ದಾವಣಗೆರೆ | ಅಂಜಲಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಅಗ್ರಹ

Date:

ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗೇರಳನ್ನು ಮನೆಗೆ ನುಗ್ಗಿ ಕೊಲೆಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಗಂಗಾಮತ ಸಮಾಜದ ಮುಖಂಡ ಹೆಚ್.ಕೆ ವೆಂಕಟೇಶ್ ಆಗ್ರಹಿಸಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಗಂಗಾಮತ ಸಮಾಜ, ಬೆಸ್ತರ ಚಾರಿಟಬಲ್ ಟ್ರಸ್ಟ್, ಸ್ವಾಮಿ ವಿವೇಕಾನಂದ-ಭಗತ್‌ಸಿಂಗ್‌ ಚಾರಿಟಬಲ್‌ ಟ್ರಸ್ಟ್ ಹಾಗೂ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಉಪ ತಹಶೀಲ್ದಾರ್ ಸುರೇಶ್‌ ನಾಯ್ಕ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಆರೋಪಿ ಗಿರೀಶ್ ಸಾವಂತ್ ಎಂಬಾನಿಗೆ ಕಾನೂನಿನ ಅಡಿಯಲ್ಲಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

“ರಾಜ್ಯ ಸರ್ಕಾರ ನೊಂದ ಕುಟಂಬಕ್ಕೆ ಪರಿಹಾರ ನೀಡಬೇಕು. ಹೆಣ್ಣು ಮಕ್ಕಳ ಮೇಲೆ ಕೊಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗಂಗಾಮತ ಸಮಾಜದ ತಾಲ್ಲೂಕು ಘಟಕದ ಸಂಚಾಲಕ ಕೆ.ದೇವೇಂದ್ರಪ್ಪ ಮಾತನಾಡಿ, “ಅಂಜಲಿ ಕುಟುಂಬಕ್ಕೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ಸಮಾಜದ ಬಾಂಧವರಿಂದ ಹಣ ಸಂಗ್ರಹಿಸಿ ನೊಂದ ಕುಟುಂಭಕ್ಕೆ ಕೊಡುವುದಾಗಿ ಗಂಗಾಮತ ಸಮಾಜದ ಸ್ವಾಮೀಜಿ ಹೇಳಿದ್ದಾರೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಗಂಗಾಮತ ಸಮಾಜದಿಂದ ಪರಿಹಾರ ನೀಡುತ್ತೇವೆ” ಎಂದರು.

ಬಿಜೆಪಿ ಮುಖಂಡ ಎಂ.ಆರ್. ಮಹೇಶ್ ಮಾತನಾಡಿ, “ರಾಜ್ಯದಲ್ಲಿ ಗಾಂಜಾ ಆಫಿಮು ಸೇವನೆಯಿಂದ ಯುವ ಸಮೂಹ ಹಾಳಾಗುತ್ತಿದೆ. ಹುಬ್ಬಳಿಯ ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗರ ಹತ್ಯೆ ಕೊಲೆ ಪ್ರಕರಣಗಳು ನಡೆದಿದ್ದು ಸರ್ಕಾರ ಕಾನೂನು ಪರಿಪಾಲನೆಯಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಎ.ಬಿ. ಹನುಮಂತಪ್ಪ, ಕೆ.ವಿ.ಚನ್ನಪ್ಪ, ಗಂಗಾಮತ ಸಮಾಜದ ತಾಲ್ಲೂಕು ಗೌರವಾಧ್ಯಕ್ಷ ಕೆ.ರಾಜಪ್ಪ, ಉಪಾಧ್ಯಕ್ಷ ಜೆ.ಹಳದಪ್ಪ, ಕಾರ್ಯಧರ್ಶಿ ಚೀಲೂರು ಲೋಕೇಶ್, ಪದಾಧಿಕಾರಿಗಳಾದ ನರಸಿಂಹಪ್ಪ, ಮಲ್ಲಿಕಾರ್ಜುನ್, ಶಿವಪ್ಪ, ಹೆಚ್.ಚನ್ನೇಶ್ ಸೇರಿದಂತೆ ಇತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು...

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...