಿದ್ದೇವೆ. ಇದಕ್ಕೆ ಕಮ್ಯುನಿಸ್ಟ್ ನಾಯಕ ರಾಮಚಂದ್ರಪ್ಪನವರ ಹೆಸರಿಟ್ಟು ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ಕಾರಣ ಮೊಟ್ಟಮೊದಲು ಎಚ್ ಕೆ ರಾಮಚಂದ್ರಪ್ಪನವರ ಮುಂದಾಳತ್ವದಲ್ಲಿ ಸಂಘಟನೆ ಪ್ರಾರಂಭವಾಗಿದ್ದು, ಅವರು ನಮಗೆ ಮಾರ್ಗದರ್ಶಕರು ಮತ್ತು ದಾರಿದೀಪವಾಗಿದ್ದರು. ಸಂಘಟನೆಗೆ ಕೆಲಸ ಮಾಡುವಲ್ಲಿ ಆದರ್ಶಪ್ರಾಯರಾಗಿದ್ದರು. ಹಾಗಾಗಿ ಅವರ ಹೆಸರಿನಲ್ಲಿ ಎಚ್ ಕೆ ಆರ್ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ ಪ್ರಾರಂಭಿಸಿದ್ದೇವೆ” ಎಂದು ತಿಳಿಸಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಮಿತ್ ಶಾ ರಾಜೀನಾಮೆಗೆ ಮುಸ್ಲಿಂ ಒಕ್ಕೂಟ ಆಗ್ರಹ

ಗುರುವಾರ ನಿಧನ ಹೊಂದಿದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಕಾರ್ಯಕ್ರಮದಲ್ಲಿ ಮೌನಾಚಾರಣೆ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಲ್ ಹೆಚ್ ಅರುಣಕುಮಾರ್, ಸಾಹಿತಿ, ಪ್ರಗತಿಪರ ಚಿಂತಕ ಬಿ ಎನ್ ಮಲ್ಲೇಶ್, ವಕೀಲ ಎ ವೈ ಕೃಷ್ಣಮೂರ್ತಿ, ಸಂಘಟನೆ ಮುಖ್ಯಸ್ಥೆಯರಾದ ಡಿ ಎಂ ರೇಣುಕ, ವೀಣಾ, ವಿಶಾಲಾಕ್ಷಿ ಮೃತ್ಯುಂಜಯ, ಉಮಾ ಜೆ ಎಂ, ಕಾಳಮ್ಮ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...